Categories
ರಾಜ್ಯ ಸುದ್ದಿ

ಬಜೆಪಿ ಪಾದಯಾತ್ರೆಗೆ ಜೆಡಿಎಸ್‌ ಬೆಂಬಲವಿಲ್ಲ

ನವದೆಹಲಿ :  ಮುಡಾ ಹಗರಣ ಮುಂದಿಟ್ಟುಕೊಂಡು ಬೆಂಗಳೂರಿನಿಂದ ಮೈಸೂರುವರೆಗೆ ಆ.3ರಿಂದ ಬಿಜೆಪಿ ನಡೆಸಲುದ್ದೇಶಿಸಿರುವ ಪಾದಯಾತ್ರೆಯಿಂದ ಮಿತ್ರ ಪಕ್ಷವಾದ ಜೆಡಿಎಸ್‌ ದೂರವುಳಿಯುವುದಷ್ಟೇ ಅಲ್ಲ, ನೈತಿಕ ಬೆಂಬಲವನ್ನೂ ನೀಡುವುದಿಲ್ಲ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆಗಳ ಸಚಿವ ಎಚ್.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಪಾದಯಾತ್ರೆಗೆ ಸಂಬಂಧಿಸಿ ಮಿತ್ರಪಕ್ಷವಾದ ನಮ್ಮನ್ನು ವಿಶ್ವಾಸಕ್ಕೂ ತೆಗೆದುಕೊಂಡಿಲ್ಲ. ಜತೆಗೆ ರಾಜ್ಯದಲ್ಲಿ ಮಳೆ, ನೆರೆ, ಭೂಕುಸಿತ ಆಗುತ್ತಿರುವ ಈ ಸಂದರ್ಭದಲ್ಲಿ ಇಂಥ ಹೋರಾಟ ಸೂಕ್ತವೂ ಅಲ್ಲ ಎಂದಿರುವ ಅವರು, ದೇವೇಗೌಡರ ಕುಟುಂಬಕ್ಕೆ ವಿಷ ವಿಕ್ಕಿದ ವ್ಯಕ್ತಿಯೊಂದಿಗೆ ವೇದಿಕೆ ಹಂಚಿಕೊಳ್ಳಲು ಸಾಧ್ಯವೇ ? ಎಂದು ಪ್ರೀತಂಗೌಡ ಅವರ ಉಪಸ್ಥಿತಿ ಕುರಿತು ತೀವ್ರ ಅಸಮಾಧಾನ ಹೊರಹಾಕಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣ ವಿರೋಧಿಸಿ ಪಾದಯಾತ್ರೆ ಮಾಡುವ ಬದಲು ಕಾನೂನು ಹೋರಾಟ ಮಾಡಬೇಕು. ಇದರಲ್ಲಿ ನಮಗೆ ರಾಜಕೀಯ ಮಾಡುವ ಉದ್ದೇಶ ವಿಲ್ಲ, ಬಿಜೆಪಿ ಪಾದಯಾತ್ರೆಗೆ ನಾವು ನೈತಿಕ ಬೆಂಬಲವನ್ನೂ ನೀಡುವುದಿಲ್ಲ. ಬಿಜೆಪಿ ನಾಯಕರು ಪಾದಯಾತ್ರೆಗೆ ಸಿದ್ಧತೆ ಮಾಡಿಕೊಂಡ ನಂತರ ನಮಗೂ ಮಾಹಿತಿ ಇರಲಿ ಎಂದು ಹೇಳಿದ್ದಾರಷ್ಟೆ. ಬೆಂಗಳೂರಿನಿಂದ ಮೈಸೂರುವರೆಗೂ ಶಕ್ತಿ ಇರುವ ನಮ್ಮನ್ನೇ ವಿಶ್ವಾಸಕ್ಕೆ ತೆಗೆದುಕೊಳ್ಳದಿದ್ದಾಗ ಬೆಂಬಲ ಯಾಕೆ ಕೊಡಬೇಕು? ಈ ವಿಚಾರದಲ್ಲಿ ನನ್ನ ಮನಸ್ಸಿಗೆ ನೋವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Categories
ರಾಷ್ಟ್ರೀಯ ಸುದ್ದಿ

ಸಾವಿನ ಸಂಖ್ಯೆ 270ಕ್ಕೆ

ವಯನಾಡು : ಕೇರಳದ ವಯನಾಡು ಜಿಲ್ಲೆಯಲ್ಲಿ ಸಂಭವಿಸಿದ ವಿನಾಶಕಾರಿ ಸರಣಿ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 270ಕ್ಕೆ ಏರಿದ್ದು, 200ಕ್ಕೂ ಹೆಚ್ಚು ಮಂದಿ ನಾಪತ್ತೆಯಾದ್ದಾರೆ. ರಕ್ಷಣಾ ಕಾರ್ಯ ಮುಂದುವರಿದಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಮೂಲಗಳು ಬುಧವಾರ ತಿಳಿಸಿವೆ

300ಕ್ಕೂ ಹೆಚ್ಚು ಮನೆ ನೆಲಸಮ:

ಮುಂಡಕ್ಕೆ ಮತ್ತು ಚೂರಲ್ಮಾಲಾ ಪ್ರದೇಶಗಳಲ್ಲಿ ಸಂಭವಿಸಿದ ಭೂಕುಸಿತದಲ್ಲಿ 300ಕ್ಕೂ ಹೆಚ್ಚು ಮನೆಗಳು ಸಂಪೂರ್ಣವಾಗಿ ನಾಶವಾಗಿವೆ. 123 ಶವಗಳ ಮರಣೋತ್ತರ ಪರೀಕ್ಷೆ ಪೂರ್ಣಗೊಂಡಿದ್ದು ಅವುಗಳಲ್ಲಿ 75 ದೇಹಗಳನ್ನಷ್ಟೇ ಗುರುತಿಸಲಾಗಿದೆ. ಮೃತದೇಹಗಳನ್ನು ಮೇಪ್ಪಾಡಿ ಕೌಟುಂಬಿಕ ಆರೋಗ್ಯ ಕೇಂದ್ರ ಮತ್ತು ನೀಲಾಂಬೂರು ಸರ್ಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ ಎಂದು ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ

Categories
ಕರಾವಳಿ ಸುದ್ದಿ

ಇಂದು ಶಾಲಾ ಕಾಲೇಜುಗಳಿಗೆ ರಜೆ

ಉಡುಪಿ : ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತಿದ್ದು, ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮಳೆಯ ತೀವ್ರತೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ಇಂದು ಅಗಸ್ಟ್  01 ರಂದು ಗುರುವಾರ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಲಾಗಿದೆ.

ಇಂದು ಅಗಸ್ಟ್‌ 01 ರಂದು ರೆಡ್‌ ಅಲರ್ಟ್‌ ಘೋಷಿಸಲಾಗಿದೆ

Categories
ಪಂಚಾಂಗ

ಶುಭ ದಿನದ ಪಂಚಾಂಗ

ಶುಭ ದಿನದ ಪಂಚಾಂಗ

ಕಲಿಯುಗಾಬ್ದ 5126

ಕ್ರೋಧಿ ಸಂವತ್ಸರ

ದಕ್ಷಿಣಾಯಣ

ಗ್ರೀಷ್ಮ ಋತು

ಆಷಾಢ ಮಾಸ

ಕೃಷ್ಣ : ಪಕ್ಷ

ಮೃಗಶಿರೆ : ನಕ್ಷತ್ರ

ದ್ವಾದಶಿ : ತಿಥಿ

ಗುರುವಾರ

01.08.2024

ಈ ದಿನ ಎಲ್ಲರಿಗೂ ಶುಭವಾಗಲಿ