ಕುಂದಾಪುರ : ನಗರದ ಶಾಸ್ತ್ರೀ ವೃತ್ತ ಬಳಿಯ ತಾಲೂಕ್ ಪಂಚಾಯತ್ ಕಚೇರಿ ಎದುರು ಕುಂದಾಪುರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಯಿತು ಪ್ರತಿಭಟನೆಯಲ್ಲಿ ಭಾಗವಹಿಸಿದ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹರಿಪ್ರಸಾದ್ ಶೆಟ್ಟಿ, ಕಾನ್ಮಕ್ಕಿ ಮಾತನಾಡಿ ಮಣಿಪುರದಲ್ಲಿ ಕಾನೂನು ವ್ಯವಸ್ಥೆ ಕಾಪಾಡಲು ಕೇಂದ್ರ ಸರಕಾರ ಮುಂದಾಗಿಲ್ಲ ಎಂದು ಆರೋಪಿಸಿದರು
ಡಿಸಿಸಿ ವಕ್ತಾರ ವಿಕಾಸ್ ಹೆಗ್ಡೆ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿ ಮಣಿಪುರದಲ್ಲಿ ನಡೆದ ಹಿಂಸಾಚಾರವನ್ನು ತಡೆಯಲ್ಲು ಕೇಂದ್ರ ಸರಕಾರ ವಿಫಲವಾಗಿದೆ ಎಂದರು ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕಿಶನ್ ಹೆಗಡೆ ಕೊಳ್ಕೆಬೈಲು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷರಾದ ಮಲ್ಯಾಡಿ ಶಿವರಾಂ ಶೆಟ್ಟಿ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶಂಕರ್ ಕುಂದರ್ ಪುರಸಭಾ ಸದಸ್ಯರಾದ ಚಂದ್ರಶೇಖರ್ ಖಾರ್ವಿ ಶ್ರೀಧರ್ ಶೇರೆಗಾರ್ ದೇವಕಿ ಸಣ್ಣಯ್ಯ ಮತ್ತು ಕಾಗ್ರೇಸ್ ನ ಧರ್ಮಪ್ರಕಾಶ್ ಕೇಶವ ಭಟ್ ಹಾರೂನ್ ಸಾಹೇಬ್ ರೋಷನ್ ಶೆಟ್ಟಿ ಚಂದ್ರ ಅಮೀನ್ ಅರುಣ್ ಕುಮಾರ್ ಪಟೇಲ್ ಉಪಸ್ಥಿತರಿದ್ದರು ವಿನೋದ್ ಕ್ರಾಸ್ತ ಕಾರ್ಯಕ್ರಮ ನಿರೂಪಿಸಿ ಧನ್ಯವಾದವಿತ್ತರು