Home » ಭಾರತದ ಅದ್ವಿತೀಯ ಸಾಧನೆಗೆ ವಿಶ್ವವೇ ಬೆರಗು
 

ಭಾರತದ ಅದ್ವಿತೀಯ ಸಾಧನೆಗೆ ವಿಶ್ವವೇ ಬೆರಗು

ಕುಯಿಲಾಡಿ ಸುರೇಶ್ ನಾಯಕ್

by Kundapur Xpress
Spread the love

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಚಂದ್ರಯಾನ-3 ಸಾಫ್ಟ್ ಲ್ಯಾಂಡಿಂಗ್ ಮಾಡುವ ಮೂಲಕ ಭಾರತ ಚಂದ್ರನ ದಕ್ಷಿಣ ದ್ರುವವನ್ನು ತಲುಪಿದ ಮೊದಲ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವುದು ಸಮಸ್ತ ಭಾರತೀಯರಿಗೆ ಹೆಮ್ಮೆ ತಂದಿದೆ. ಈ ಐತಿಹಾಸಿಕ ಸಾಧನೆಗೈದಿರುವ ಇಸ್ರೋ ವಿಜ್ಞಾನಿಗಳ ಇಡೀ ತಂಡಕ್ಕೆ ಹಾರ್ದಿಕ ಅಭಿನಂದನೆಗಳು. ಪ್ರಧಾನಿ ನರೇಂದ್ರ ಮೋದಿಯವರ ಆಡಳಿತಾವಧಿಯಲ್ಲಿ ಭಾರತ ಇಂತಹ ವಿಶ್ವ ದಾಖಲೆಯ ಸಾಧನೆಯ ಹೊಸ ಮೈಲಿಗಲ್ಲು ತಲುಪಿರುವುದು ಶ್ಲಾಘನೀಯ. ಈ ಅದ್ವಿತೀಯ ಸಾಧನೆಯ ಮೂಲಕ ವಿಶ್ವವೇ ಬೆರಗಾಗಿ ಭಾರತದತ್ತ ತಿರುಗಿ ನೋಡುವಂತೆ ಮಾಡಿರುವ ಇಸ್ರೋ ವಿಜ್ಞಾನಿಗಳ ವಿಕ್ರಮ ಸಾಧನೆ ಸುವರ್ಣಾಕ್ಷರದಲ್ಲಿ ಬರೆದಿಡುವಂತಹ ಕ್ಷಣವಾಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.

ಅವರು ಚಂದ್ರಯಾನ-3ರ ಅದ್ಭುತ ಯಶಸ್ಸಿನ ಪ್ರಯುಕ್ತ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ನಡೆದ ಸಂಭ್ರಮಾಚರಣೆಯನ್ನು ಉದ್ದೇಶಿಸಿ ಮಾತನಾಡಿದರು. ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಚಂದ್ರಯಾನ-3ರ ಯಶಸ್ವಿ ಲ್ಯಾಂಡಿಂಗ್ ನ ನೇರ ಪ್ರಸಾರವನ್ನು ವೀಕ್ಷಿಸಿ, ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು. ಬಳಿಕ ಉಡುಪಿ ಕ್ಲಾಕ್ ಟವರ್ ಬಳಿ ಸಿಹಿತಿಂಡಿ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್, ಜಿಲ್ಲಾ ಉಪಾಧ್ಯಕ್ಷರಾದ ರವಿ ಅಮೀನ್, ಬೈಕಾಡಿ ಸುಪ್ರಸಾದ್ ಶೆಟ್ಟಿ, ಪೆರ್ಣಂಕಿಲ ಶ್ರೀಶ ನಾಯಕ್, ರಾಷ್ಟ್ರೀಯ ಮಹಿಳಾ ಆಯೋಗದ ಮಾಜಿ ಸದಸ್ಯೆ ಶ್ಯಾಮಲಾ ಎಸ್. ಕುಂದರ್, ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಕಾರ್ಯದರ್ಶಿ ಗುರುಪ್ರಸಾದ್ ಶೆಟ್ಟಿ, ಜಿಲ್ಲಾ ಸಹ ವಕ್ತಾರರಾದ ಶಿವಕುಮಾರ್ ಅಂಬಲಪಾಡಿ, ಗಿರೀಶ್ ಎಮ್. ಅಂಚನ್, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ, ರಾಜ್ಯ ರೈತ ಮೋರ್ಚಾ ಕಾರ್ಯಕಾರಿಣಿ ಸದಸ್ಯ ರಾಘವೇಂದ್ರ ಉಪ್ಪೂರು, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ದಾವೂದ್ ಅಬೂಬಕರ್, ಪ್ರಮುಖರಾದ ಪ್ರದೀಪ್ ರಾವ್, ಪಾಂಡುರಂಗ ಲಾಗ್ವಾಂಕರ್, ವಿಜೇತ್ ಕುಮಾರ್, ಅಕ್ಷಯ್ ಶೆಟ್ಟಿ, ಚಂದ್ರಶೇಖರ್ ಪ್ರಭು, ಜಯಪ್ರಕಾಶ್, ದಿನೇಶ್ ಅಮೀನ್, ಸಚಿನ್ ಪೂಜಾರಿ, ಗಣೇಶ್ ಕುಲಾಲ್, ದಿನಕರ್ ಪೂಜಾರಿ, ಶಿವರಾಮ್, ಜಗದೀಶ್ ಶೆಟ್ಟಿ, ವಿಜಯರಾಜ್ ಮುಂತಾದವರು ಉಪಸ್ಥಿತರಿದ್ದರು

   

Related Articles

error: Content is protected !!