ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ 18 ಕ್ಕೂ ಅಧಿಕ ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿ ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ ಬೆಂಗಳೂರು ಚಿತ್ರದುರ್ಗ ದಾವಣಗೆರೆ ಮಡಿಕೇರಿ ಬೀದರ್ ಸೇರಿದಂತೆ ಹಲವಡೆ ಲೋಕಾಯುಕ್ತ ಅಧಿಕಾರಿಗಳು ಆಸ್ತಿ ಮೀರಿ ಆದಾಯ ಗಳಿಸಿದ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ವಶಪಡಿಸಿಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ
ಅಕ್ರಮ ಆಸ್ತಿ ಸಂಪಾದನೆಯ ದೂರಿನ ಹಿನ್ನಲೆಯಲ್ಲಿ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯ ಸಣ್ಣ ನೀರಾವರಿ ಇಲಾಖೆಯ ಇಂಜೀನಿಯರ್ ಕೆ ಮಹೇಶ್ ರವರ ಮನೆ ಮೇಲೆ ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸಲಾಗಿದೆ