Categories
ಅಪರಾಧ

ಪೆಟ್ರೋಲ್‌ ತುಂಬಿಸಿಕೊಂಡು ಪರಾರಿ

ಕಾರ್ಕಳ: ಕಾರ್ಕಳ ತಾಲೂಕು ಜಂಕ್ಷನ್ ಬಳಿಯ ಪೆಟ್ರೋಲ್ ಬಂಕ್‌ವೊಂದರಲ್ಲಿ ಟ್ಯಾಂಕ್ ತುಂಬ ಪೆಟ್ರೋಲ್ ತುಂಬಿಸಿಕೊಂಡು ಹಣ ನೀಡಿದೇ ವಾಹನದೊಂದಿಗೆ ಪರಾರಿಯಾದ ಘಟನೆ ನಸುಕಿನ ಜಾವದಲ್ಲಿ ನಡೆದಿದೆ.ಕಾರ್ಕಳದ ‘ಅನು ಪ್ಯೂಯೆಲ್ ಪಂಪ್” ದಿನದ 24 ಘಂಟೆ ಕಾರ್ಯ ನಿರ್ವಹಿಸುತ್ತಿದೆ. ಇದನ್ನು ದುರುಪಯೋಗ ಮಾಡಿದ ವ್ಯಕ್ತಿಯೊಬ್ಬ ಬೆಳಗ್ಗಿನ ಜಾವ 2.50 ಕ್ಕೆ ಕಾರಿನಲ್ಲಿ ಬಂದು ಫುಲ್ ಟ್ಯಾಂಕ್ ಪೆಟ್ರೋಲ್ ತುಂಬಿಸುವಂತೆ ಹೇಳಿದ್ದಾನೆ. ಗ್ರಾಹಕನ ಸೂಚನೆಯಂತೆ 4253.88 ಮೊತ್ತದಷ್ಟು ಟ್ಯಾಂಕ್ ಪೂರ್ತಿ ಪೆಟ್ರೋಲ್ ತುಂಬಿಸಿ ಟ್ಯಾಂಕ್‌ನಿಂದ ಪೈಪ್‌ ಬೇರ್ಪಡಿಸುತ್ತಿದ್ದಾಗ ಕಾರಿನವ ಪರಾರಿಯಾಗಿದ್ದಾನೆ ವಾಹನವು ಬೈಲೂರು-ಉಡುಪಿ ರಸ್ತೆಯಲ್ಲಿ ಹೋಗಿದ್ದು. ವಂಚಕ ಗ್ರಾಹಕ ತುಳುವಿನಲ್ಲಿ ಮಾತನಾಡುತ್ತಿದ್ದ. ಗ್ಯಾರೇಜ್ ಎಲ್ಲಿಯಾದರೂ ಓಪನ್ ಇದೆಯಾ ಅಂತ ಮೊದಲಾಗಿ ಪೆಟ್ರೋಲ್ ಬಂಕ್ ಸಿಬ್ಬಂದಿಯಲ್ಲಿ ವಿಚಾರಿಸಿ ನಂತರ ಮಂಕುಬೂದಿ ಎರಚಿದ್ದಾನೆ ವಾಹನದ ಕುರಿತು ಮಾಹಿತಿ ಲಭಿಸಿದರೆ, 9964070507 ಮೊಬೈಲ್ ಸಂಖ್ಯೆಗೆ ಕರೆಯನ್ನು ಮಾಡಿ ತಿಳಿಸಿ ಇಲ್ಲದಿದ್ದರೆ ಪೊಲೀಸರ ಗಮನಕ್ಕೆ ತರುವಂತೆ ಪೆಟ್ರೋಲ್ ಬಂಕ್ ಮಾಲಕ ಮಿಯ್ಯಾರು ರೋಹಿತ್ ತಿಳಿಸಿದ್ದಾರೆ. ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Categories
ಕರಾವಳಿ ಸುದ್ದಿ

ಇಂದು ನಾಳೆ ಕುಂದಾಪುರ ಸಾಹಿತ್ಯ ಸಮ್ಮೇಳನ

ಕುಂದಾಪುರ: ಕನ್ನಡ ಸಾಹಿತ್ಯ ಪರಿಷತ್ತು ಕುಂದಾಪುರತಾಲೂಕು ಘಟಕದ 19ನೇ ಕನ್ನಡ ಸಾಹಿತ್ಯ ಸಮ್ಮೇಳನ ‘ತಾರ್ಕಣಿ’ ಬಿಟ್ಕಲ್‌ಕಟ್ಟೆಯ ಕೆ.ಪಿಎಸ್ ಸಭಾಂಗಣದ ಮೊಳಹಳ್ಳಿ ಶಿವರಾವ್ ವೇದಿಕೆಯಲ್ಲಿಇಂದು ಮತ್ತು ನಾಳೆ ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ ಕುಂದಾಪುರ ತಾಲೂಕು ಘಟಕದ ಅಧ್ಯಕ್ಷ ಡಾ.ಉಮೇಶ ಪುತ್ರನ್ ಹೇಳಿದರು.ಅವರು ಶುಕ್ರವಾರ ಕುಂದಾಪುರ ಪ್ರೆಸ್‌ ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಆ.31 ಶನಿವಾರ ಸಂಜೆ 4.30ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆ ನಡೆಯಲಿದೆ. ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಮೋಹನ ಆಳ್ವ ಉದ್ಘಾಟನೆ ನೆರವೇರಿಸಲಿದ್ದಾರೆ. 5.30ರಿಂದ ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ವಿದ್ಯಾರ್ಥಿಗಳಿಂದ ವೈದೇಹಿ ರಚಿಸಿದ ನಾಟಕ ‘ನಾಯಿಮರಿ’ಪ್ರದರ್ಶನಗೊಳ್ಳಲಿದೆ ಎಂದರು. ಸೆ.1ರಂದು ಬೆಳಿಗ್ಗೆ ರಾಷ್ಟ್ರ ಧ್ವಜಾರೋಹಣವನ್ನು ಮೊಳಹಳ್ಳಿ ಗ್ರಾ.ಪಂ ಅಧ್ಯಕ್ಷ ಎಂ.ಚಂದ್ರಶೇಖರ ಶೆಟ್ಟಿ ನೆರವೇರಿಸಲಿದ್ದಾರೆ. ಪರಿಷತ್ತು ಧ್ವಜಾರೋಹಣವನ್ನು ಕಸಾಪ ಕುಂದಾಪುರ ಘಟಕದ ಅಧ್ಯಕ್ಷ ಡಾ.ಉಮೇಶ ಪುತ್ರನ್‌ ನೆರವೇರಿಸಲಿದ್ದಾರೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಸ್ವಾಗತ ಸಮಿತಿ ಪದಾಧಿ ಕಾರಿಗಳು ಉಪಸ್ಥಿತರಿದ್ದರು.

Categories
ಕರಾವಳಿ ಸುದ್ದಿ

ಬೈಂದೂರಿನಲ್ಲಿ ಇಂದು ಬೃಹತ್‌ ಉದ್ಯೋಗ ಮೇಳ

ಬೈಂದೂರು : ಬೈಂದೂರು ಕ್ಷೇತ್ರದ ವಿದ್ಯಾವಂತರಿಗೆ ವಿದೇಶಿ ನೆಲದಲ್ಲಿ ಉದ್ಯೋಗ ನೀಡುವ ಗುರಿಯೊಂದಿಗೆ ಕೇಂದ್ರ ಸರಕಾರದ ಎನ್‌.ಎಸ್‌.ಡಿ ಸಿ ಯೋಜನೆಯಡಿಯಲ್ಲಿ ಅಜಿನೋರ್‌ ಪ್ರಾಯೋಜಕತ್ವದಲ್ಲಿ ದೇಶದಲ್ಲೇ ದ್ವಿತೀಯ ಭಾರಿಗೆ ಬೈಂದೂರಿನಲ್ಲಿ ಇಂದು ಬೃಹತ್‌ ಉದ್ಯೋಗ ಮೇಳ ಆಯೋಜಿಸಲಾಗಿದೆ

ಸಮೃದ್ದ ಬೈಂದೂರಿನ ಪರಿಕಲ್ಪನೆಯಡಿಯಲ್ಲಿ ರಾಜ್ಯದಲ್ಲಿ ಪ್ರಥಮ ಬಾರಿಗೆ ವಿದೇಶದಲ್ಲಿ ಉದ್ಯೋಗದ ಅವಕಾಶ ಒದಗಿಸುವ ಸಲುವಾಗಿ ಇಂದು ಶನಿವಾರ ಬೈಂದೂರಿನ ಜೆ.ಎನ್.ಆರ್. ಆಡಿಟೋರಿಯಂನಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದ್ದು, ಈಗಾಗಲೇ ಸುಮಾರು 10 ಸಾವಿರ ಮಂದಿ ಅಭ್ಯರ್ಥಿಗಳು ಭಾಗವಹಿಸುವ ನಿರೀಕ್ಷೆ ಇದೆ ಎಂದು ಶಾಸಕ ಗುರರಾಜ್ ಗಂಟಿಹೊಳೆ ತಿಳಿಸಿದ್ದಾರೆ

ಇಂದು ಬೆಳಿಗ್ಗೆ 9.00 ಗಂಟೆಗೆ ನಡೆಯುವ ಉದ್ಯೋಗ ಮೇಳದ ಉದ್ಘಾಟನಾ ಸಮಾರಂಭವನ್ನು ಸಂಸದ ಬಿ ವೈ ರಾಘವೇಂದ್ರ ಉದ್ಘಾಟಿಸಲಿದ್ದು ಶಾಸಕ ಗುರುರಾಜ್‌ ಗಂಟಿಹೊಳೆಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು ಮುಖ್ಯ ಅತಿಥಿಗಳಾಗಿ ಸಂಸದ ಕ್ಯಾ.ಬೃಜೇಶ್‌ ಚೌಟ ಸಂಸದ ಶ್ರೀನಿವಾಸ ಪೂಜಾರಿ ಶಾಸಕ ಕಿರಣ್‌ ಕುಮಾರ್‌ ಕೊಡ್ಗಿ ಸಿ ಎಂ ಸಿಂಗ್‌ ಆಜಿ ಮ್ಯಾಥ್ಯೂ ಹಾಗೂ ಬೈಂದೂರು ಸಮೃದ್ಧ ಜನಸೇವಾ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ಬಿ.ಎಸ್.ಸುರೇಶ ಶೆಟ್ಟಿ ಭಾಗವಹಿಸಲಿದ್ದಾರೆ

ಇಂದಿನ ಅಂತಾರಾಷ್ಟ್ರೀಯ ಉದ್ಯೋಗ ಮೇಳದಲ್ಲಿ ಜಪಾನ್, ಮಲೇಶಿಯಾ, ಜರ್ಮನಿ, ಕ್ರೋವೇಶಿಯ, ಗಲ್ಫ್ ದೇಶಗಳ ಕಂಪೆನಿಗಳು ಭಾಗವಹಿಸಲಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಉಚಿತ ತರಬೇತಿ, ವಸತಿ ವ್ಯವಸ್ಥೆ ಊಟ ಉಪಾಹಾರ, ವೀಸಾ ಹಾಗೂ ಉಚಿತ ವಿಮಾನ ಟಿಕೆಟ್ ಕೇಂದ್ರ ಸರಕಾರದಿಂದ ದೊರೆಯಲಿದೆ ಎಂದು ಬೈಂದೂರು ಶಾಸಕರ ಕಚೇರಿಯ ಪ್ರಕಟಣೆ ತಿಳಿಸಿದೆ

Categories
ಕರಾವಳಿ ಸುದ್ದಿ

ಪೊಲೀಸ್‌ ಡಾಗ್‌ ಐಕಾನ್‌ ನಿವೃತ್ತಿ

ಉಡುಪಿ : ಉಡುಪಿ ಜಿಲ್ಲೆಯ ಪೊಲೀಸ್ ಶ್ವಾನದಳದಲ್ಲಿ ಕಳೆದ 10 ವರ್ಷಗಳಿಂದ ಅತ್ಯಂತ ಯಶಸ್ವಿಯಾಗಿ ಸೇವೆ ಸಲ್ಲಿಸಿದ ಶ್ವಾನ ‘ಐಕಾನ್’ ನಿವೃತ್ತಿ ಹೊಂದಿದ್ದು ಅದನ್ನು ಜಿಲ್ಲಾ ಪೊಲೀಸ್ ವತಿಯಿಂದ ಗೌರವಿಸಿ ಅಧಿಕೃತವಾಗಿ ಕರ್ತವ್ಯದಿಂದ ಬಿಡುಗಡೆಗೊಳಿಸಲಾಯಿತು.

ಲ್ಯಾಬ್ರಡಾರ್ ರಿಟ್ರೇವರ್ ತಳಿಯ ಈ ಶ್ವಾನವು 2014ರ ಆ.5ರಂದು ಜನಿಸಿದ್ದು, ನ.5ರಂದು ಶ್ವಾನದಳ ವಿಭಾಗಕ್ಕೆ ಸೇರ್ಪಡೆಗೊಂಡಿತು. ಅದಕ್ಕೆ ಐಕಾನ್ ಎಂದು ಹೆಸರಿಡಲಾಗಿತ್ತು. ನಂತರ ಸಿ.ಎ.ಆರ್.ಸೌತ್ ಆಡುಗೋಡಿಯಲ್ಲಿ ಸ್ಫೋಟಕ ಪತ್ತೆ ಬಗ್ಗೆ 9 ತಿಂಗಳು ಕಠಿಣ ತರಬೇತಿಯನ್ನು ನೀಡಲಾಗಿತ್ತು. ಪೊಲೀಸ್ ಸಿಬ್ಬಂದಿ ಗಣೇಶ ಎಂ. ಅವರು ಐಕಾನ್‌ಗೆ ಹ್ಯಾಂಡ್ಲರ್ ಆಗಿ ಕರ್ತವ್ಯ ನಿರ್ವಹಿಸಿದ್ದರು.

ಸ್ಪೋಟಕ ಪತ್ತೆಯಲ್ಲಿ ವಿಶೇಷವಾಗಿ ಕಾರ್ಯನಿರ್ವಹಿಸುತ್ತಿದ್ದ ಐಕಾನ್, ತನ್ನ 10 ವರ್ಷಗಳ ಕರ್ತವ್ಯದ ಸಂದರ್ಭದಲ್ಲಿ ಜಿಲ್ಲೆ ಹಾಗೂ ಹೊರ ಜಿಲ್ಲೆಗಳಲ್ಲಿ ಸುಮಾರು 417ಕ್ಕಿಂತ ಅಧಿಕ ವಿಶೇಷ ಕರ್ತವ್ಯ ನಿರ್ವಹಿಸಿದೆ. ಬೆಂಗಳೂರಿಗೆ ರಾಷ್ಟ್ರಪತಿ, ಪ್ರಧಾನ ಮಂತ್ರಿ, ಮುಖ್ಯಮಂತ್ರಿ, ವಿದೇಶಿ ಗಣ್ಯರು ಆಗಮನದ ಸಂದರ್ಭದಲ್ಲಿ ಹಾಗೂ ಏರ್ ಶೋ, ಜಿ- 20 ಶೃಂಗಸಭೆ, ದತ್ತ ಜಯಂತಿ ಮತ್ತು ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಪಂದ್ಯಾವಳಿ, ಸಾಗರ ಕವಚ ಸಂದರ್ಭದಲ್ಲಿ ಕರ್ತವ್ಯ ನಿರ್ವಹಿಸಿತ್ತು

ಅಲ್ಲದೇ ಮಲ್ಪೆ ಬಂದರು, ಕಾಪು ಲೈಟ್ ಹೌಸ್, ಮಣಿಪಾಲ ಯೂನಿವರ್ಸಿಟಿ, ರೈಲ್ವೇ ನಿಲ್ದಾಣ, ಮೈಸೂರು ದಸರಾ, ನ್ಯಾಷನಲ್ ನಾರ್ಕೋಟಿಕ್ಸ್ ಕಾನ್ವರೆನ್ಸ್, ಬ್ರಹ್ಮಾವರದಲ್ಲಿ ಕಚ್ಚಾ ಬಾಂಬ್ ಪತ್ತೆ ಇತ್ಯಾದಿ ಸಂದರ್ಭಗಳಲ್ಲಿ ಸ್ಪೋಟಕ ಪತ್ತೆ ಕಾರ್ಯದಲ್ಲಿ ಯಾವುದೇ ವಿಧ್ವಂಸಕ ಕೃತ್ಯ ನಡೆಯದಂತೆ ಯಶಸ್ವಿಯಾಗಿ ಕರ್ತವ್ಯ ನಿರ್ವಹಿಸಿದೆ.

2020ರ ಫೆ.22ರಂದು ರಾಜ್ಯಮಟ್ಟದ ಪೊಲೀಸ್ ಕರ್ತವ್ಯ ಕೂಟದಲ್ಲಿ ಬೆಳ್ಳಿಯ ಪದಕ ಪಡೆದು, ಉಡುಪಿ ಜಿಲ್ಲೆಗೆ ಹಾಗೂ ಪೊಲೀಸ್ ಇಲಾಖೆಗೆ ಗೌರವವನ್ನು ತಂದು ಕೊಟ್ಟಿತ್ತು.

ಕರ್ತವ್ಯ ಬಿಡುಗಡೆ ಕಾರ್ಯಕ್ರಮದಲ್ಲಿ ಎಸ್ಪಿ ಡಾ.ಅರುಣ್ ಕೆ., ಎಎಸ್ಪಿ ಪರಮೇಶ್ವರ ಹೆಗಡೆ, ಉಡುಪಿ .ಡಿವೈಎಸ್ಪಿ ಪ್ರಭು ಡಿ.ಟಿ. ಮತ್ತು ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆಯ ಎಎಸ್ಪಿ ತಿಮ್ಮಪ್ಪ ಗೌಡ ಜಿ., ಇನ್ಸ್‌ಪೆಕ್ಟರ್‌ಎಸ್. ರವಿಕುಮಾ‌ರ್ ಉಪಸ್ಥಿತರಿದ್ದರು.

Categories
ರಾಜ್ಯ ಸುದ್ದಿ

ಮುಡಾ ಆರೋಪಿಗೆ ಕುಲಸಚಿವ ಹುದ್ದೆ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ ನಿವೇಶನ ಹಂಚಿಕೆಯ ಬಹುಕೋಟಿ ಹಗರಣದಲ್ಲಿ ಆರೋಪ ಎದುರಿಸುತ್ತಿರುವ ಮುಡಾ ಮಾಜಿ ಆಯುಕ್ತ ದಿನೇಶ್ ಕುಮಾರ್ ಅವರನ್ನು ಕುಲಸಚಿವರಾಗಿ ವರ್ಗಾವಣೆ ಮಾಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಕ್ರಮದ ವಿರುದ್ಧ ಮೈಸೂರಿನ ಕೆ.ಆರ್. ಕ್ಷೇತ್ರದ ಬಿಜೆಪಿ ಶಾಸಕ ಟಿ.ಎಸ್. ಶ್ರೀವತ್ಸ ಕಿಡಿಕಾರಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೊಂದು ದುರಂತ ಸರ್ಕಾರ ಭ್ರಷ್ಟಾಚಾರ, ಹಗರಣಗಳ ಆರೋಪ ಎದುರಿಸುತ್ತಿರುವ ಅಧಿಕಾರಿಗಳ ರಕ್ಷಣೆಗೆ ಯಾಕೆ ನಿಂತಿದೆ ಎಂಬುದು ತಿಳಿಯುತ್ತಿಲ್ಲ ಮುಡಾದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಮಾಡಿದ್ದ ಅಧಿಕಾರಿಗೆ ಬಡ್ತಿ ಕೊಟ್ಟು ವರ್ಗಾವಣೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ

Categories
ರಾಜ್ಯ ಸುದ್ದಿ

ಕಾಂಗ್ರೇಸ್‌ : ಇಂದು ರಾಜಭವನ ಚಲೋ

ಬೆಂಗಳೂರು : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಬಿಜೆಪಿ, ಜೆಡಿಎಸ್ ನಾಯಕರ ವಿರುದ್ಧ ಪ್ರಾಸಿಕ್ಯೂಷನ್ ಅರ್ಜಿಗಳಿಗೆ ಅನುಮತಿ ನೀಡುವಂತೆ ಆಗ್ರಹಿಸಿ ಶನಿವಾರ ರಾಜ್ಯ ಕಾಂಗ್ರೆಸ್ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ರಾಜಭವನ ಚಲೋ ನಡೆಸಲಿದ್ದಾರೆ. ಈ ವೇಳೆ ರಾಜ್ಯಪಾಲರ ಪಕ್ಷಪಾತಿ ಧೋರಣೆ ಹಾಗೂ ಕೇಂದ್ರದ ಎನ್‌ಡಿಎ ಸರ್ಕಾರ ಮತ್ತು ಬಿಜೆಪಿಯ ಕೈಗೊಂಬೆಯಾಗಿ ರಾಜ್ಯಪಾಲರು ವರ್ತಿಸುತ್ತಿದ್ದಾರೆಂದು ತೀವ್ರವಾಗಿ ಖಂಡಿಸಲಿದ್ದಾರೆ

ಜತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ದ ಪ್ರಾಸಿಕ್ಯೂಷನ್‌ಗೆ ನೀಡಿರುವ ಅನುಮತಿಯನ್ನು ಪುನ‌ರ್ ಪರಿಶೀಲಿಸುವಂತೆ ಕೋರಲಿದ್ದಾರೆ ಎಂದು ತಿಳಿದುಬಂದಿದೆ.

ಶನಿವಾರ ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ಪ್ರತಿಮೆ ಮುಂಭಾಗದಿಂದ ರಾಜಭವನದವರೆಗೆ ಕಾಲ್ನಡಿಗೆ ಮೂಲಕ ಪ್ರತಿಭಟನಾ ರ್ಯಾಲಿ ನಡೆಸಲಿರುವ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ರಾಜ್ಯಪಾಲರನ್ನು ಭೇಟಿ ಮಾಡಿ, ಪ್ರತಿಪಕ್ಷಗಳ ನಾಯಕರ ಮೇಲಿನ ಪ್ರಾಸಿಕ್ಯೂಷನ್ ಅರ್ಜಿಗಳಿಗೆ ಅನುಮತಿ ನೀಡುವಂತೆ ಮನವಿ ಸಲ್ಲಿಸಲಿದ್ದಾರೆ

Categories
ರಾಷ್ಟ್ರೀಯ ಸುದ್ದಿ

ಭಾರತಕ್ಕೆ ಒಂದೇ ದಿನ 4 ಪದಕ

ಪ್ಯಾರಿಸ್‌ : ಪ್ಯಾರಾಲಿಂಪಿಕ್ಸ್‌ನಲ್ಲಿ ಸಾರ್ವಕಾಲಿಕ ಶ್ರೇಷ್ಠ 25+ ಪದಕಗಳನ್ನು ಗೆಲ್ಲುವ ನಿರೀಕ್ಷೆಯೊಂದಿಗೆ ಪ್ಯಾರಿಸ್‌ ವಿಮಾನವೇರಿದ್ದ ಭಾರತೀಯ ಅಥ್ಲೆಟ್ ಗಳು ಶುಕ್ರವಾರ ಪದಕ ಖಾತೆ ತೆರೆದಿದ್ದಾರೆ. ಒಂದೇ ದಿನ ಭಾರತ ಚಿನ್ನ ಸೇರಿ ಒಟ್ಟು 4 ಪದಕಗಳನ್ನು ಮುಡಿಗೇರಿಸಿಕೊಂಡಿದೆ. ಪ್ಯಾರಿಸ್ ಒಲಿಂಪಿಕ್ಸ್‌ನಂತೆಯೇ ಪ್ಯಾರಾ ಗೇಮ್ಸ್‌ನಲ್ಲೂ ಶೂಟರ್‌ಗಳೇ ಪ್ರಾಬಲ್ಯ ಸಾಧಿಸಿದ್ದು, ಮೂರು ಪದಕಗಳನ್ನು ಗೆದ್ದಿದ್ದಾರೆ. ಉಳಿದಂತೆ ಅಥ್ಲೆಟಿಕ್ಸ್‌ನಲ್ಲೂ ಒಂದು ಪದಕ ಲಭಿಸಿದೆ.

ಟೋಕಿಯೋ ಪ್ಯಾರಾಲಿಂಪಿಕ್ಸ್‌ನಲ್ಲಿ 2 ಪದಕ ಗೆದ್ದಿದ್ದ ಅವನಿ ಲೇಖರಾ ಈ ಬಾರಿ ಭಾರತಕ್ಕೆ ಮೊದಲ ಚಿನ್ನದ ಪದಕ ತಂದುಕೊಟ್ಟರು. ಮಹಿಳೆಯರ 10 ಮೀ. ಏರ್ ರೈಫಲ್ (ಎಸ್ಎಚ್ 1) ವಿಭಾಗದಲ್ಲಿ 22 ವರ್ಷದ ಅವನಿ 249.7 ಅಂಕಗಳನ್ನು ಸಂಪಾದಿಸಿ ಅಗ್ರಸ್ಥಾನ ಪಡೆದರು. ಈ ಮೂಲಕ ಅವರು ಟೋಕಿಯೋದಲ್ಲಿ ನಿರ್ಮಿಸಿದ್ದ 249.6 ಅಂಕಗಳ ತಮ್ಮದೇ ಪ್ಯಾರಾಲಿಂಪಿಕ್ಸ್‌ ದಾಖಲೆಯನ್ನು ಅಳಿಸಿ ಹಾಕಿದರು

Categories
ರಾಷ್ಟ್ರೀಯ ಸುದ್ದಿ

ನರೇಂದ್ರ ಮೋದಿ ಬಹಿರಂಗ ಕ್ಷಮೆಯಾಚನೆ

ಮಹಾರಾಷ್ಟ್ರ :  ಮಹಾರಾಷ್ಟ್ರದ ಸಿಂಧುದುರ್ಗ ಕೋಟೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜ್ ಅವರ ಪ್ರತಿಮೆ ಕುಸಿದುಬಿದ್ದಿದ್ದು ಮಹಾರಾಷ್ಟ್ರ ರಾಜಕಾರಣದಲ್ಲಿ ವಿವಾದದ ಬಿರುಗಾಳಿ ಎಬ್ಬಿಸಿರುವಾಗಲೇ ಪ್ರಧಾನಿ ನರೇಂದ್ರ ಮೋದಿ ಮೌನ ಮುರಿದಿದ್ದು ಬಹಿರಂಗ ಕ್ಷಮೆಯಾಚನೆ ಮಾಡಿದ್ದಾರೆ

ಛತ್ರಪತಿ ಶಿವಾಜಿ ಮಹಾರಾಜ್ ಎಂಬುದು ಕೇವಲ ರಾಜನ ಹೆಸರಲ್ಲ ನಮಗೆ ಅವರು ದೇವರು. ನಾನಿಂದು ಅವರ ಕಾಲಿಗೆ ತಲೆಯಿಟ್ಟು ಕ್ಷಮೆ ಕೇಳುತ್ತೇನೆ’ ಎಂದು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಮಹಾರಾಷ್ಟ್ರ ಪಾರ್ಲ್ಸ ಜಿಲ್ಲೆಯಲ್ಲಿ ನೂತನ ಬಂದರು ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ‘ನಮ್ಮ ಮೌಲ್ಯಗಳು ಬೇರೆ ನನಗೆ ನಮ್ಮ ದೇವರಿಗಿಂತ ದೊಡ್ಡವರು ಯಾರೂ ಇಲ್ಲ. ಶಿವಾಜಿ ನಮಗೆ ದೇವರು. ನಾನು ಇಲ್ಲಿಗೆ ಬಂದಿಳಿದ ತಕ್ಷಣ ಮೊದಲು ಮಾಡಿದ ಕೆಲಸವೇ ಶಿವಾಜಿ ಮಹಾರಾಜರ ಪ್ರತಿಮೆ ಕುಸಿದಿದ್ದಕ್ಕೆ ಕ್ಷಮೆ ಕೇಳಿದ್ದು. ಇದರಿಂದ ನೋವು ಅನುಭವಿಸಿದ ಜನರಲ್ಲೂ ಕ್ಷಮೆ ಕೇಳುತ್ತೇನೆ’ ಎಂದು ಹೇಳಿದರು.

Categories
ಕರಾವಳಿ ಸುದ್ದಿ

ಬಾಳೆಕುದ್ರುಶ್ರೀ ಮಠದ ಶ್ರೀಗಳ ಚಾತುರ್ಮಾಸ್ಯ ಕಾರ್ಯಕ್ರಮ

ಕೋಟ: ಶ್ರೀ ಮಠ ಬಾಳೆಕುದ್ರು,ಹಂಗಾರಕಟ್ಟೆ,ಬ್ರಹ್ಮಾವರ,ಉಡುಪಿ .ಶ್ರೀ ಶ್ರೀ ಶ್ರೀ ನೃಸಿಂಹಾಶ್ರಮ ಸ್ವಾಮೀಜಿಯವರ ಚಾತುರ್ಮಾಸ್ಯ ವೃತ ಬೆಂಗಳೂರಿನ ಶ್ರೀ ರಾಜಾರಾಜೇಶ್ವರಿ ನಗರ ಶ್ರೀ ಜ್ಞಾನಾಕ್ಷಿ ರಾಜಾರಾಜೇಶ್ವರಿ ದೇವಸ್ಥಾನ ಇಲ್ಲಿ ಜರಗುತ್ತಿದ್ದು ಈ ಹಿನ್ನಲ್ಲೆಯಲ್ಲಿ ಗುರುವಾರ ಶ್ರೀ ದುರ್ಗಾ ಹೋಮ ಸಂಪನ್ನಗೊAಡಿತು.
ವೈದಿಕ ಕಾರ್ಯಕ್ರಮವನ್ನು ಕೃಷ್ಣ ಮೂರ್ತಿ ಕಡಬಗೆರೆ ಬೆಂಗಳೂರು ಮತ್ತು ರಮೇಶ ಇವರ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಯಿತು.
ವಿಪ್ರ ಸ್ನೇಹ ಸಭಾ ಟ್ರಸ್ಟ್ ಮತ್ತು ಶ್ರೀ ಮಾತಾ ಸಾಂಸ್ಕöÈತಿಕ ಕೇಂದ್ರ,ಬನಶAಕರಿ,ಬೆAಗಳೂರು ಇದರ ಸದಸ್ಯರಿಂದ ಭಕ್ತಿ ಸಂಗೀತ, ನೃಸಿಂಹ ಸಹಸ್ರ ನಾಮ,ಲಲಿತಾ ಸಹಸ್ರನಾಮ,ವಿಷ್ಣು ಸಹಸ್ರನಾಮ ಪಾರಾಣ ಸಂಪನ್ನವಾಯಿತು.ವಿಪ್ರ ಸ್ನೇಹ ಸಭಾ ಟ್ರಸ್ಟ್ನ ಅಧ್ಯಕ್ಷೆ,ಶ್ರೀ ಮಾತಾ ಸಾಂಸ್ಕöÈತಿಕ ಕೇಂದ್ರದ ವಿದೂಷಿ.ವಿನೂತ ಎನ್ ಸ್ವಾಮಿ, ಶ್ರೀಮಠದ ವ್ಯವಸ್ಥಾಪನ ಸಮಿತಿ ಸದಸ್ಯ ಪಾಮರ ಚಡಗ ಮತ್ತು ಶ್ರೀ ಮಠದ ವ್ಯವಸ್ಥಾಪಕ ಮಂಜುನಾಥ ಭಟ್ ಉಪಸ್ಥಿತರಿದ್ದರು.

Categories
ಕ್ರೀಡೆ

ರಾಷ್ಟ್ರೀಯ ಕ್ರೀಡಾ ದಿನಾಚರಣೆ

ಕುಂದಾಪುರ : ಕ್ರೀಡೆ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡುತ್ತದೆ. ವಿದ್ಯಾರ್ಥಿಗಳು ಈ ವಯಸ್ಸಿನಲ್ಲಿ ದಿನಕ್ಕೆ ಒಂದು ಗಂಟೆಯಾದರೂ ಆಟದಲ್ಲಿ ತೊಡಗಿಕೊಂಡರೆ ಪಾಠವನ್ನು ಅರ್ಥೈಸಿಕೊಳ್ಳುವಲ್ಲಿ ಸಹಕಾರಿಯಾಗುತ್ತದೆ. ಮಿತವಾದ ಆಹಾರ ಪದ್ಧತಿಯೂ ಇದರಿಂದ ರೂಢಿಯಾಗುತ್ತದೆ. ಇವೆಲ್ಲವೂ ಕ್ರೀಡೆಯಿಂದ ಸಾಧ್ಯ ಎಂದು ಉಡುಪಿಯ ಪೂರ್ಣ ಪ್ರಜ್ಞಾ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಶ್ರೀ ಸುಕುಮಾರ್ ಹೇಳಿದರು.

ಅವರು ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗ ಆಯೋಜಿಸಿದ ರಾಷ್ಟ್ರೀಯ ಕ್ರೀಡಾ ದಿನಾಚರಣೆ’ಯನ್ನು ಉದ್ಘಾಟಿಸಿ ಮಾತನಾಡಿದರು.ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿ, ಮೇಜರ್ ಧ್ಯಾನ್ ಚಂದ್ ಅವರ ಪರಿಶ್ರಮ ಇಂದು ಅವರ ಹೆಸರು ಮನ್ನಣೆ ಪಡೆಯಲು ಕಾರಣ. ಕ್ರೀಡೆಯಲ್ಲಿ ಸಾಧನೆ ಮಾಡಲು ಅಂತಹ ಪರಿಶ್ರಮದ ಅಗತ್ಯವಿದೆ ಎಂದರು.

ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಶ್ರೀ ರಂಜಿತ್ ಟಿ.ಎನ್. ಸ್ವಾಗತಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಶ್ರೀ ರಕ್ಷಿತ್ ರಾವ್ ಗುಜ್ಜಾಡಿ ಅತಿಥಿಗಳನ್ನು ಪರಿಚಯಿಸಿ, ಗಣಕ ವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕ ಶ್ರಿ ಶ್ರೀಕಾಂತ್ ವಂದಿಸಿದರು. ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಶ್ರೀ ಸತೀಶ್ ಶೆಟ್ಟಿ ಹೆಸ್ಕತ್ತೂರು ಕಾರ್ಯಕ್ರಮ ನಿರೂಪಿಸಿದರು.

ಈ ಸಂದರ್ಭದಲ್ಲಿ ನೆಟ್‌ಬಾಲ್‌ನಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿ ರಾಷ್ಟç ಮಟ್ಟದಲ್ಲಿ ಗುರುತಿಸಿಕೊಂಡ ಕಾಲೇಜಿನ ತೃತೀಯ ಬಿಬಿಎ ವಿದ್ಯಾರ್ಥಿ ಶಶಾಂಕ್‌ನನ್ನು ಅಭಿನಂದಿಸಲಾಯಿತು.