Categories
ಕರಾವಳಿ ಸುದ್ದಿ

6ನೇ ವರ್ಷದ ನೃತ್ಯೋಲ್ಲಾಸ ನೃತ್ಯ ನೂಪರ…

ಕೊಟೇಶ್ವರ : ಕೋಡಿ ಹಬ್ಬದ ಪ್ರಯುಕ್ತ ಶ್ರೀ ನಟರಾಜ ನೃತ್ಯನಿಕೇತನ ಕೊಟೇಶ್ವರ ಇವರ ಆಶ್ರಯದಲ್ಲಿ 6ನೇ ವರ್ಷದ ನೃತ್ಯೋಲ್ಲಾಸ ನೃತ್ಯ ನೂಪರ ಎಂಬ ಕಾರ್ಯಕ್ರಮವನ್ನು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವಿದುಷಿ ಶ್ರೀಮತಿ ಭಾಗೀರಥಿ ಎಂ ರಾವ್ ಇವರ ನಿರ್ದೇಶನದಲ್ಲಿ 01/12/2025 ಸೋಮವಾರ ರಾತ್ರಿ 8 ಗಂಟೆಗೆ ಶಾಂತರಾಮ ರಂಗಮಂಟಪ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದಲ್ಲಿ ಆಯೋಜಿಸಲಾಗಿದೆ.
ಈ ಕಾರ್ಯಕ್ರಮಕ್ಕೆ ತಾವೆಲ್ಲರೂ ಆಗಮಿಸಿ, ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಶ್ರೀ ನಟರಾಜ ನೃತ್ಯನಿಕೇತನ ಇವರು ವಿನಂತಿಸಿಕೊಂಡಿದ್ದಾರೆ.

Categories
ಬ್ರೇಕಿಂಗ್ ನ್ಯೂಸ್

ಚಿತ್ರ ನಟ ಉಮೇಶ್ ಇನ್ನಿಲ್ಲ

ಬೆಂಗಳೂರು : ಜನಪ್ರಿಯ ಹಾಸ್ಯ ಕಾಲಾವಿದ ಹಿರಿಯ ನಟ ಎಂ.ಎಸ್. ಉಮೇಶ್ ಇನ್ನಿಲ್ಲ ಅನಾರೋಗ್ಯದಿಂದ ಕೆಲವು ದಿನಗಳಿಂದ ಆಸ್ಪತ್ರೆಯಲ್ಲಿದ್ದ ನಟ ಇಂದು ಚಿಕಿತ್ಸೆಗೆ ಫಲಿಸದೆ ಕಿದ್ವಾಯಿ ಆಸ್ಪತ್ರೆಯಲ್ಲಿ ನಿಧನ.

350ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ನಟ.

Categories
ಶಿಕ್ಷಣ

ವ್ಯಕ್ತಿತ್ವ ವಿಕಸನ ಕಾರ್ಯಾಗಾರ 

ಕುಂದಾಪುರ : ಗುರುವಿಗೆ ಗೌರವ ನೀಡುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ. ವಿದ್ಯೆಯೊಂದಿಗೆ ವಿವೇಕ ಮತ್ತು ತಾಳ್ಮೆ ಇರಬೇಕು. ಸಜ್ಜನರ ಸಹವಾಸ ವ್ಯಕ್ತಿತ್ವವನ್ನು ಒಳ್ಳೆಯ ದಾರಿಗೆ ಕೊಂಡೊಯ್ಯುತ್ತದೆ. ವ್ಯಕ್ತಿತ್ವ ನಿರ್ಮಾಣಕ್ಕೆ ಜೀವನದಲ್ಲಿ ದೃಢ ನಿಶ್ಚಯ ಮತ್ತು ಸ್ಪಷ್ಟ ಗುರಿ ಅತಿ ಮುಖ್ಯ. ನಮ್ಮ ಭವಿಷ್ಯ ನಮ್ಮ ಕೈಯಲ್ಲಿದೆ, ಸನ್ಮಾರ್ಗದಲ್ಲಿ ಸೃಜನಶೀಲ ಬದುಕನ್ನು ರೂಪಿಸಿಕೊಂಡಾಗ ಸಾಧನೆಗೆ ಸುಲಭವಾಗುತ್ತದೆ. ಹವ್ಯಾಸ ಬದಲಾದರೆ ಹಣೆಬರಹ ಬದಲಾಗುತ್ತದೆ, ದೃಷ್ಟಿ ಬದಲಾದರೆ ಜೀವನ ದೃಶ್ಯವೇ ಬದಲಾಗುತ್ತದೆ ಎಂದು ನಿವೃತ್ತ ವಾಣಿಜ್ಯ ತೆರಿಗೆ ಇಲಾಖೆಯ ಪರಿವೀಕ್ಷಣಾಧಿಕಾರಿ ಹಾಗೂ ಉಡುಪಿ ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿ ಶ್ರೀ ಸುಬ್ರಹ್ಮಣ್ಯ ಶೆಟ್ಟಿ ಹೇಳಿದರು.ಅವರು ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಐಕ್ಯೂಎಸಿ ಘಟಕದ ಆಶ್ರಯದಲ್ಲಿ ನಡೆದ ವ್ಯಕ್ತಿತ್ವ ವಿಕಸನ ಕಾರ್ಯಗಾರದ ಸಂಪನ್ಮೂಲ ವ್ಯಕ್ತಿಗಳಾಗಿ ಮಾತನಾಡಿದರು. 
ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. ಕೆ. ಉಮೇಶ್ ಶೆಟ್ಟಿ , ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ, ಐಕ್ಯೂಎಸಿ ಘಟಕದ ಸಂಯೋಜಕರಾದ ಶ್ರೀಮತಿ ದೀಪಿಕಾ ಜಿ. ಕಾರ್ಯಕ್ರಮವನ್ನು ಸಂಯೋಜಿಸಿದರು. 
ಈ ಸಂದರ್ಭ ವಾಣಿಜ್ಯ ಸಹಾಯಕ ಪ್ರಾಧ್ಯಾಪಕಿ ಶ್ರೀಮತಿ ಜೋಸ್ಲಿನ್ ಅಲ್ಮೇಡಾ ಅತಿಥಿಗಳನ್ನು ಪರಿಚಯಿಸಿದರು. ಕಾರ್ಯಕ್ರಮದ ಸಂಯೋಜಕರಾದ ಶ್ರೀಮತಿ ಮಾಲತಿ ಕುಂದರ್ ಸ್ವಾಗತಿಸಿ, ವಂದಿಸಿ, ನಿರೂಪಿಸಿದರು
Categories
ಶಿಕ್ಷಣ

ತ್ರಿಶಾ ಕ್ಲಾಸಸ್ : ಸಿ ಎಸ್ ಇ ಇ ಟಿ ಪರೀಕ್ಷೆ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ

ಮಂಗಳೂರು: ಸಿ.ಎ ಸಿ.ಎಸ್ ಮೊದಲಾದ ವೃತ್ತಿಪರ ಕೋರ್ಸ್‌ಗಳಿಗಾಗಿ ತರಬೇತಿ ನೀಡುತ್ತಿರುವ ತ್ರಿಶಾ ಕ್ಲಾಸಸ್ ವತಿಯಿಂದ ಸಿ ಎಸ್ ಇ ಇ ಟಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಮಂಗಳೂರಿನ ತ್ರಿಶಾ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಯಿತು.
ಈ ಕಾರ್ಯಕ್ರಮದಲ್ಲಿ ತ್ರಿಶಾ ಸಮೂಹ ಸಂಸ್ಥೆಗಳ ಶೈಕ್ಷಣಿಕ ಸಲಹೆಗಾರರಾದ ಡಾ. ನಾರಾಯಣ ಕಾಯರಕಟ್ಟೆ ಇವರು ವಿದ್ಯಾರ್ಥಿಗಳು ಕಲಿಕೆಯಲ್ಲಿ ಉತ್ಸಾಹ ತೋರಿಸಬೇಕು. ಮುಂದಿನ ಹಂತಗಳನ್ನು ಉತ್ತಮ ತಯಾರಿಯೊಂದಿಗೆ ಪೂರ್ಣಗೊಳಿಸಬೇಕು. ಕಲಿಕೆಯೊಂದಿಗೆ ವೃತ್ತಿಪರತೆ ಯನ್ನು ಅಳವಡಿಸಿಕೊಳ್ಳಬೇಕು ಎನ್ನುತ್ತ ಸಾಧಕರಿಗೆ ಶುಭಕೋರಿದರು. ಈ ಕಾರ್ಯಕ್ರಮದಲ್ಲಿ ಸಾಧಕರನ್ನು ಪೋಷಕರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು. ವಿದ್ಯಾರ್ಥಿಗಳು ತ್ರಿಶಾ ಕ್ಲಾಸಸ್ ನಲ್ಲಿನ ತಮ್ಮ ಅನುಭವಗಳನ್ನು ಹಂಚಿಕೊಂಡರು. ತ್ರಿಶಾ ಕ್ಲಾಸಸ್ ಮಂಗಳೂರು ಕೇಂದ್ರದ ಮುಖ್ಯಸ್ಥೆಯಾದ ಪ್ರೊ. ಯಶಸ್ವಿನಿ ಯಶ್‌ ಪಾಲ್‌ , ಬೋಧಕ ಹಾಗೂ ಬೋಧಕೇತರ ಸಿಬ್ಬಂಧಿಗಳು, ವಿದ್ಯಾರ್ಥಿಗಳು ಹಾಗೂ ಪಾಲಕರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸಿಂಚನ ಹಾಗೂ ದಿಶಾ ಪ್ರಾರ್ಥಿಸಿ, ಅನ್ವಿ ಶೆಟ್ಟಿ ಸ್ವಾಗತಿಸಿ ನಿರೂಪಿಸಿದರು. ಸಮೃದ್ಧಿ ಎಸ್ ಆಳ್ವ ವಂದಿಸಿದರು.

Categories
ಪಂಚಾಂಗ

ಶುಭ ದಿನದ ಪಂಚಾಂಗ

ಶುಭ ದಿನದ ಪಂಚಾಂಗ

ಕಲಿಯುಗಾಬ್ದ 5127

ವಿಶ್ವಾವಸು ಸಂವತ್ಸರ

ದಕ್ಷಿಣಾಯನ

ಹೇಮಂತ: ಋತು

ಮಾರ್ಗಶಿರೆ: ಮಾಸ

ಶುಕ್ಲ ಪಕ್ಷ

ದಶಮಿ: ತಿಥಿ

ಉತ್ತರಾಭಾದ್ರೆ: ನಕ್ಷತ್ರ

ಭಾನುವಾರ

30.11.2025

ಈ ದಿನ ಎಲ್ಲರಿಗೂ ಶುಭವಾಗಲಿ

Categories
ಶಿಕ್ಷಣ

ಯುವ ರೆಡ್‌ಕ್ರಾಸ್ ಘಟಕದಿಂದ ರಕ್ತ ನಿಧಿಗೆ ಶೈಕ್ಷಣಿಕ ಭೇಟಿ

ಕುಂದಾಪುರ : ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕದ ವತಿಯಿಂದ ವಿದ್ಯಾರ್ಥಿಗಳಲ್ಲಿ ರಕ್ತದಾನದ ಮಹತ್ವವನ್ನು ಅರಿವು ಮೂಡಿಸುವ ಉದ್ದೇಶದಿಂದ ಕುಂದಾಪುರ ರಕ್ತ ನಿಧಿಗೆ ಅಧ್ಯಯನ ಭೇಟಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ರಕ್ತ ಸಂಗ್ರಹಣೆ, ರಕ್ತದ ಸಂರಕ್ಷಣೆ, ಅದರ ಪರೀಕ್ಷಾ ವಿಧಾನ ಹಾಗೂ ರಕ್ತ ಘಟಕಗಳ ಪ್ರಕ್ರಿಯೆಗಳ ಕುರಿತು ಸಿಬ್ಬಂದಿಯಾದ ಶ್ರೀ ವೀರೇಂದ್ರ ವಿವರವಾದ ಮಾಹಿತಿ ನೀಡಿ, ಸಿಬ್ಬಂದಿಗಳ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ವಿವಿಧ ವಿಭಾಗಗಳನ್ನು ವೀಕ್ಷಿಸಿದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. ಕೆ. ಉಮೇಶ್ ಶೆಟ್ಟಿ, ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಕಾರ್ಯಕ್ರಮ ಸಂಯೋಜಿಸಿದರು. ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಕುಂದಾಪುರ ಇದರ ಸಭಾಪತಿಗಳಾದ ಶ್ರೀ ಜಯಕರ್ ಶೆಟ್ಟಿ, ಖಜಾಂಚಿಗಳಾದ ಶ್ರೀ ಶಿವರಾಮ್ ಶೆಟ್ಟಿ ಹಾಗೂ ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕದ ಕಾರ್ಯಕ್ರಮ ಅಧಿಕಾರಿಯಾದ ಶ್ರೀ ಯೋಗೀಶ್ ಶ್ಯಾನುಭೋಗ್ ಉಪಸ್ಥಿತರಿದ್ದರು.

Categories
ಕರಾವಳಿ ಸುದ್ದಿ

ಬಿ. ಬಿ. ಹೆಗ್ಡೆ ಕಾಲೇಜಿನಲ್ಲಿ ಸ್ವಯಂ ಕೋರ್ಸ್ ಕುರಿತು ಮಾಹಿತಿ

ಕುಂದಾಪುರ : ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ದಿನಾಂಕ ಡಿಸೆಂಬರ್ 25ರಂದು ಪ್ರಥಮ ಹಾಗೂ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ SWAYAM ಕೋರ್ಸ್ನ ಪರಿಚಯ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. ಕೆ. ಉಮೇಶ್ ಶೆಟ್ಟಿಯರು ಹೆಚ್ಚುವರಿ ಕೋರ್ಸ್ ಗಳಿಂದಷ್ಟೇ ಜಾಗತಿಕ ಮಾರುಕಟ್ಟೆಯಲ್ಲಿ ಯಶಸ್ಸು ಗಳಿಸಲು ಸಾಧ್ಯ ಎಂದು ಹೇಳಿದರು.
ವಿಭಾಗದ ಮುಖ್ಯಸ್ಥರಾದ ಶ್ರೀ ಮಹೇಶ್ ಕುಮಾರ್ ಪ್ರಥಮ ಹಾಗೂ ದ್ವಿತೀಯ ವರ್ಷದ ಸುಮಾರು 1200 ವಿದ್ಯಾರ್ಥಿಗಳಿಗೆ NPTELನ ವಿವಿಧ SWAYAM ಕೋರ್ಸ್ಗಳ ಬಗ್ಗೆ ಮಾರ್ಗದರ್ಶನ ನೀಡಿದರು.
ಕಾರ್ಯಕ್ರಮ ಸಂಯೋಜಕರಾದ ಶ್ರೀಕಾಂತ್ ಕಣಿಯಾರ್ ವಿಶಿಷ್ಟ ಶ್ರೇಣಿಯಲ್ಲಿ ಸಾಧನೆಗೈದವರ ಪಟ್ಟಿಯನ್ನು ವಾಚಿಸಿದರು. ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ ಮತ್ತು ಕಾರ್ಯಕ್ರಮ ಸಂಯೋಜಕರಾದ ರಶ್ಮಿ ಗಾವಡಿ ಹಾಗೂ ಪ್ರಾಧ್ಯಾಪಕರು ಉಪಸ್ಥಿತರಿದ್ದರು.
ಬಿಸಿಎ ವಿದ್ಯಾರ್ಥಿಗಳಾದ ಅಪೂರ್ವ ಸ್ವಾಗತಿಸಿ, ಸಿಂಚನಾ ಅತಿಥಿಗಳನ್ನು ಪರಿಚಯಿಸಿ, ರೈನಲ್ ವಂದಿಸಿ, ಸಾನಿಕಾ ಕಾರ್ಯಕ್ರಮವನ್ನು ನಿರೂಪಿಸಿದರು.

Categories
ಕರಾವಳಿ ಸುದ್ದಿ

ರಾಷ್ಟ್ರೀಯ ಪುಸ್ತಕ ಸಪ್ತಾಹ ೨೦೨೫

ಕೋಟೇಶ್ವರ : ಗ್ರಂಥಾಲಯಗಳು ಕೇವಲ ಪುಸ್ತಕಗಳ ಭಂಡಾರವಲ್ಲ, ಇವು ಜ್ಞಾನ, ಸಂಸ್ಕಾರ ಹಾಗೂ ಸಂಸ್ಕೃತಿಗಳನ್ನು ಪಸರಿಸುವ ಕೇಂದ್ರಗಳು. ವಿದ್ಯಾರ್ಥಿಗಳು ಕೇವಲ ಪಠ್ಯಕ್ರಮಕ್ಕೆ ಸೀಮಿತವಾಗಿರದೆ ಗ್ರಂಥಾಲಯದಲ್ಲಿರುವ ಇತರೆ ಸಂಪನ್ಮೂಲಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಬದುಕಿನುದ್ದಕ್ಕೂ ಸವಾಲುಗಳನ್ನು ಎದುರಿಸುವ ಈ ಕಾಲಘಟ್ಟದಲ್ಲಿ ವಿಷಯಗಳನ್ನು ಅರಿಯುವುದು ಬಹಳ ಮುಖ್ಯವಾಗಿರುತ್ತದೆ. ಮುಂದೆ ಎದುರಿಸಬೇಕಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಾಗಲೀ ಅಥವಾ ಜೀವನದ ಯಾವುದೇ ಸವಾಲುಗಳನ್ನು ಸಮರ್ಪಕವಾಗಿ ಎದುರಿಸುವ ಸಾಮರ್ಥ್ಯವನ್ನು ಪಡೆಯಬಹುದು. ಯುವಜನರನ್ನು ಉತ್ತಮ ನಾಗರೀಕರನ್ನಾಗಿಸಿ ಸಮಾಜಕ್ಕೆ ಮೌಲ್ಯಗಳನ್ನು ಬಿತ್ತರಿಸಲು ಗ್ರಂಥಾಲಯಗಳೇ ಅಡಿಪಾಯ ಎಂದು ಸ್ಥಳೀಯ ಗುತ್ತಿಗೆದಾರರಾದ ಜೆ.ಪಿ. ಶೆಟ್ಟಿ ಕಟ್ಕೆರೆ ಅಭಿಪ್ರಾಯ ಪಟ್ಟರು. ಇವರು ಕೋಟೇಶ್ವರ ಶ್ರೀ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಪುಸ್ತಕ ಸಪ್ತಾಹದ ಅಂಗವಾಗಿ ಆಯೋಜಿಸಲಾಗಿದ್ದ ಪುಸ್ತಕ ಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ಅಧ್ಯಕ್ಷೀಯ ನುಡಿಗಳನ್ನಾಡಿ, ಈ ಪುಸ್ತಕ ಪ್ರದರ್ಶನವು ವಿದ್ಯಾರ್ಥಿಗಳಲ್ಲಿ ಓದುವ ಸಂಸ್ಕೃತಿ ಬೆಳೆಸುವ ಜೊತೆಗೆ ಗ್ರಂಥಾಲಯ ಬಳಕೆಯ ಮೇಲೆ ಹೊಸ ಚೈತನ್ಯವನ್ನು ಮೂಡಿಸಿದೆ ಎಂದರು. ಕಾರ್ಯಕ್ರಮದ ಅಂಗವಾಗಿ ವಿವಿಧ ವಿಷಯಗಳ ಪುಸ್ತಕಗಳು, ಕಾದಂಬರಿಗಳು, ಜೀವನ ಚರಿತ್ರೆಗಳು, ಸ್ಪರ್ಧಾತ್ಮಕ ಪರೀಕ್ಷಾ ಪುಸ್ತಕಗಳು, ನಿಘಂಟುಗಳು, ಎನ್ಸೆöÊಕ್ಲೋಪೀಡಿಯ ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಸಂಬಂಧಪಟ್ಟ ಪುಸ್ತಕಗಳ ಸಂಗ್ರಹವನ್ನು ಪ್ರದರ್ಶಿಸಲಾಯಿತು. ಬಹು ಸಂಖ್ಯೆಯಲ್ಲಿ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿ ಪುಸ್ತಕಗಳ ಬಗ್ಗೆ ಮಾಹಿತಿ ಪಡೆದರು. ಎಸ್.ಎಲ್. ಭೈರಪ್ಪನವರಿಂದ ರಚಿಸಲ್ಪಟ್ಟ ಎಲ್ಲಾ ಕೃತಿಗಳನ್ನು ಕೂಡ ಈ ಸಂದರ್ಭದಲ್ಲಿ ಪ್ರದರ್ಶಿಸಲಾಯಿತು. ಕಾರ್ಯಕ್ರಮಕ್ಕೆ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ಪ್ರೊಫೆಸರ್ ಹರೀಶ್ ಟಿ.ಜಿ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರಾದ ನಿವೃತ್ತ ಶಿಕ್ಷಕಿ ಸೂರ್ಯಕಾಂತಿಯವರು ಆಗಮಿಸಿದ್ದರು. ಐಕ್ಯೂಎಸಿ ಸಂಚಾಲಕರಾದ ನಾಗರಾಜ ಯು., ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ನಾಗರಾಜ ವೈದ್ಯ ಎಂ., ಗ್ರಂಥಾಲಯ ಸಮಿತಿಯ ವಿದ್ಯಾರ್ಥಿ ಪ್ರತಿನಿಧಿಗಳಾದ ವಿದ್ಯಾ ಶೇಟ್, ಆದರ್ಶ ಗಾಣಿಗ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಸಂಘಟಿಸಿದ ಕಾಲೇಜಿನ ಗ್ರಂಥಪಾಲಕರಾದ ವೆಟರನ್ ರವಿಚಂದ್ರ ಹೆಚ್.ಎಸ್. ಪ್ರಾಸ್ತಾವಿಕ ನುಡಿಗಳೊಂದಿಗೆ ಸ್ವಾಗತಿಸಿದರು. ಅಂತಿಮ ಬಿ.ಸಿ.ಎ ವಿದ್ಯಾರ್ಥಿನಿ ವೈಷ್ಣವಿ ಮತ್ತು ತಂಡ ಪ್ರಾರ್ಥಿಸಿದರು, ವಿದ್ಯಾ ಶೆಟ್ ನಿರೂಪಿಸಿದ ಈ ಕಾರ್ಯಕ್ರಮದಲ್ಲಿ ದೀಪಾ ವಂದಿಸಿದರು.
Categories
ಕರಾವಳಿ ಸುದ್ದಿ

ಆವಿಷ್ಕಾರ ಅಂಗಳದಿಂದ ಜಿಲ್ಲಾಮಟ್ಟಕ್ಕೆ ಪುಟಿದ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಶಾಲೆಯ ವಿಜ್ಞಾನ ಮಾದರಿ

ಕಿರಿಮಂಜೇಶ್ವರ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೈಂದೂರು ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಬೈಂದೂರು ಹಾಗೂ ಕರ್ನಾಟಕ ಪಬ್ಲಿಕ್ ಸ್ಕೂಲ್ ವಂಡ್ಸೆ ನೆನಪು ಇವರ ಸಂಯುಕ್ತ ಆಶ್ರಯದಲ್ಲಿ ನವಂಬರ್ 28ರಂದು ನಡೆದ ಬೈಂದೂರು ತಾಲೂಕುಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ‘ಆವಿಷ್ಕಾರ ಅಂಗಳ – 2K25’ ಇದರಲ್ಲಿ ಭಾಗವಹಿಸಿದ ಕಿರಿಮಂಜೇಶ್ವರ ಜನತಾ ಇಂಗ್ಲಿಷ್ ಮೀಡಿಯಂ ಶಾಲೆ ವಿಜ್ಞಾನ ಮಾದರಿ ಪ್ರಥಮ ಸ್ಥಾನ ಗಳಿಸುವುದರೊಂದಿಗೆ ತಾಲೂಕು ಮಟ್ಟದ ಪ್ರಶಸ್ತಿಯನ್ನು ತನ್ನ ತೆಕ್ಕೆಗೇರಿಸಿಕೊಂಡಿದೆ. ಯುವ ವಿಜ್ಞಾನಿಗಳಾದ ಮೊಹಮ್ಮದ್ ಅಶ್ರಫ್ ಒಂಬತ್ತನೇ ತರಗತಿ ಹಾಗೂ ಶ್ರೀಶಾಂತ್ ಒಂಬತ್ತನೇ ತರಗತಿ ಇವರು ತಯಾರಿಸಿದ ಸ್ಮಾರ್ಟ್ ಸಿಟಿ ಎಂಬ ಮಾದರಿ ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸುವುದರೊಂದಿಗೆ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ವಿದ್ಯಾರ್ಥಿಗಳಿಗೆ ವಿಜ್ಞಾನ ಶಿಕ್ಷಕಿ ಕುಮಾರಿ ರಕ್ಷ ಇವರು ಮಾರ್ಗದರ್ಶನವನ್ನು ನೀಡಿರುತ್ತಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದಂತಹ ಶ್ರೀ ಗಣೇಶ ಮೊಗವೀರ ಹಾಗೂ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ದೀಪಿಕಾ ಆಚಾರ್ಯ ಇವರು ಪ್ರಶಂಸಿಸಿದರು.
ಶಾಲೆಯ ಬೋಧಕ ಮತ್ತು ಬೋಧಕೇತರ ವೃಂದದವರು ಅಭಿನಂದಿಸಿದರು.

Categories
ಪಂಚಾಂಗ

ಶುಭ ದಿನದ ಪಂಚಾಂಗ

ಶುಭ ದಿನದ ಪಂಚಾಂಗ

ಕಲಿಯುಗಾಬ್ದ 5127

ವಿಶ್ವಾವಸು ಸಂವತ್ಸರ

ದಕ್ಷಿಣಾಯನ

ಹೇಮಂತ: ಋತು

ಮಾರ್ಗಶಿರೆ: ಮಾಸ

ಶುಕ್ಲ ಪಕ್ಷ

ನವಮಿ: ತಿಥಿ

ಪೂರ್ವಭಾದ್ರೆ: ನಕ್ಷತ್ರ

ಶನಿವಾರ

29.11.2025

ಈ ದಿನ ಎಲ್ಲರಿಗೂ ಶುಭವಾಗಲಿ