Categories
ಅಪರಾಧ

ತಪ್ಪಿಸಿಕೊಳ್ಳಲು ಯತ್ನಿಸಿದವನ ಕಾಲಿಗೆ ಗುಂಡು ಹೊಡೆದ ಹುಬ್ಬಳ್ಳಿ ಪೊಲೀಸ್‌

ಹುಬ್ಬಳ್ಳಿ : ಮಹಜರು ಮಾಡಲು ಕರೆದುಕೊಂಡು ಹೋದ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ ಇನ್ ಸ್ಪೆಕ್ಟರ್  ಓರ್ವಸಿಬ್ಬಂದಿಗೆ ಗಾಯವಾಗಿದೆ. ಆರೋಪಿ ಹಾಗೂ ಗಾಯಾಳು ಪೊಲೀಸರನ್ನು ಕೆಎಂಸಿಆರ್‌ಐನಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಹಳೇ ಹುಬ್ಬಳ್ಳಿ ಘೋಡಕೆ ಪ್ಲಾಟ್‌ನ ನಿವಾಸಿ ಮುಜಮಿಲ್ ಗಮಿ (28) ಆರೋಪಿ.

ಈತ ಘೋಡಕೆ ಪ್ಲಾಟ್ ನಿವಾಸಿ, ಆತನ ಚಿಕ್ಕಪ್ಪಂದಿರಾದ ಜಾವೀದ್ ಶೇಖ್, ಸಮೀರ್ ಶೇಖ್‌ಗೆ ಹಳೇ ವೈಷಮ್ಯ ಹೊಂದಿದ್ದ ಸೋಮವಾರ ರಾತ್ರಿ ಜಗಳ ತೆಗೆದು ತನ್ನ ಸಹಚರರೊಂದಿಗೆ ಸೇರಿಕೊಂಡು ಚಾಕುವಿನಿಂದ ಇರಿದಿದ್ದ. ಅಲ್ಲದೇ ಜೀವ ಬೆದರಿಕೆ ಹಾಕಿದ್ದ. ಬಳಿಕ ಹೊರವಲಯಕ್ಕೆ ತೆರಳಿ ಚಾಕು ತೋರಿಸಿ ವಾಹನ ನಿಲ್ಲಿಸಿ ದರೋಡೆ ಕೊಡ ಮಾಡಿದ್ದ. ಈತನನ್ನು ಸೋಮವಾರವೇ ಪೊಲೀಸರು ಬಂಧಿಸಿದ್ದರು. ಮಂಗಳವಾರ ಬೆಳಗ್ಗೆ ಮಹಜರು ಮಾಡಲು ಘಟನಾ ಸ್ಥಳಕ್ಕೆ ಕರೆದುಕೊಂಡು ಹೋದಾಗ ತಪ್ಪಿಸಿಕೊಳ್ಳಲು ಯತ್ನಿಸಿದ್ದಾಗ ಅನಿವಾರ್ಯವಾಗಿ ಪೊಲೀಸರು ಗುಂಡು ಹೊಡೆದಿದ್ದಾರೆ

Categories
ರಾಜ್ಯ ಸುದ್ದಿ

ದೇಶದ ಮೊದಲ ಗಾಜಿನ ಸೇತುವೆ ಲೋಕಾರ್ಪಣೆ

ಚೆನ್ನೈ : ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ನಿರ್ಮಿಸಿರುವ ದೇಶದ ಮೊದಲ ಗಾಜಿನಸೇತುವೆ ಲೋಕಾರ್ಪಣೆಯಾಗಿದೆ. ವಿವೇಕಾನಂದ ರಾಕ್ ಸ್ಮಾರಕ ಮತ್ತು ತಿರುವಳ್ಳುವ‌ರ್ ಪ್ರತಿಮೆಯನ್ನು ಸಂಪರ್ಕಿಸುವ 77 ಮೀ. ಉದ್ದದ ಸೇತುವೆಯನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್  ಉದ್ಘಾಟಿಸಿದರು.

37 ಕೋಟಿ ರು. ವೆಚ್ಚದಲ್ಲಿ ಈ ಗಾಜಿನ ಸೇತುವೆ ನಿರ್ಮಾಣವಾಗಿದ್ದು, ಪಾರದರ್ಶಕ ಗಾಜಿನ ಮೇಲ್ಮೈ ಹೊಂದಿದೆ. ತಿರುವಳ್ಳುವ‌ರ್ ಪ್ರತಿಮೆ ಅನಾವರಣದ ಬೆಳ್ಳಿ ಮಹೋತ್ಸವದಂದು ಸೇತುವೆ ಉದ್ಘಾಟನೆಗೊಂಡಿದೆ

77  ಮೀಟರ್‌  ಉದ್ದ ಮತ್ತು 10 ಮೀಟರ್ ಅಗಲವನ್ನು ಹೊಂದಿದ್ದು, ಇಬ್ಬರು ಮಹಾನ್ ವ್ಯಕ್ತಿಗಳ ಸ್ಮಾರಕವಾದ ವಿವೇಕಾನಂದ ರಾಕ್ ಸ್ಮಾರಕ ಮತ್ತು ತಿರುವಳ್ಳುವ‌ರ್ ಪ್ರತಿಮೆಗೆ ಸಂಪರ್ಕ ಸಾಧಿಸಲಿದ್ದು ದೇಶದ ಮೊದಲ ಗಾಜಿನ ಸೇತುವೆಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ.

ಇದುವರೆಗೆ ಈ ಎರಡು ಸ್ಮಾರಕಗಳಿಗೆ ಭೇಟಿ ನೀಡಲು ಸಮುದ್ರದ ಮೂಲಕವೇ ತೆರಳಬೇಕಿತ್ತು. ಆದರೆ ಗಾಜಿನ ಸೇತುವೆ ಪ್ರವಾಸಿಗರಿಗೆ ಎರಡೂ ಸ್ಮಾರಕ ತಲುಪಲು ಹೊಸ ಮಾರ್ಗ ಕಲ್ಪಿಸಿದೆ. ಜೊತೆಗೆ ಪ್ರವಾಸದ ಹೊಸ ಅನುಭೂತಿ ನೀಡಲಿದೆ.

Categories
ಪಂಚಾಂಗ

ಶುಭ ದಿನದ ಪಂಚಾಂಗ

ಶುಭ ದಿನದ ಪಂಚಾಂಗ

ಕಲಿಯುಗಾಬ್ದ 5126

ಕ್ರೋಧಿ ಸಂವತ್ಸರ

ಉತ್ತರಾಯಣ

ಹೇಮಂತ ಋತು

ಪೌಷ : ಮಾಸ

ಶುಕ್ಲ : ಪಕ್ಷ

ಉತ್ತರಾಷಾಢ : ನಕ್ಷತ್ರ

ಬಿದಿಗೆ: ತಿಥಿ

ಬುಧವಾರ

01.01.2025

ಈ ದಿನ ಎಲ್ಲರಿಗೂ ಶುಭವಾಗಲಿ