ಕುಂದಾಪುರ : ಶಾಲೆಗೆ ಅನಧಿಕೃತವಾಗಿ ಗೈರು ಹಾಜರಾದ ದಿನಕರ ಶೆಟ್ಟಿ ಹಾಗೂ ಅನಧಿಕೃತ ಗೈರು ಹಾಜರಾತಿಯ ವಿಷಯವನ್ನು ಮೇಲಾಧಿಕಾರಿಗಳಿಗೆ ತಿಳಿಸದ ಶಾಲೆಯ ಮುಖ್ಯೋಪಧ್ಯಾಯರಾದ ಜನಾರ್ಧನ ಪಟಗಾರ ಎಂಬವರನ್ನು ಅಮಾನತುಗೊಳಿಸಲಾಗಿದೆ
ಆನಗಳ್ಳಿ ಹಿರಿಯ ಪ್ರಾರ್ಥಮಿಕ ಶಾಲೆಯ ಶಿಕ್ಷಕ ಹಾಗೂ ಉಡುಪಿ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ದಿನಕರ ಶೆಟ್ಟಿಯವರು ಮೇಲಾಧಿಕಾರಿಗಳ ಅನುಮತಿ ಪಡೆಯದೆ ಅನಧಿಕೃತವಾಗಿ ನಿರಂತರ ಶಾಲೆಗೆ ಗೈರಾಗಿರುವುದು ಮತ್ತು ದಿನಾಕರ್ ಶೆಟ್ಟಿಗೆ ಬೆಂಬಲ ನೀಡಿದ ಕಾರಣಕ್ಕೆ ಮುಖ್ಯೋಪಾಧ್ಯಾಯ ಜನಾರ್ಧನ್ ಪಟಗಾರ್ ಅವರನ್ನು ಅಮಾನತುಗೊಳಿಸಿ ಉಡುಪಿ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ ಆದೇಶ ಹೊರಡಿಸಿದ್ದಾರೆ
ಶಿಕ್ಷಕ ಅಂಪಾರು ದಿನಾಕರ್ ಶೆಟ್ಟಿ ಶಾಲೆಗೆ ಬರುತ್ತಿಲ್ಲ ಮತ್ತು ಇದರಿಂದ ಶಾಲೆ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ ಎಂದು ಸ್ಥಳೀಯರು ಶಿಕ್ಷಣ ಇಲಾಖೆಗೆ ದೂರು ನೀಡಿದ್ದು ದೂರಿನ ಆಧಾರದ ಮೇಲೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಭೇಟಿ ನೀಡಿದಾಗ ಶಿಕ್ಷಕರು ಶಾಲೆಯಲ್ಲಿ ಇರದೆ ಹಾಜರಿಯನ್ನು ಹಾಕದೆ ಮೇಲಾಧಿಕಾರಿಗಳ ಗಮನಕ್ಕೂ ತಾರದೆ ಗೈರಾಗಿರುವುದು ಕಂಡುಬಂದಿತು ಎನ್ನಲಾಗಿದೆ