ಉಡುಪಿ : ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಇಂದು ಬೆಳಗ್ಗೆ 10.30ಕ್ಕೆ ಉಡುಪಿ ನಗರದ ಬನ್ನಂಜೆ ರೋಡ್ ಶ್ರೀರಾಮ್ ಬಿಲ್ಡಿಂಗ್ 2ನೇ ಮಹಡಿಯ ಮಹೀಂದ್ರ ರೂರಲ್ ಹೌಸಿಂಗ್ ಪ್ರೆ,ಲಿ. ಇಲ್ಲಿ ನೇರ ಸಂದರ್ಶನ ನಡೆಯಲಿದೆ.
SSLC, PUC, ITI, ಡಿಪ್ಲೋಮಾ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮೆ/ಸಿವಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ- ದೂರವಾಣಿ ಸಂಖ್ಯೆ: 8105618291, 9945856670, 8105774936 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.