ಕುಂದಾಪುರ : ಮರವಂತೆಯ ಮಹಾರಾಜ ಶ್ರೀ ವರಾಹ ಸ್ವಾಮಿ ದೇವಸ್ಥಾನದಲ್ಲಿ ಕರ್ಕಾಟಕ ಅಮಾವಾಸ್ಯೆ ಜಾತ್ರೆ ಸಡಗರ ಸಂಭ್ರಮದಿಂದ ಜರುಗಿತು ಬುಧವಾರ ಬೆಳಗ್ಗೆ ಮಳೆ ಬಾರದೇ ಇದ್ದಿದ್ದರಿಂದ ಬೆಳಗ್ಗೆಯಿಂದಲೇ ಜಿಲ್ಲೆಯ ವಿವಿದ ಕಡೆಗಳಿಂದ ಭಕ್ತರ ಮಹಾಪೂರವೇ ಹರಿದು ಬಂತು
ಕೆಲವರು ಸಮುದ್ರ ಮತ್ತು ನದಿಗಳಲ್ಲಿ ಪವಿತ್ರ ಸ್ನಾನ ಮಾಡಿ ಶ್ರೀದೇವರ ದರ್ಶನ ಪಡೆದು ಅಭಿಷೇಕ ಪೂಜೆ ಅರ್ಪಣೆ ಸಲ್ಲಿಸಿದರು ಸಾವಿರಾರು ಭಕ್ತರು ಸರತಿ ಸಾಲಿನಲ್ಲಿ ನಿಂತು ಶ್ರೀ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು ಜಾತ್ರೆ ಅಂಗವಾಗಿ ದೇವಾಲಯಕ್ಕೆ ವಿಶೇಷವಾದ ಪುಷ್ಪಲಂಕಾರ ಮಾಡಲಾಗಿದ್ದು ದೇವಾಲಯದ ಆಡಳಿತ ಮಂಡಳಿ ಮತ್ತು ಸ್ವಯಂಸೇವಕರು ಜೊತೆ ಗೂಡಿ ಶುಚಿತ್ವ ಭಕ್ತರ ಆಗಮನ ಮತ್ತು ನಿರ್ಗಮನ ಪ್ರಸಾದ ವಿತರಣೆ ಕಾರ್ಯಕ್ರಮಗಳನ್ನು ಸುಗಮವಾಗಿ ನಡೆಯಲು ಅಗತ್ಯ ವ್ಯವಸ್ಥೆ ಕಲ್ಪಿಸಿದರು ಮಧ್ಯಾಹ್ನ ಭಕ್ತರ ಸಂಖ್ಯೆ ಹೆಚ್ಚಾಗಿದ್ದು ಸುಗಮ ಸಂಚಾರಕ್ಕಾಗಿ ಗಂಗೊಳ್ಳಿ ಪೊಲೀಸರು ಬಿಗಿ ಬಂದೋಬಸ್ತನ್ನು ಏರ್ಪಡಿಸಿದ್ದರು