Home » ಸೇತುಬಂಧ ತರಗತಿ
 

ಸೇತುಬಂಧ ತರಗತಿ

by Kundapur Xpress
Spread the love

ಕುಂದಾಪುರ : ಪದವಿಪೂರ್ವ ಹಂತದಲ್ಲಿ ವಾಣಿಜ್ಯೇತರ ವಿಭಾಗಗಳಲ್ಲಿ ತೇರ್ಗಡೆಗೊಂಡು ಪ್ರಸ್ತುತ ವಾಣಿಜ್ಯ ಹಾಗೂ ನಿರ್ವಹಣಾ ವಿಭಾಗದಲ್ಲಿ ಪ್ರವೇಶಾತಿ ಪಡೆದ ವಿದ್ಯಾರ್ಥಿಗಳಿಗೆ ಸೇತುಬಂಧ (Bridge Course) ತರಗತಿಗಳನ್ನು ಕಾಲೇಜಿನ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ಹಮ್ಮಿಕೊಳ್ಳಲಾಯಿತು. ವಿದ್ಯಾರ್ಥಿಗಳಿಗೆ ಕೈಗಾರಿಕೆ, ಉದ್ಯಮ, ವ್ಯಾಪಾರ ಮುಂತಾದವುಗಳ ಬಗ್ಗೆ ಪ್ರಾತ್ಯಕ್ಷಿತೆಯನ್ನು ನೀಡುವುದು ಮತ್ತು ಪ್ರಾಯೋಗಿಕವಾಗಿ ವಾಣಿಜ್ಯ ವಿಷಯಗಳನ್ನು ಅರ್ಥೈಸುವ ನಿಟ್ಟಿನಲ್ಲಿ ಬೈಂದೂರು ಮಾಜಿ ಶಾಸಕರು ಹಾಗೂ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಬಿ.ಎಮ್. ಸುಕುಮಾರ ಶೆಟ್ಟಿಯವರ ಕೈಗಾರಿಕೆಗಳಾದ ಮುಳ್ಳುಗುಡ್ಡೆ ಸೌಪರ್ಣಿಕ ಹಂಚಿನ ಕಾರ್ಖಾನೆ, ಸೌಪರ್ಣಿಕ ಡೆಕೋರೇಟಿವ್ ಟೈಲ್ಸ್, ಸೌಪರ್ಣಿಕ ಗೇರುಬೀಜ ಕಾರ್ಖಾನೆಗೆ ಭೇಟಿ ನೀಡಲಾಯಿತು.

ಈ ಸಂದರ್ಭ ಕಾರ್ಖಾನೆಯ ಮ್ಯಾನೇಜರಾದ ಶ್ರೀ ದಯಾನಂದ ಗಾಣಿಗ, ಅಕೌಂಟೆಂಟ್ ಶ್ರೀ ಸತೀಶ್ ಅಡಿಗ ಇವರು ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ಮತ್ತು ಮಾಹಿತಿ ನೀಡಿದರು. ವಾಣಿಜ್ಯ ವಿಭಾಗದ ಮುಖ್ಯಸ್ಥೆ ವೀಣಾ ಭಟ್, ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ, ವಾಣಿಜ್ಯ ವಿಭಾಗದ ಉಪನ್ಯಾಸಕರಾದ ರಾಜೇಶ್ ಶೆಟ್ಟಿ, ಸತೀಶ್ ಶೆಟ್ಟಿ, ದೀಪ ಪೂಜಾರಿ, ಶರತ್ ಕುಮಾರ್, ಅಕ್ಷಯ್ ಕುಮಾರ್, ಜೋಸ್ಲಿನ್ ಅಲ್ಮೇಡಾ ಉಪಸ್ಥಿತರಿದ್ದರು.

   

Related Articles

error: Content is protected !!