Categories
ಪಂಚಾಂಗ

ಶುಭ ದಿನದ ಪಂಚಾಂಗ

ಶುಭ ದಿನದ ಪಂಚಾಂಗ

ಕಲಿಯುಗಾಬ್ದ 5128

ಪರಾಭವ ಸಂವತ್ಸರ

ಉತ್ತರಾಯಣ

ಗ್ರೀಷ್ಮ : ಋತು

ಆಷಾಢ : ಮಾಸ

ಶುಕ್ಲ  ಪಕ್ಷ

ಅಷ್ಟಮಿ : ತಿಥಿ

ಚಿತ್ರೆ : ನಕ್ಷತ್ರ

ಮಂಗಳವಾರ

21.07.2026

ಈ ದಿನ ಎಲ್ಲರಿಗೂ ಶುಭವಾಗಲಿ

Categories
ಶಿಕ್ಷಣ

ಕರ್ನಾಟಕ ಪಬ್ಲಿಕ್ ಸ್ಕೂಲ್, ಕೋಟೇಶ್ವರದಲ್ಲಿ ವಿದ್ಯಾರ್ಥಿ ಸರ್ಕಾರ ಹಾಗೂ ವಿವಿಧ ಸಂಘಗಳ ಉದ್ಘಾಟನೆ

ಕರ್ನಾಟಕ ಪಬ್ಲಿಕ್ ಸ್ಕೂಲ್, ಕೋಟೇಶ್ವರದ ಪ್ರೌಢಶಾಲಾ ವಿಭಾಗದಲ್ಲಿ ವಿದ್ಯಾರ್ಥಿ ಸರ್ಕಾರ ಹಾಗೂ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ ಅತ್ಯಂತ ಅರ್ಥಪೂರ್ಣವಾಗಿ ಹಾಗೂ ಸಂಭ್ರಮದಿಂದ ನಡೆಯಿತು.
ಕಾರ್ಯಕ್ರಮವನ್ನು ಶ್ರೀ ನಿರಂಜನ್ ಹೆಗಡೆ, ವಕೀಲರು , ಕುಂದಾಪುರ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಶಿಸ್ತು, ನಾಯಕತ್ವ, ಜವಾಬ್ದಾರಿ ಮತ್ತು ಸೇವಾ ಮನೋಭಾವವನ್ನು ಅಳವಡಿಸಿಕೊಂಡು ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕು ಎಂದು ಕರೆ ನೀಡಿದರು. ವಿದ್ಯಾರ್ಥಿ ಸರ್ಕಾರವು ಶಾಲೆಯ ಅಭಿವೃದ್ಧಿಗೆ ಪೂರಕವಾಗಿ ಕಾರ್ಯನಿರ್ವಹಿಸುವುದರ ಜೊತೆಗೆ ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ನಾಯಕತ್ವದ ಗುಣಗಳನ್ನು ಬೆಳೆಸುವ ವೇದಿಕೆಯಾಗಬೇಕು ಎಂದು ತಿಳಿಸಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಶ್ರೀ ಶಾಜಿ ಅಬ್ರಹಾಂ, ವಕೀಲರು , ಕುಂದಾಪುರ ಅವರು ನೂತನ ವಿದ್ಯಾರ್ಥಿ ಸರ್ಕಾರ ಹಾಗೂ ವಿವಿಧ ಸಂಘಗಳ ಅಧ್ಯಕ್ಷರಿಗೆ ಪ್ರತಿಜ್ಞಾವಿಧಿಯನ್ನು ಬೋಧಿಸಿ, ತಮ್ಮ ಕರ್ತವ್ಯಗಳನ್ನು ಪ್ರಾಮಾಣಿಕತೆ, ಶಿಸ್ತು ಹಾಗೂ ಸೇವಾ ಮನೋಭಾವದಿಂದ ನಿರ್ವಹಿಸುವಂತೆ ಕರೆ ನೀಡಿದರು. ಬಳಿಕ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ನಾಯಕತ್ವ, ಪ್ರಾಮಾಣಿಕತೆ, ಆತ್ಮವಿಶ್ವಾಸ ಮತ್ತು ಸಾಮಾಜಿಕ ಹೊಣೆಗಾರಿಕೆಯ ಮಹತ್ವವನ್ನು ವಿವರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಚಂದ್ರಶೇಖರ್ ಶೆಟ್ಟಿ, ಉಪ ಪ್ರಾಂಶುಪಾಲರು, ಕರ್ನಾಟಕ ಪಬ್ಲಿಕ್ ಸ್ಕೂಲ್, ಕೋಟೇಶ್ವರ ವಹಿಸಿ, ವಿದ್ಯಾರ್ಥಿ ಸರ್ಕಾರವು ಶಾಲೆಯಲ್ಲಿ ಶಿಸ್ತು, ಸಂಘಟನೆ ಹಾಗೂ ನಾಯಕತ್ವವನ್ನು ಬೆಳೆಸುವ ಮಹತ್ವದ ವೇದಿಕೆಯಾಗಿದೆ ಎಂದು ಹೇಳಿದರು.
ಶ್ರೀಮತಿ ಜಯಶ್ರೀ ಭಟ್, ಹಿರಿಯ ಶಿಕ್ಷಕರು ಗೌರವ ಉಪಸ್ಥಿತರಾಗಿ ಕಾರ್ಯಕ್ರಮಕ್ಕೆ ಮೆರುಗು ತಂದರು.

ವಿದ್ಯಾರ್ಥಿ ಸರಕಾರ ಮತ್ತು ವಿವಿಧ ಸಂಘಗಳ ಉದ್ಘಾಟನಾ ಕಾರ್ಯಕ್ರಮದ ಸಂಪೂರ್ಣ ಉಸ್ತುವಾರಿ ವಹಿಸಿದ್ದ ಶಿಕ್ಷಕಿ ನಾಗರತ್ನ ಎಂ ಅತಿಥಿಗಳನ್ನು ಪರಿಚಯಿಸಿದರು

ಈ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿ ಮುಖಂಡ ರುದ್ರ ಹಾಗೂ ಶಾಲಾ ವಿದ್ಯಾರ್ಥಿನಿ ಮುಖಂಡೆ ಖುಷಿ ದೇವಾಡಿಗ ಅವರ ನೇತೃತ್ವದಲ್ಲಿ ನೂತನ ವಿದ್ಯಾರ್ಥಿ ಸರ್ಕಾರ ಹಾಗೂ ವಿವಿಧ ಸಂಘಗಳ ಪದಾಧಿಕಾರಿಗಳು ಅಧಿಕಾರ ಸ್ವೀಕರಿಸಿದರು.

ಕಾರ್ಯಕ್ರಮವನ್ನು ಸಹ ಶಿಕ್ಷಕಿ ಶ್ರೀಮತಿ ಅನುರಾಧ ಅವರು ಅಚ್ಚುಕಟ್ಟಾಗಿ ನಿರೂಪಿಸಿದರು. ಶ್ರೀ ರಮಾನಂದ್, ಶಿಕ್ಷಕರು ಎಲ್ಲರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಶ್ರೀ ಉದಯ ಮಡಿವಾಳ ಎಂ., ದೈಹಿಕ ಶಿಕ್ಷಣ ಶಿಕ್ಷಕರು ವಂದನಾರ್ಪಣೆ ಸಲ್ಲಿಸಿದರು.

ಶಿಕ್ಷಕ ವೃಂದ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉತ್ಸಾಹದಿಂದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ವಿದ್ಯಾರ್ಥಿಗಳಲ್ಲಿ ನಾಯಕತ್ವ, ಜವಾಬ್ದಾರಿ, ಸೇವಾ ಮನೋಭಾವ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬೆಳೆಸುವ ಉದ್ದೇಶದಿಂದ ಆಯೋಜಿಸಲಾದ ಈ ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.

Categories
ಶಿಕ್ಷಣ

ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ : ” ವಿದ್ಯಾರ್ಥಿ ನಾಯಕರ ಪದಗ್ರಹಣ ಸಮಾರಂಭ”

ಕಿರಿಮಂಜೇಶ್ವರ : ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ನೂತನ ವಿದ್ಯಾರ್ಥಿಗಳ ಪದಗ್ರಹಣ ಸಮಾರಂಭವು ಅದ್ದೂರಿಯಾಗಿ ನಡೆಯಿತು.
ಈ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ಹೆಮ್ಮಾಡಿಯ ಜನತಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಜಗದೀಶ ಶೆಟ್ಟಿಯವರು ವಿದ್ಯಾರ್ಥಿ ನಾಯಕರುಗಳನ್ನುದ್ದೇಶಿಸಿ ಮಾತನಾಡುತ್ತಾ ” ವಿದ್ಯಾರ್ಥಿಗಳಿಗೆ ಪ್ರಾಢಶಾಲೆಯ ಹಂತದಲ್ಲೇ ನಾಯಕತ್ವದ ಜವಾಬ್ದಾರಿಯನ್ನು ವಹಿಸುವ ಮೂಲಕ ಅವರಲ್ಲಿ ವಿವಿಧ ಕೌಶಲ್ಯಗಳನ್ನು ಉತ್ತೇಜಿಸಲು ಅನುಕೂಲವಾಗುತ್ತದೆ. ಶಿಸ್ತು, ಸಹಕಾರ, ತಾಳ್ಮೆ, ಪರೋಪಕಾರದ ಗುಣಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಲು ಇದು ಅತ್ಯುತ್ತಮ ಅವಕಾಶವಾಗಿದೆ. ಇಂದಿನ ಮಕ್ಕಳೇ ಮುಂದಿನ ಪ್ರಜೆಗಳಾಗಿರುವುದರಿಂದ ಅವರಿಗೆ ಕಲಿಕೆಯ ಹೆಚ್ಚಿನ ಅವಕಾಶಗಳನ್ನು ಶಾಲೆ ಒದಗಿಸಬೇಕು” ಎಂದು ತಿಳಿಸಿದರು.
ಈ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಜನತಾ ಸಮೂಹ ಸಂಸ್ಥೆಗಳ ಅಧ್ಯಕ್ಷರು ಹಾಗೂ ಹೆಮ್ಮಾಡಿಯ ಜನತಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರರು ತಮ್ಮ ಅಧ್ಯಕ್ಷೀಯ ನುಡಿಗಳಲ್ಲಿ ” ನಮ್ಮ ದೇಶವು ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, ವಿದ್ಯಾರ್ಥಿಗಳಲ್ಲಿ ಪ್ರಜಾಸತ್ತಾತ್ಮಕ ಮೌಲ್ಯಗಳ ಬಗ್ಗೆ ಜಾಗೃತಿಯನ್ನು ಮೂಡಿಸುವುದು ನಮ್ಮ ಧ್ಯೇಯವಾಗಿದೆ. ಚುನಾವಣಾ ವಿಧಾನದ ಮೂಲಕ ವಿದ್ಯಾರ್ಥಿ ನಾಯಕರುಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು, ನಾಯಕರಲ್ಲಿ ಇರಬೇಕಾದ ಗುಣಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿಕೊಡಲಾಗಿದೆ. ವಿದ್ಯಾರ್ಥಿಗಳು ಅಧಿಕಾರವನ್ನು ದುರುಪಯೋಗ ಮಾಡಿಕೊಳ್ಳದೆ, ಅದನ್ನು ಸೇವಾ ಮನೋಭಾವದಿಂದ ನಿರ್ವಹಿಸಬೇಕು” ಎಂದು ಕರೆಕೊಟ್ಟರು.

9ನೇ ತರಗತಿಯ ಪ್ರಥಮ್ ವಿದ್ಯಾರ್ಥಿ ನಾಯಕನಾಗಿ, 9ನೇ ತರಗತಿಯ ನವ್ಯಾ ಆಚಾರ್ಯ ವಿದ್ಯಾರ್ಥಿ ನಾಯಕಿಯಾಗಿ, 9ನೇ ತರಗತಿಯ ಆರ್ಯನ್ ಕ್ರೀಡಾ ಮಂತ್ರಿಯಾಗಿ, 9ನೇ ತರಗತಿಯ ಪ್ರೀತಮ್ ಶಿಸ್ತು ಮತ್ತು ಸ್ವಚ್ಛತಾ ಮಂತ್ರಿಯಾಗಿ, 8ನೇ ತರಗತಿಯ ಕುಮಾರಿ ಉತ್ಸವಿ ಸಾಂಸ್ಕೃತಿಕ ಮಂತ್ರಿಯಾಗಿ, 8ನೇ ತರಗತಿಯ ಸಚೀತ್ ಆಹಾರ ನಿರ್ವಹಣಾ ಮಂತ್ರಿಯಾಗಿ ಆಯ್ಕೆಗೊಂಡರು. ಶಾಲಾ ಸಂಯೋಜಕರಾದ ಸುಬ್ರಮಣ್ಯ ಮಾರಾಟಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.
ಜನತಾ ಸಮೂಹ ಸಂಸ್ಥೆಗಳ ಕಾರ್ಯದರ್ಶಿಗಳಾದ ಶ್ರೀಮತಿ ಶ್ಯಾಮಲಾ ಗಣೇಶ ಮೊಗವೀರ ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ದೀಪಿಕಾ ಆಚಾರ್ಯ ಸ್ವಾಗತಿಸಿದರು. ಶಾಲಾ ಸಾಂಸ್ಕೃತಿಕ ವಿಭಾಗದ ಸಂಯೋಜಕರಾದ ರಾಘವೇಂದ್ರ ದುರ್ಗಾ ಬಿಲ್ಲವ ವಂದಿಸಿದರೆ, ಸಹಶಿಕ್ಷಕಿ ವನಿತಾ ಕಾರ್ಯಕ್ರಮ ನಿರ್ವಹಿಸಿದರು.

Categories
ಪಂಚಾಂಗ

ಶುಭ ದಿನದ ಪಂಚಾಂಗ

ಶುಭ ದಿನದ ಪಂಚಾಂಗ

ಕಲಿಯುಗಾಬ್ದ 5128

ಪರಾಭವ ಸಂವತ್ಸರ

ಉತ್ತರಾಯಣ

ಗ್ರೀಷ್ಮ : ಋತು

ಆಷಾಢ : ಮಾಸ

ಶುಕ್ಲ  ಪಕ್ಷ

ಸಪ್ತಮಿ : ತಿಥಿ

ಹಸ್ತ : ನಕ್ಷತ್ರ

ಸೋಮವಾರ

20.07.2026

ಈ ದಿನ ಎಲ್ಲರಿಗೂ ಶುಭವಾಗಲಿ

Categories
ಪಂಚಾಂಗ

ಶುಭ ದಿನದ ಪಂಚಾಂಗ

ಶುಭ ದಿನದ ಪಂಚಾಂಗ

ಕಲಿಯುಗಾಬ್ದ 5128

ಪರಾಭವ ಸಂವತ್ಸರ

ಉತ್ತರಾಯಣ

ಗ್ರೀಷ್ಮ : ಋತು

ಆಷಾಢ : ಮಾಸ

ಶುಕ್ಲ  ಪಕ್ಷ

ಷಷ್ಠಿ : ತಿಥಿ

ಉತ್ತರೆ : ನಕ್ಷತ್ರ

ಭಾನುವಾರ

19.07.2026

ಈ ದಿನ ಎಲ್ಲರಿಗೂ ಶುಭವಾಗಲಿ

Categories
ಕರಾವಳಿ ಸುದ್ದಿ

ಗ್ರಾಮೀಣ ಆಚಾರ ವಿಚಾರಗಳನ್ನು ಉಳಿಸಿ ಬೆಳೆಸಿದಾಗ ಉತ್ತಮ ಸಮಾಜ ನಿರ್ಮಾಣ ಸಾಧ್ಯ : ಯಶ್ಪಾಲ್ ಸುವರ್ಣ

ಗ್ರಾಮೀಣ ಪ್ರದೇಶಗಳ ಆಚಾರ ವಿಚಾರಗಳನ್ನು ಯುವ ಪೀಳಿಗೆಗೆ ಮತ್ತೆ ಮತ್ತೆ ನೆನಪಿಸುವ ಜೊತೆಗೆ ಅಳವಡಿಸಿಕೊಂಡಾಗ ಉತ್ತಮ ಸಮಾಜ ನಿರ್ಮಾಣ ಸಾಧ್ಯ. ಈ ನಿಟ್ಟಿನಲ್ಲಿ ಗ್ರಾಮೀಣ ಗದ್ದೆಯಲ್ಲಿ ಸಾಮೂಹಿಕ ನೇಜಿ ನೆಡುವ ‘ನಟ್ಟಿ’ ಕಾರ್ಯಕ್ರಮದ ಜೊತೆಗೆ ಹಿರಿಯ ಕೃಷಿಕರನ್ನು ಗೌರವಿಸಿರುವ ಬಿಜೆಪಿ ಉಡುಪಿ ನಗರ ಮಹಿಳಾ ಮೋರ್ಚಾ ತಂಡದ ಪ್ರಯತ್ನ ಶ್ಲಾಘನೀಯ ಎಂದು ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ ಹೇಳಿದರು.

ಅವರು ಬಿಜೆಪಿ ಉಡುಪಿ ನಗರ ಮಹಿಳಾ ಮೋರ್ಚಾದ ವತಿಯಿಂದ ಅಧ್ಯಕ್ಷೆ ನೀತಾ ಪ್ರಭು ನೇತೃತ್ವದಲ್ಲಿ ಅಂಬಲಪಾಡಿ ಬಂಕೇರ್ಕಟ್ಟ ಗದ್ದೆಯಲ್ಲಿ ಸ್ಥಳೀಯ ಕಾರ್ಯಕರ್ತರ ಸಹಕಾರದೊಂದಿಗೆ ನಡೆದ ಸಾಮೂಹಿಕ ನೇಜಿ ನೆಡುವ ‘ನಟ್ಟಿ’ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.

‘ಏಕ್ ಪೇಡ್ ಮಾ ಕೇ ನಾಮ್’ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಕರೆಯಂತೆ ಎಲ್ಲರೂ ‘ತಾಯಿಯ ಹೆಸರಲ್ಲಿ ಒಂದೊಂದು ಗಿಡ’ ನೆಡುವ ಮೂಲಕ ಪರಿಸರ ಸಂರಕ್ಷಣೆಗೂ ಕೊಡುಗೆ ನೀಡುವಂತಾಗಬೇಕು. ಕಾಂಗ್ರೆಸ್ ನಿಂದ ನಿರಂತರ ಜನತೆಯ ದಾರಿ ತಪ್ಪಿಸುವ ಕೆಲಸ ಕಾರ್ಯಗಳು ನಡೆಯುತ್ತಿರುವ ಕಾಲಘಟ್ಟದಲ್ಲಿ ಪಕ್ಷದ ಕಾರ್ಯಕರ್ತರು ಸದಾ ಜಾಗೃತರಾಗಿದ್ದು ರಾಷ್ಟ್ರೀಯ ಚಿಂತನೆಯೊಂದಿಗೆ ಸಮಾಜಮುಖಿ ಸೇವೆಯ ಜೊತೆಗೆ ಸದೃಢ ಪಕ್ಷ ಸಂಘಟನೆಗೆ ಒತ್ತು ನೀಡಬೇಕು ಎಂದು ಅವರು ಕರೆ ನೀಡಿದರು.

ಹಿರಿಯ ಪ್ರಗತಿಪರ ಕೃಷಿಕರಾದ ಸರೋಜಿನಿ ಪೂಜಾರ್ತಿ, ಜಾನಕಿ ಪೂಜಾರ್ತಿ, ಭವಾನಿ ಪೂಜಾರ್ತಿ, ಸಂಜೀವಿನಿ ಒಕ್ಕೂಟದ ಕೃಷಿ ಸಖಿ ಸವಿತಾ ಸಂತೋಷ್ ಹಾಗೂ ಕಾರ್ಯಕ್ರಮಕ್ಕೆ ಸಹಕಾರವನಿತ್ತ ವಾಣಿ ಪ್ರಭಾಕರ್ ಅವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಎಸ್ಐಆರ್ ಮಂಗಳೂರು ವಿಭಾಗ ಸಂಚಾಲಕ ಕೆ.ಉದಯಕುಮಾರ್ ಶೆಟ್ಟಿ, ಬಿಜೆಪಿ ಉಡುಪಿ ನಗರಾಧ್ಯಕ್ಷ ದಿನೇಶ್ ಅಮೀನ್, ಉಡುಪಿ ನಗರಸಭೆಯ ನಿಕಟಪೂರ್ವ ಅಧ್ಯಕ್ಷ ಪ್ರಭಾಕರ ಪೂಜಾರಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್, ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ವಕ್ತಾರ ಮಧುಕರ ಮುದ್ರಾಡಿ, ಜಿಲ್ಲಾ ಒಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಪಂದುಬೆಟ್ಟು, ಬಿಜೆಪಿ ಉಡುಪಿ ನಗರ ಪ್ರಧಾನ ಕಾರ್ಯದರ್ಶಿ ಜಗದೀಶ್ ಆಚಾರ್ಯ, ನಗರ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ತ್ರಿವೇಣಿ ಅಮೀನ್, ನಗರ ಎಸ್.ಟಿ. ಮೋರ್ಚಾ ಅಧ್ಯಕ್ಷೆ ಸುಮಾ ನಾಯ್ಕ್, ನಗರಸಭಾ ಸದಸ್ಯ ಹರೀಶ್ ಶೆಟ್ಟಿ, ಬಿಜೆಪಿ ಅಂಬಲಪಾಡಿ ಗ್ರಾಮಾಂತರ ಅಧ್ಯಕ್ಷ ಗಿರೀಶ್ ಅಮೀನ್, ಅಂಬಲಪಾಡಿ ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷೆ ಸುಜಾತ ಶೆಟ್ಟಿ, ಮಾಜಿ ಅಧ್ಯಕ್ಷೆ ಭಾರತಿ ಭಾಸ್ಕರ್, ಮಾಜಿ ಗ್ರಾಮ ಪಂಚಾಯತ್ ಸದಸ್ಯ ರಾಜೇಶ್ ಸುವರ್ಣ, ಬೂತ್ ಅಧ್ಯಕ್ಷ ಹರೀಶ್ ಆಚಾರ್ಯ, ಶ್ರೀ ನಾಗರಾಜ ಸೇವಾ ಸಮಿತಿಯ ಅಧ್ಯಕ್ಷ ಶಿವಾಜಿ ಸನಿಲ್, ಗೌರವಾಧ್ಯಕ್ಷ ವಿಶ್ವನಾಥ ಹೆಗ್ಡೆ, ಎನ್.ಸಿ. ಯೂತ್ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಕ್ಲಬ್(ರಿ.) ಸಂಘಟನಾ ಕಾರ್ಯದರ್ಶಿ ನವೀನ್ ಸುವರ್ಣ, ಗೌರವ ಸಲಹೆಗಾರ ಸದಾನಂದ ಜಿ.ಕಾಂಚನ್ ಸಹಿತ ಬಿಜೆಪಿ ಉಡುಪಿ ನಗರ ಮಹಿಳಾ ಮೋರ್ಚಾ ಪದಾಧಿಕಾರಿಗಳು, ಪಕ್ಷದ ಪ್ರಮುಖರು, ಸಂಜೀವಿನಿ ಒಕ್ಕೂಟದ ಸದಸ್ಯೆಯರು, ಸ್ಥಳೀಯ ಯುವಕ-ಯುವತಿಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಸಾಂಪ್ರದಾಯಿಕವಾಗಿ ಗದ್ದೆಗೆ ಹಾಲೆರೆಯುವ ಮೂಲಕ ಸಾಮೂಹಿಕ ನೇಜಿ ನೆಡುವ ‘ನಟ್ಟಿ’ ಕಾರ್ಯಕ್ರಮ ಚಾಲನೆಗೊಂಡಿತು.

ಸ್ಥಳೀಯ ಮಹಿಳೆಯರ ಸಹಕಾರದಿಂದ ವಾಣಿ ಪ್ರಭಾಕರ್ ಅವರ ನಿವಾಸದಲ್ಲಿ ಸಾಮೂಹಿಕ ಸಹ ಭೋಜನದೊಂದಿಗೆ ‘ನಟ್ಟಿ’ ಕಾರ್ಯಕ್ರಮವು ಸಮಾಪನಗೊಂಡಿತು.

Categories
ಬ್ರೇಕಿಂಗ್ ನ್ಯೂಸ್

ಹಂದಿಗಳ ಸರಣಿ ಸಾವು : ವಿವಿಧ ಇಲಾಖೆಗಳೊಂದಿಗೆ ತುರ್ತು ಸಭೆ ನಡೆಸಿದ ಶಾಸಕ ಗಂಟಿಹೊಳೆ

ಕಳೆದ ಹಲವು ದಿನಗಳಿಂದ ಪತ್ರಿಕೆಗಳಲ್ಲಿ ವರದಿಯಾದಂತೆ ಕಾಡು ಹಂದಿಗಳು ಸಾವಿನ ಬಗ್ಗೆ ಇಲಾಖೆಗಳು ಕೈಗೊಳ್ಳುತ್ತಿರುವ ಮುಂಜಾಗೃತ ಕ್ರಮಗಳ ಬಗ್ಗೆ ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಗುರುರಾಜ್ ಶೆಟ್ಟಿ ಗಂಟಿಹೊಳೆಯವರು ಕುಂದಾಪುರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಆರೋಗ್ಯ, ಪಶು ವೈದ್ಯಕೀಯ ಹಾಗೂ ಅರಣ್ಯ ಇಲಾಖೆ ಮತ್ತು ಸ್ಥಳಿಯಾಡಳಿತದ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ರೋಗ ನಿಯಂತ್ರಣಕ್ಕೆ ಇಲಾಖೆಗಳು ಸಮನ್ವಯದಿಂದ ಕೆಲಸ ಮಾಡಲಿ :ಅರಣ್ಯ, ಆರೋಗ್ಯ, ಪಶು ಇಲಾಖೆ ಹಾಗೂ ಸ್ಥಳೀಯಾಡಳಿತಕ್ಕೆ ಸೂಚನೆ 

ಪ್ರಸ್ತುತ ಬೈಂದೂರು ಕ್ಷೇತ್ರದ ನಾಡ, ಹಟ್ಟಿಯಂಗಡಿ, ಆಲೂರು, ಹೆಮ್ಮಾಡಿ ಹಾಗೂ ಹಕ್ಲಾಡಿ ಪಂಚಾಯತ್ ವ್ಯಾಪ್ತಿಯಲ್ಲಿ ಈವರೆಗೆ 8 ಹಂದಿಗಳ ಕಳೇ ಬರ ಪತ್ತೆಯಾಗಿದ್ದು, ಅದರಲ್ಲಿ ಕಾಡು ಹಂದಿಗಳ ಜೊತೆಗೆ ನಾಡ ಹಂದಿಗಳೂ ಇರುವುದಾಗಿದೆ ಪತ್ತೆಯಾದ ಸಂಪೂರ್ಣ ಕೊಳೆತು ಹೋದವುಗಳನ್ನು ಹೊರತು ಪಡಿಸಿ ಉಳಿದ ಮೃತ ಹಂದಿಗಳ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ ಹಾಗೂ ಸ್ಯಾಂಪಲ್ ಪಡೆದು ಕೊಂಡು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ವರದಿ ಬಂದ ಮೇಲೆ ಸಾವಿಗೆ ನಿಖರ ಕಾರಣ ಹಾಗೂ ಉಳಿದ ಕ್ರಮ ಕೈಗೊಳ್ಳಲಾಗುವುದು ಎಂದು ಕುಂದಾಪುರ ತಾಲೂಕು ಮುಖ್ಯ ಪಶು ವೈದ್ಯಾಧಿಕಾರಿಗಳು ಸಭೆಗೆ ಮಾಹಿತಿ ನೀಡಿ ದರು.ಇದಕ್ಕುತ್ತರಿಸಿದ ಶಾಸಕರು ಪ್ರಯೋಗಾಲಯದ ವರದಿ ಬರುವ ಮುನ್ನ ಈ ರೋಗವು ವ್ಯಾಪಕವಾಗಿ ಹರಡದಂತೆ ನಾಲ್ಕು ಇಲಾಖೆಗಳೂ ಪರಸ್ಪರ ಹೊಣೆಯರಿತು ತಂಡವಾಗಿ ಕಾರ್ಯ ಪ್ರವೃತ್ತರಾಗಲು ಸೂಚಿಸಿದರು.*

ಜನರ ಆತಂಕ ನಿವಾರಣೆ ಮಾಡಿ :

ಹಂದಿಗಳ ಸರಣಿ ಸಾವುಗಳ ಬಗ್ಗೆ ಸ್ಥಳೀಯ ಗ್ರಾಮಸ್ಥರು ಭಯ ಭೀತರಾಗಿದ್ದಾರೆ. ಹಂದಿಗಳು ಕೊಳೆತು ವಾಸನೆಯಿಂದ ಸುತ್ತ ಮುತ್ತಲಿನ ಪರಿಸರದಲ್ಲಿ ಓಡಾಡಲು ಆಗದೇ ಇರುವುದು ಹಾಗೂ ಹಂದಿಗಳ ಸಾವಿನ ಹಿಂದಿರುವ ರೋಗದಿಂದ ಇತರೆ ಸಾಕು ಪ್ರಾಣಿಗಳಿಗೆ ಹಾಗೂ ಮನುಷ್ಯರಿಗೆ ತೊಂದರೆ ಆಗುವ ಬಗ್ಗೆ ಗೊಂದಲದಲ್ಲಿ ಗ್ರಾಮಸ್ಥರು ಇದ್ದಾರೆ. ಹಾಗಾಗಿ ಸ್ಥಳೀಯಾಡಳಿತ ಸಂಸ್ಥೆಗಳು ಇತರೆ ಇಲಾಖೆಗಳ ಸಲಹೆ ಪಡೆದು ಜನರ ಆತಂಕ ದೂರ ಮಾಡುವ ನಿಟ್ಟಿನಲ್ಲಿ ವ್ಯಾಪಕ ಮುಂಜಾಗೃತ ಕ್ರಮ ಕೈಗೊಳ್ಳಲು ಎಲ್ಲಾ ಇಲಾಖೆಗಳಿಗೆ ಸೂಚನೆ ನೀಡಿದರು.

ಹಂದಿ ಸಾಕಾಣಿಕೆ ಕೇಂದ್ರಗಳ ಮೇಲೆ ನಿಗಾ ಇರಲಿ :

ಸಾಕು ಹಂದಿಗಳ ಸಾವಿನ ವರದಿ ಆಗುತ್ತಿರುವ ಹಿನ್ನಲೆಯಲ್ಲಿ ಹಂದಿ ಸಾಕಾಣಿಕ ಕೇಂದ್ರಗಳ ಮೇಲೆ ನಿಗಾವಹಿಸಲು ಹಾಗೂ ಸದ್ರಿ ಕೇಂದ್ರಗಳು ವೈಜ್ಞಾನಿಕವಾಗಿ ನಿರ್ವಹಣೆ ಆಗುತ್ತಿರುವುದನ್ನ ಖಾತ್ರಿ ಪಡಿಸುವುದು ಹಾಗೂ ಸುತ್ತ ಮುತ್ತಲಿನ ಪರಿಸರದಲ್ಲಿ ನೈರ್ಮಲ್ಯಕ್ಕೆ ಹೆಚ್ಚು ಒತ್ತು ನೀಡುವ ಕಡೆಗೆ ಸಂಬಂಧ ಪಟ್ಟ ಇಲಾಖೆಯ ಮೂಲಕ ಕ್ರಮವಾಗಬೇಕೆಂದರು*.

ಪಶು ಇಲಾಖೆ ನೇತೃತ್ವದಲ್ಲಿ ಕಾರ್ಯಾಚರಣೆ ತಂಡ :

ಹಂದಿಗಳ ಸರಣಿ ಸಾವಿನ ಹಿನ್ನಲೆಯಲ್ಲಿ ಜನರಲ್ಲಿ ಇರುವ ಆತಂಕ ಹಾಗೂ ಗೊಂದಲ ಗಳನ್ನು ನಿವಾರಣೆ ಮಾಡಲು ಮತ್ತು ಸಾವಿನ ಪ್ರಮಾಣ ಶೂನ್ಯಕ್ಕೆ ಇಳಿಸಿ, ಮತ್ತು ಪ್ರಕರಣಗಳು ಮರು ಕಳಿಸದಂತೆ ನಿಗಾ ವಹಿಸಲು ಹಾಗೂ ಸಾವಿನ ವರದಿ ಸಕಾಲದಲ್ಲಿ ಇಲಾಖೆಗಳ ಗಮನಕ್ಕೆ ಬರುವ ನಿಟ್ಟಿನಲ್ಲಿ ಪಶು ವೈದ್ಯಕೀಯ ಇಲಾಖೆಯ ನೇತೃತ್ವದಲ್ಲಿ ಆರೋಗ್ಯ, ಅರಣ್ಯ ಹಾಗೂ ಸ್ಥಳೀಯ ಗ್ರಾಮ ಪಂಚಾಯತ್ ಅಧಿಕಾರಿಗಳ ಜೊತೆ ಕಾರ್ಯಾಚರಣೆ ತಂಡ ರಚಿಸಿ ಸಮಾರೋಪಾದಿಯಲ್ಲಿ ಹಂದಿಗಳಿಗೆ ತಗುಲಿರುವ ರೋಗವನ್ನು ಹಿಮ್ಮೆಟ್ಟಿಸುವುದರೊಂದಿಗೆ ವ್ಯಾಪಕ ಜಾಗೃತಿಯೊಂದಿಗೆ ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸಲು ಅಧಿಕಾರಿಗಳಿಗೆ ಸಲಹೆ ನೀಡಿದರು.

ಡೆಂಗ್ಯೂ ಹಾಗೂ ಮಲೇರಿಯಾ ರೋಗ ನಿಯಂತ್ರಣಕ್ಕೆ ತಾಲೂಕು ಆರೋಗ್ಯ ಅಧಿಕಾರಿಗಳಿಗೆ ಸೂಚನೆ :

ಪ್ರಸ್ತುತ ಮಳೆ ಕೊರತೆ ಹಾಗೂ ಬಿಟ್ಟು ಬಿಟ್ಟು ಬರುವ ಮಳೆಯಿಂದಾಗಿ ಡೆಂಗ್ಯೂ ಹಾಗೂ ಮಲೇರಿಯಾ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಈಗಾಗಲೇ ಪತ್ತೆ ಆಗಿರುವ ಪ್ರಕರಣಗಳ ಬಗ್ಗೆ ನಿಗಾವಹಿಸುವುದು ಹಾಗೂ ರೋಗದ ಪ್ರಮಾಣ ಹೆಚ್ಚಾಗದಂತೆ ಕ್ಷೇತ್ರದ ಎಲ್ಲಾ ಗ್ರಾಮಗಳಲ್ಲಿ ಆಶಾ ಕಾರ್ಯಕರ್ತರ ಮುಖೇನ ವ್ಯಾಪಕ ಪ್ರಚಾರದ ಜೊತೆಗೆ ಅಗತ್ಯ ಮುಂಜಾಗೃತಾ ಕ್ರಮ ಗಳನ್ನು ಕೈಗೊಳ್ಳಲು ತಾಲೂಕು ಆರೋಗ್ಯ ಅಧಿಕಾರಿಗಳಿಗೆ ಶಾಸಕರು ಸೂಚನೆ ನೀಡಿದರು.

ಸಭೆಯಲ್ಲಿ ಕುಂದಾಪುರ ಹಾಗೂ ಬೈಂದೂರು ತಾಲೂಕು ಅರೋಗ್ಯ ಅಧಿಕಾರಿ ಡಾ. ಪ್ರೇಮಾನಂದ, ಬೈಂದೂರು ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ನಾಗ ಶಯನ ಕುಂದಾಪುರ ತಾಲೂಕು ಮುಖ್ಯ ಪಶು ವೈದ್ಯಾಧಿಕಾರಿ ಡಾ. ಅರುಣ್ ಹೆಗ್ಡೆ, ಬೈಂದೂರು ತಾಲೂಕು ಮುಖ್ಯ ಪಶು ವೈದ್ಯಾಧಿಕಾರಿ ಡಾ. ಅರುಣ್ ಕುಮಾರ್ ವೈ ಕೆ, ಕುಂದಾಪುರ ವಲಯ ಅರಣ್ಯಾಧಿಕಾರಿ ರಾಘವೇಂದ್ರ, ಬೈಂದೂರು ವಲಯ ಅರಣ್ಯಾಧಿಕಾರಿ ಜ್ಯೋತಿ, ಶಂಕರ ನಾರಾಯಣ ವಲಯ ಅರಣ್ಯಾಧಿಕಾರಿ ಸಂದೇಶ್, ಭಾಧಿತ ಗ್ರಾಮ ವ್ಯಾಪ್ತಿಗಳ ಪಶು ವೈದ್ಯರು, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು, ಗ್ರಾಮ ಪಂಚಾಯತ್ ಆಡಳಿತಾಧಿಕಾರಿಗಳು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.

Categories
ಬ್ರೇಕಿಂಗ್ ನ್ಯೂಸ್

ಕೋಟ : ಯುವಕನೊಬ್ಬ ಸಾರ್ವಜನಿಕರಲ್ಲಿ ಆತಂಕ ಉಂಟುಮಾಡಿದ ಘಟನೆ

ಕೋಟ: ರಾಷ್ಟ್ರೀಯ ಹೆದ್ದಾರಿ 66ರ ಕೋಟ ಸಮೀಪ ಯುವಕನೊಬ್ಬ ಸಾರ್ವಜನಿಕರಲ್ಲಿ ಆತಂಕ ಉಂಟುಮಾಡಿದ ಘಟನೆ ನಡೆದಿದೆ. ಹೆದ್ದಾರಿಯ ಮಧ್ಯೆ ಟೇಬಲ್ ಇಟ್ಟು, ಟಿವಿ ಹಾಗೂ ಮ್ಯೂಸಿಕ್ ವ್ಯವಸ್ಥೆ ಮಾಡಿ ವಾಹನಗಳ ಸಂಚಾರಕ್ಕೆ ಅಡ್ಡಿಪಡಿಸಿದ್ದರಿಂದ ಕೆಲಕಾಲ ಸಂಚಾರದಲ್ಲಿ ಗೊಂದಲ ಉಂಟಾಯಿತು.

ಬೆಲ್ಲದ ಗಣಪತಿ ದೇವಸ್ಥಾನ ಸಮೀಪದ ನಿವಾಸಿ ರಂಜಿತ್ ಸೋಮಯಾಜಿ (25) ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಉದ್ದನೆಯ ತಲೆಕೂದಲು ಹಾಗೂ ಗಡ್ಡದೊಂದಿಗೆ ಹೆದ್ದಾರಿಯಲ್ಲೇ ವಿಚಿತ್ರವಾಗಿ ವರ್ತಿಸುತ್ತಿದ್ದ ಯುವಕನನ್ನು ಕಂಡು ವಾಹನ ಸವಾರರು ಮತ್ತು ಸ್ಥಳೀಯರು ಆತಂಕಗೊಂಡರು.
ಸ್ಥಳೀಯರು ಮಾಹಿತಿ ನೀಡುತ್ತಿದ್ದಂತೆ ಕೋಟ ಪೊಲೀಸರು ಸ್ಥಳಕ್ಕೆ ಧಾವಿಸಿದರು. ಈ ವೇಳೆ ಪೊಲೀಸರ ಮೇಲೆಯೇ ರಂಜಿತ್ ಕತ್ತಿ ಬೀಸಿ ಹಲ್ಲೆಗೆ ಯತ್ನಿಸಿದ್ದಾನೆ ಎಂದು ತಿಳಿದುಬಂದಿದೆ. ಬಳಿಕ ಪೊಲೀಸರು ಆತನನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿದರು.

ಪ್ರಾಥಮಿಕ ವಿಚಾರಣೆಯಲ್ಲಿ ಆತ ಮಾನಸಿಕ ಅಸ್ವಸ್ಥನಾಗಿರಬಹುದೆಂಬ ಅನುಮಾನ ವ್ಯಕ್ತವಾಗಿದ್ದರೂ, ಮಾನಸಿಕ ಚಿಕಿತ್ಸೆಗೆ ಸಂಬಂಧಿಸಿದ ಯಾವುದೇ ಅಧಿಕೃತ ದಾಖಲೆಗಳು ಲಭ್ಯವಾಗದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಈ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ.

Categories
ಪಂಚಾಂಗ

ಶುಭ ದಿನದ ಪಂಚಾಂಗ

ಶುಭ ದಿನದ ಪಂಚಾಂಗ

ಕಲಿಯುಗಾಬ್ದ 5128

ಪರಾಭವ ಸಂವತ್ಸರ

ಉತ್ತರಾಯಣ

ಗ್ರೀಷ್ಮ : ಋತು

ಜ್ಯೇಷ್ಠ : ಮಾಸ

ಕೃಷ್ಣ  ಪಕ್ಷ

ಅಮವಾಸ್ಯೆ : ತಿಥಿ

ಪುನರ್ವಸು : ನಕ್ಷತ್ರ

ಮಂಗಳವಾರ

13.07.2026

ಈ ದಿನ ಎಲ್ಲರಿಗೂ ಶುಭವಾಗಲಿ

Categories
ಕರಾವಳಿ ಸುದ್ದಿ

ವಿಶ್ವವಿನಾಯಕ ಪಿಯು ಕಾಲೇಜು ತೆಕ್ಕಟ್ಟೆಯಲ್ಲಿ ರಾಷ್ಟ್ರೀಯ ಚಾರ್ಟರ್ಡ್ ಅಕೌಂಟೆಂಟ್ ದಿನಾಚರಣೆ

ತೆಕ್ಕಟ್ಟೆ : ವಿಶ್ವವಿನಾಯಕ ಪಿಯು ಕಾಲೇಜು ತೆಕ್ಕಟ್ಟೆಯಲ್ಲಿ ರಾಷ್ಟ್ರೀಯ ಚಾರ್ಟರ್ಡ್ ಅಕೌಂಟೆಂಟ್ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶಾಲೆಯ ಮ್ಯಾನೇಜಿಂಗ್ ಡೈರೆಕ್ಟರ್ ಎಂ ಪ್ರಭಾಕರ್ ಶೆಟ್ಟಿಯವರು ವಿದ್ಯಾರ್ಥಿಗಳು ಪದವಿ ಪೂರ್ವ ನಂತರ ಸಿಎ ಕೋರ್ಸ್ ಮಾಡುವುದರ ಬಗ್ಗೆ ಮತ್ತು ಆ ಕೋರ್ಸಿಗಿರುವ ಉದ್ದೇಶದ ಕುರಿತು ಮಾತನಾಡಿದರು.
ಮುಖ್ಯ ಅತಿಥಿಗಳಾದ ಸಿ.ಎ. ಸಂತೋಷ್ ಪ್ರಭು ಅವರು ಸಿ.ಎ, ಸಿ.ಎಸ್, ಸಿ.ಎಂ. ಎ ಕೋರ್ಸ್ ನ ಬಗ್ಗೆ, ಅದರಲ್ಲಿರುವ ವಿಷಯಗಳ ಕುರಿತು ತರಬೇತಿ ಹಾಗೂ ಪರೀಕ್ಷೆಯ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಮನೋಜ್ ಕುಮಾರ್, ಆಡಳಿತ ನಿರ್ದೇಶಕ ಹರೀಶ್ ಮರವಂತೆ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ರಿತಿಕ ಗಾಣಿಗ ಸ್ವಾಗತಿಸಿದರು, ಸಾಕೆತ್ ವಂದಿಸಿದರು, ಪ್ರಾರ್ಥನಾ ಕಾಮತ್ ಕಾರ್ಯಕ್ರಮ ನಿರೂಪಿಸಿದರು.