ಕುಂದಾಪುರ : ಮರವಂತೆಯ ಪ್ರಸಿದ್ಧ ಮಹಾರಾಜ ಶ್ರೀ ವರಾಹ ಸ್ವಾಮಿ ದೇವಸ್ಥಾನದಲ್ಲಿ ಇಂದು ಕರ್ಕಾಟಕ ಅಮಾವಾಸ್ಯೆ ಜಾತ್ರೆಯ ಮಹೋತ್ಸವ ನಡೆಯಲಿದೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು ಭಕ್ತರು ಸಮುದ್ರ ಸ್ನಾನ ಮಾಡಿ ಶ್ರೀ ದೇವರ ದರ್ಶನ ಮಾಡುವುದು ಇಲ್ಲಿಯ ವಾಡಿಕೆಯಾಗಿದೆ ಮರವಂತೆ ಕಡಲ ಕಿನಾರೆ ಹಾಗೂ ಸೌಪರ್ಣಿಕ ನದಿಯ ತಟದಲ್ಲಿ ನಡೆಯುವ ಜಾತ್ರೆಗೆ ಸಕಲ ಸಿದ್ಧತೆಯನ್ನು ಮಾಡಲಾಗಿದೆ ಎಂದು ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಸತೀಶ್ ಎಂ ನಾಯಕ್ ತಿಳಿಸಿದ್ದಾರೆ