Categories
ಕರಾವಳಿ ಸುದ್ದಿ

ರೋಟರಿ ಕ್ಲಬ್ ಹಂಗಾರಕಟ್ಟೆಯಿಂದ ಕೊಡುಗೆ

ಕೋಟ: ಇಲ್ಲಿನ ಕೋಡಿ ಕನ್ಯಾಣದ ಶಿಶು ಮಂದಿರಕ್ಕೆ ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನದ ವತಿಯಿಂದ ಮಕ್ಕಳಿಗೆ ಕಲಿಕೆಗೆ ಪೂರಕವಾಗಿರುವ ಆಟಿಕೆಗಳನ್ನು ಕೊಡುಗೆಯಾಗಿ ನೀಡಲಾಯಿತು.
ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನದ ಅಧ್ಯಕ್ಷೆ ಜ್ಯೋತಿ ಉದಯ್ ಕುಮಾರ್ ಶಿಶುಮಂದಿರ ಟ್ರಸ್ಟಿ ಸುರೇಂದ್ರ ಪೂಜಾರಿ ಇವರಿಗೆ ಹಸ್ತಾಂತರಿಸಿದರು .ಈ ಸಂದರ್ಭದಲ್ಲಿ ರೋಟರಿ ಕಾರ್ಯದರ್ಶಿ ಮುರುಳೀಧರ ನಾಯರಿ,ಸದಸ್ಯರಾಷ ಮನೋಜ್ ಕುಮಾರ್,ಕುಸುಮ ಎಂ ಮತ್ತಿತರರು ಇದ್ದರು.

Categories
ಪಂಚಾಂಗ

ಶುಭ ದಿನದ ಪಂಚಾಂಗ

ಶುಭ ದಿನದ ಪಂಚಾಂಗ

ಕಲಿಯುಗಾಬ್ದ 5127

ವಿಶ್ವಾವಸು ಸಂವತ್ಸರ

ದಕ್ಷಿಣಾಯನ

ವರ್ಷ : ಋತು

ಭಾದ್ರಪದ : ಮಾಸ

ಶುಕ್ಲ ಪಕ್ಷ

ತ್ರಯೋದಶಿ: ತಿಥಿ 

          ಶ್ರವಣ: ನಕ್ಷತ್ರ

ಶುಕ್ರವಾರ

05.09.2025

ಈ ದಿನ ಎಲ್ಲರಿಗೂ ಶುಭವಾಗಲಿ

Categories
ಕರಾವಳಿ ಸುದ್ದಿ

ಡಾ|| ಶಿವರಾಮ ಕಾರಂತ ಶಿಕ್ಷಕ ಪುರಸ್ಕಾರ – 2025 ಶಿಕ್ಷಕರ ಸೂಚನೆಗೆ ಆಹ್ವಾನ

ಕೋಟ: ಕಾರಂತ ಪ್ರತಿಷ್ಠಾನ ಕೋಟ, ಕೋಟತಟ್ಟು ಗ್ರಾಮ ಪಂಚಾಯತ್, ಹಾಜಿ ಅಬ್ದುಲ್ಲ ಸಾಹೇಬ್ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ಉಡುಪಿ, ರೋಟರಿ ಕ್ಲಬ್ ಕೋಟ ಸಿಟಿ, ಉಸಿರು ಕೋಟ ಇವರ ಸಾರಥ್ಯದಲ್ಲಿ ಕೊಡಮಾಡುವ ಶಿವರಾಮ ಕಾರಂತ ಶಿಕ್ಷಕ ಪುರಸ್ಕಾರಕ್ಕೆ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ಸೂಚನೆಗೆ ಆಹ್ವಾನ ನೀಡಲಾಗಿದೆ. ಸೂಚನೆ ಮಾಡುವ ಪ್ರತಿನಿಧಿಗಳು ಸೂಚಿಸುವ ಶಿಕ್ಷಕರ ಹೆಸರು ಮತ್ತು 5 ಕಾರಣಗಳನ್ನು ವಾಟ್ಸಪ್ ಮೂಲಕ ಈ ನಂಬರಿಗೆ 9663750499 ಕಳಿಸಬೇಕಾಗಿ ಪ್ರತಿಷ್ಠಾನದ ಗೌರವಾಧ್ಯಕ್ಷರಾದ ಆನಂದ್ ಸಿ. ಕುಂದರ್, ಅಧ್ಯಕ್ಷರಾದ ಸತೀಶ್ ಕುಂದರ್ ಬಾರಿಕೆರೆ, ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ, ಉಪಾಧ್ಯಕ್ಷರಾದ ಸರಸ್ವತಿ, ಪಿಡಿಒ ರವೀಂದ್ರ ರಾವ್, ಕಾರ್ಯದರ್ಶಿ ಸುಮತಿ ಅಂಚನ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Categories
ಕರಾವಳಿ ಸುದ್ದಿ

ಸಿಂಗಾಪುರದಲ್ಲಿ ಯಕ್ಷದೇಗುಲ ತಂಡದ “ರತ್ನಾವತಿ ಕಲ್ಯಾಣ” ಯಕ್ಷಗಾನ ಪ್ರದರ್ಶನ

ಕೋಟ: ಸದಾ ಸಾಂಸ್ಕೃತಿಕ, ಶೈಕ್ಷಣಿಕ, ವಿನೋದ, ಶುಭ ಕಾರ್ಯಕ್ರಮಗಳಿಗೆ ಸದಾ ಪ್ರೋತ್ಸಾಹಿಸುವ ಸಿಂಗಾಪುರ ಕನ್ನಡ ಸಂಘದ ಆಹ್ವಾನದ ಮೇರೆಗೆ ಆ.೩೦ರಂದು ಅನುಭವಿ ಕಲಾವಿದರಿಂದ ಹಿಡಿದು ಉದಯೋನ್ಮುಕ ಕಲಾವಿದರನ್ನು ಒಳಗೊಂಡ ಕೆ. ಮೋಹನ್ ನಿರ್ದೇಶನದ ಬೆಂಗಳೂರಿನ ಯಕ್ಷದೇಗುಲ ತಂಡದವರಿAದ ಸಿಂಗಾಪುರದ ಖಇಐಅ ಇಂಟರ್‌ನ್ಯಾಷನಲ್ ಹೋಟೆಲ್‌ನ ಸಭಾಂಗಣದಲ್ಲಿ ರತ್ನಾವತಿ ಕಲ್ಯಾಣ ಯಕ್ಷಗಾನ ಪ್ರದರ್ಶನ ನೀಡಿತು. 
ಈ ಪ್ರದರ್ಶನವು ೪೦೦ಕ್ಕೂ ಹೆಚ್ಚು ಕನ್ನಡಿಗರ ಉತ್ಸಾಹ ಭರಿತ ಪ್ರೇಕ್ಷಕರನ್ನು ಸೆಳೆಯಿತು. ಇದೇ ಸಂದರ್ಭದಲ್ಲಿ ರತ್ನಾವತಿ ಕಲ್ಯಾಣ ಪ್ರಸಂಗದಲ್ಲಿ ಯಕ್ಷದೇಗುಲವು ಸಿಂಗಾಪುರದಲ್ಲಿ ಹುಟ್ಟಿ, ಬೆಳೆದ ೧೦ ಮಕ್ಕಳಿಗೆ ತಂಡದ ಉಸ್ತುವಾರಿ ಹೊತ್ತ ಗುರು ಪ್ರಿಯಾಂಕ ಕೆ. ಮೋಹನ್‌ರು ಯಕ್ಷಗಾನ ತರಬೇತಿ ನೀಡಿ ತಂಡದ ಕಾರ್ಯಕ್ರಮದಲ್ಲಿ ಸೇರಿಸಿಕೊಂಡರು.
 ಇದು ಅಲ್ಲಿನ ಮಕ್ಕಳಿಗೆ ವಿಶಿಷ್ಟ ಸಾಂಸ್ಕೃತಿಕ ಅನುಭವದೊಂದಿಗೆ ಹಿರಿಯ ಕಲಾವಿದರೊಂದಿಗೆ ವೇದಿಕೆಯನ್ನು ಹಂಚಿಕೊಳ್ಳಲು ಅವಕಾಶ ನೀಡಿತು. ಇದರಿಂದ ಸಮೂದಾಯದಿಂದ ಆತ್ಮೀಯ ಮೆಚ್ಚುಗೆಯನ್ನು ಪಡೆದದಲ್ಲದೆ, ಪ್ರೇಕ್ಷಕರು ಈ ಪ್ರದರ್ಶನವು ಅವರ ಸಾಂಸ್ಕೃತಿಕ ಸಂಪರ್ಕ ಮತ್ತು ಹೆಮ್ಮೆಯನ್ನು ಹೆಚ್ಚಿಸಿತು. ಕಲಾವಿದರಾಗಿ ಸುದರ್ಶನ ಉರಾಳ, ಪ್ರಿಯಾಂಕ ಕೆ. ಮೋಹನ್, ಸುಜಯೀಂದ್ರ ಹಂದೆ, ಲಂಬೋದರ ಹೆಗಡೆ, ಕಡಬಾಳ ಉದಯ ಹೆಗಡೆ, ವಿಶ್ವನಾಥ ಉರಾಳ, ಸುದೀಪ ಉರಾಳ, ದಿನೇಶ್ ಕನ್ನಾರು, ಶ್ರೀರಾಮ ಹೆಬ್ಬಾರ್, ಶ್ರೀವತ್ಸ, ಶ್ರೀವಿದ್ಯಾ ರವರು ಭಾಗವಹಿಸಿದರು. ಕಾರ್ಯಕ್ರಮದ ಮೊದಲು ಕನ್ನಡ ಸಂಘದ ಅಧ್ಯಕ್ಷರಾದ ವೆಂಕಟೇಶ್, ಕಾರ್ಯದರ್ಶಿ ಕಿಶೋರ್ ಹಾಗೂ ನಮ್ಮ ಆತ್ಮೀಯ ಹಿಂದಿನ ಯಕ್ಷದೇಗುಲದ ಕಲಾವಿದರಾದ ವೈಕುಂಠ ನಕ್ಷತ್ರಿ ದಂಪತಿಯನ್ನು ಯಕ್ಷದೇಗುಲದಿಂದ ಗೌರವಿಸಲಾಯಿತು. ಕಾರ್ಯಕ್ರಮದ ಕೊನೆಯಲ್ಲಿ ಸಿಂಗಾಪುರದ ಕನ್ನಡ ಸಂಘದಿAದ ಭಾಗವಹಿಸಿದ ಕಲಾವಿದರಿಗೆ ಸ್ಮರಣಿಕೆ ನೀಡಿ ಗೌರವಿಸಿದರು.
Categories
ಕರಾವಳಿ ಸುದ್ದಿ ಶಿಕ್ಷಣ

ಕರಾಟೆಯಲ್ಲಿ ತ್ರಿಶಾ ವಿದ್ಯಾ ಪದವಿ ಪೂರ್ವ ವಿದ್ಯಾರ್ಥಿಗಳ ಸಾಧನೆ

ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಪೂರ್ಣಪ್ರಜ್ಞಾ ಕಾಲೇಜಿನಲ್ಲಿ ನಡೆದ ಪದವಿಪೂರ್ವ ಕಾಲೇಜುಗಳ ಬಾಲಕ ಬಾಲಕಿಯರ ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟದಲ್ಲಿ ತ್ರಿಶಾ ವಿದ್ಯಾ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಪ್ರೀತಿ ಹಾಗೂ ವಿಜ್ಞಾನ ವಿಭಾಗದ ಪಂಚಾಕ್ಷರಿ ಶಾಂತಗೌಡ ರೋಣದ್ ಚಿನ್ನದ ಪದಕವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಇವರನ್ನು ತ್ರಿಶಾ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಸಿಎ ಗೋಪಾಲಕೃಷ್ಣ ಭಟ್ ,ತ್ರಿಶಾ ವಿದ್ಯಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರೊ ಹರಿಪ್ರಸಾದ್ ರಾವ್ ಮತ್ತು ಶಿಕ್ಷಕವೃಂದದವರು ಅಭಿನಂದಿಸಿದರು.

Categories
ಕರಾವಳಿ ಸುದ್ದಿ ಶಿಕ್ಷಣ

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ

ಕಿರಿಮಂಜೇಶ್ವರ : ಆಗಸ್ಟ್ 02ರಂದು ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು ಉಡುಪಿ ಇಲ್ಲಿ ನಡೆದ ಜಿಲ್ಲಾ ಮಟ್ಟದ 14 ರ ವಯೋಮಾನದ ಕಲಾತ್ಮಕ ಏಕಲ್ ವಿಭಾಗದ ಯೋಗಾಸನ ಸ್ಪರ್ಧೆಯಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ಸಾನಿಧ್ಯ ಎಸ್ ಮೊಗವೀರ (7ನೇ ತರಗತಿ) ಹಾಗು ಸಾಂಪ್ರದಾಯಿಕ ಯೋಗಾಸನ ಸ್ಪರ್ಧೆಯಲ್ಲಿ ವಂಶಿತ್(7ನೇ ತರಗತಿ) ಹಾಗೆಯೇ ತಾಳಾತ್ಮಕ ಯುಗಲ್ ಯೋಗಾಸನ ಸ್ಪರ್ಧೆಯಲ್ಲಿ ಸಾನಿಧ್ಯ ಎಸ್ ಮೊಗವೀರ(7ನೇ ತರಗತಿ) ಹಾಗೂ ಅಮೂಲ್ಯ (7ನೇ ತರಗತಿ) ಇವರ ಜೋಡಿ ಪ್ರಥಮ ಸ್ಥಾನ ಗಳಿಸಿ ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.


ವಿದ್ಯಾರ್ಥಿಗಳ ಈ ಸಾಧನೆಗೆ ಆಡಳಿತ ಮಂಡಳಿ, ಮುಖ್ಯ ಶಿಕ್ಷಕಿ, ಬೋಧಕ/ಬೋಧಕೇತರ ವರ್ಗದವರು, ವಿದ್ಯಾರ್ಥಿಗಳು ಅಭಿನಂದನೆಯನ್ನು ಸಲ್ಲಿಸಿದ್ದಾರೆ.

Categories
ಕರಾವಳಿ ಸುದ್ದಿ

ಬಿಜೆಪಿ ಉಡುಪಿ ಜಿಲ್ಲಾ ಕಛೇರಿಗೆ ರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಚಾಲಕ ಅಮಿತ್ ಮಾಳವೀಯ ಭೇಟಿ

ಉಡುಪಿ:ಬಿಜೆಪಿ ರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಚಾಲಕ ಹಾಗೂ ಪ.ಬಂಗಾಲ ರಾಜ್ಯದ ಸಹ ಉಸ್ತುವಾರಿ ಅಮಿತ್ ಮಾಳವೀಯ ಅವರು ಬಿಜೆಪಿ ಉಡುಪಿ ಜಿಲ್ಲಾ ಕಛೇರಿಗೆ ಬೇಟಿ ನೀಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರು ಅಮಿತ್ ಮಾಳವೀಯ ಅವರನ್ನು ಶಾಲು ಹೊದೆಸಿ ಸನ್ಮಾನಿಸಿದರು.ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಸರಲ್ ಆಪ್ ಪ್ರಮುಖ್ ಚಂದ್ರಶೇಖರ ಪ್ರಭು ಉಪಸ್ಥಿತರಿದ್ದರು.

Categories
ಕರಾವಳಿ ಸುದ್ದಿ ರಾಜ್ಯ ಸುದ್ದಿ

ಮಹಿಳೆಯೊಂದಿಗೆ ಆರ್.ವಿ. ದೇಶಪಾಂಡೆ ತುಚ್ಚ ಮಾತು ಕಾಂಗ್ರೆಸ್ಸಿನ ಕೀಳು ಸಂಸ್ಕೃತಿಯ ಪ್ರತೀಕ

‘ಉತ್ತರ ಕನ್ನಡ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಯಾವಾಗ’ ಎಂಬ ಹಿರಿಯ ಪತ್ರಕರ್ತೆ ರಾಧಾ ಹಿರೇಗೌಡರ್ ಪ್ರಶ್ನೆಗೆ ‘ನಿಮ್ಮ ಹೆರಿಗೆ ಆದ್ಮೇಲೆ’ ಎಂಬ ಉಡಾಫೆ ಉತ್ತರ ನೀಡಿರುವ ಹಳಿಯಾಳ ಶಾಸಕ ಆರ್.ವಿ. ದೇಶಪಾಂಡೆ ಅವರ ವರ್ತನೆ ಕಾಂಗ್ರೆಸ್ ಪಕ್ಷದ ಕೀಳು ಸಂಸ್ಕೃತಿಯ ಪ್ರತೀಕವಾಗಿದೆ ಎಂದು ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಹಿಳಾ ಸಬಲೀಕರಣದ ಬಗ್ಗೆ ಪುಂಖಾನುಪುಂಖವಾಗಿ ಬೊಗಳೆ ಬಿಡುವ ಕಾಂಗ್ರೆಸ್ ನಾಯಕರಿಗೆ ತಮ್ಮ ಪಕ್ಷದ ಹಿರಿಯ ಶಾಸಕರ ಕೀಳು ಅಭಿರುಚಿಯ ಉತ್ತರ ಭೂಷಣವೆನಿಸುತ್ತದೆಯೇ ಎಂದು ಅವರು ಪ್ರಶ್ನಿಸಿದ್ದಾರೆ.ಅತ್ತ ಬಿಹಾರದ ಪಾಟ್ನಾದಲ್ಲಿ ಕಾಂಗ್ರೆಸ್-ಆರ್.ಜೆ.ಡಿ. ಮೈತ್ರಿಕೂಟದ ಪ್ರಚಾರದ ವೇದಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ತಾಯಿಯನ್ನು ವಿನಾಕಾರಣ ನಿಂದಿಸಿ ಅವಮಾನಿಸಲಾಗಿದೆ. ಈ ಎರಡೂ ಅಮಾನವೀಯ ಘಟನೆಗಳು ಅತ್ಯಂತ ಖಂಡನಾರ್ಹವಾಗಿದೆ.

ಗ್ಯಾರಂಟಿಗಳ ಸೋಗಿನಲ್ಲಿ ಅಧಿಕಾರಕ್ಕೇರಿದ ಕಾಂಗ್ರೆಸ್ ರಾಜ್ಯದ ಅಭಿವೃದ್ಧಿಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿರುವ ಕಾರಣ ರೋಸಿ ಹೋಗಿರುವ ಜನತೆಯ ಪರವಾಗಿ ಆಸ್ಪತ್ರೆಯ ಕುರಿತು ಕೇಳಿದ ಪ್ರಶ್ನೆಗೆ ಸರಿಯಾಗಿ ಉತ್ತರಿಸದೇ ಪತ್ರಕರ್ತೆಯನ್ನು ಅವಮಾನಿಸಿ ಮಹಿಳೆಯರ ಬಗ್ಗೆ ಕೀಳರಿಮೆ ಪ್ರದರ್ಶಿಸಿರುವ ಶಾಸಕ ಆರ್. ವಿ. ದೇಶಪಾಂಡೆ ರಾಜ್ಯದ ಮಹಿಳೆಯರ ಕ್ಷಮೆ ಕೋರಬೇಕು ಎಂದು ಶಿಲ್ಪಾ ಜಿ. ಸುವರ್ಣ ಪತ್ರಿಕಾ ಪ್ರಕಟಣೆಯ ಮೂಲಕ ಆಗ್ರಹಿಸಿದ್ದಾರೆ.

Categories
ಕರಾವಳಿ ಸುದ್ದಿ ಶಿಕ್ಷಣ

ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟ : 14 ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ.

4ನೇ ಬಾರಿ ಉಡುಪಿ ಜಿಲ್ಲಾ ಸಮಗ್ರ ಪ್ರಶಸ್ತಿ ಮುಡಿಗೇರಿಸಿಕೊಂಡ ಜನತಾ ವಿದ್ಯಾ ಸಂಸ್ಥೆ.

ಹೆಮ್ಮಾಡಿ: ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ, ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ವಿಭಾಗ ಉಡುಪಿ ಇವರ ಆಸರೆಯಲ್ಲಿ ಜಿಲ್ಲಾ ಮಟ್ಟದ ಪದವಿ ಪೂರ್ವ ಬಾಲಕ ಬಾಲಕಿಯರ ಕುಸ್ತಿ ಪಂದ್ಯಾಟವು ಜನತಾ ಪಿ.ಯು ಕಾಲೇಜಿನ ಕ್ರೀಡಾoಗಣದಲ್ಲಿ ನಡೆಯಿತು.

ಕುಸ್ತಿ ಪಂದ್ಯಾಟವು ಬಾಲಕರ ವಿಭಾಗದ ಫ್ರಿ ಸ್ಟೆಲ್ ಹಾಗೂ ಗ್ರಿಕೋ ರೋಮನ್ ಮತ್ತು ಬಾಲಕಿಯರ ವಿಭಾಗ ದಲ್ಲಿ ನಡೆಯಿತು. ಉಡುಪಿ ಜಿಲ್ಲೆಯ ವಿವಿಧ ಪದವಿ ಪೂರ್ವ ಕಾಲೇಜುಗಳ ಸುಮಾರು 160ವಿದ್ಯಾರ್ಥಿಗಳು ಈ ಪಂದ್ಯಾಟದಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡರು.

ಈ ಪಂದ್ಯಾಟದಲ್ಲಿ ಜನತಾ ಪದವಿ ಪೂರ್ವ ಕಾಲೇಜಿನ 14ವಿದ್ಯಾರ್ಥಿಗಳು ಚಿನ್ನದ ಪದಕ 2ವಿದ್ಯಾರ್ಥಿಗಳು ಬೆಳ್ಳಿಯ ಪದಕ 8ವಿದ್ಯಾರ್ಥಿಗಳು ಕಂಚಿನ ಪದಕ ಪಡೆದು ಸತತವಾಗಿ 4ನೇ ಬಾರಿ ಸಮಗ್ರ ಪ್ರಶಸ್ತಿಯನ್ನು ತಮ್ಮ ಮುಡಿಗೇರಿಕೊಂಡರು.

ವಿದ್ಯಾರ್ಥಿಗಳಾದ ರತ್ವಿಕ್,ಸೌಲತ್,ಪನ್ನಗ, ಶಶಾಂಕ್,ಮಂದಿರ್ ಶೆಟ್ಟಿ,ಸ್ವಸ್ತಿಕ್,ಕಿಶನ್,ಆದಿತ್ಯ,ಪ್ರಣಿತ್,ಗಾಯತ್ರಿ,ಆರ್ಯನ್, ವಿಜಯ್,ಮಂಥನ್,ಸೃಜನ್ ಇವರು ಚಿನ್ನದ ಪದಕ ಪಡೆಯುದರ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ ಕಾಲೇಜಿಗೆ ಕೀರ್ತಿ ತಂದಿರುತ್ತಾರೆ.
ಇಂದಿನ ಬದಲಾಗುತ್ತಿರುವ ಸಮಾಜದಲ್ಲಿ ಎಲ್ಲ ವಿಭಾಗ ದಲ್ಲಿಯೂ ಮಕ್ಕಳಿಗೆ ಮುಕ್ತ ಅವಕಾಶ ಇರುವುದರಿಂದ ಕೇವಲ ಇಂಜಿನಿಯರ್, ಡಾಕ್ಟರ್ ಮಾತ್ರವಲ್ಲದೆ ಕ್ರೀಡೆಗೂ ಈ ದೇಶದಲ್ಲಿ ಸಮನ ಅವಕಾಶ ಸಿಗುತ್ತಿದೆ ಇದನ್ನು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕು. ಗ್ರಾಮೀಣ ಭಾಗದ ಜನತಾ ಪದವಿ ಪೂರ್ವ ಕಾಲೇಜು ಶಿಕ್ಷಣ ಕ್ಷೇತ್ರದಲ್ಲಿ ಮಾತ್ರವಲ್ಲದೆ ಕ್ರೀಡಾ ಕ್ಷೇತ್ರದಲ್ಲೂ ಸಂಚಲನ ಉಂಟು ಮಾಡಿದೆ. ನಮ್ಮ ಸಂಸ್ಥೆಯ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ರಾಜ್ಯ ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಗಣೇಶ್ ಮೊಗವೀರ, ಪ್ರಾಂಶುಪಾಲರು ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ

Categories
ಕರಾವಳಿ ಸುದ್ದಿ ಶಿಕ್ಷಣ

ಮರಿಯಾ ವೈಯೊಲ ಬರೆಟ್ಟೋ : ರಾಜ್ಯ ಮಟ್ಟಕ್ಕೆ ಆಯ್ಕೆ‌.

ಹೆಮ್ಮಾಡಿ: ಪದವಿಪೂರ್ವ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಆಯೋಜಿಸಿದ ಜಿಲ್ಲಾಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿಯಲ್ಲಿ ಜನತಾ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಮರಿಯಾ ವೈಯೊಲ ಬರೆಟ್ಟೋ ಜಿಲ್ಲಾ ಮಟ್ಟದಲ್ಲಿ ವಿಜೇತಳಾಗಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ.
ವಿದ್ಯಾರ್ಥಿನಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.