ಕುಂದಾಪುರ : ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಯವರು ಯಡಾಡಿ-ಮತ್ಯಾಡಿಯ ಮೊರಾರ್ಜಿ ವಸತಿ ಶಾಲೆಗೆ ಭೇಟಿ ನೀಡಿ ಶಾಲೆಯ ವಸತಿ ಕಟ್ಟಡ, ಹಾಗೂ ಸ್ವಚ್ಛತೆ ಬಗ್ಗೆ ವೀಕ್ಷಿಸಿ, ಮೂಲಭೂತ ಸೌಕರ್ಯಗಳನ್ನು ಮುಂದಿನ ದಿನ ಒದಗಿಸುವಂತಹ ಭರವಸೆ ನೀಡಿದರು, ಇದೇ ಸಂದರ್ಭದಲ್ಲಿ ಸದ್ರಿ ಶಾಲೆಯ ಪೋಷಕರ ಸಭೆಯಲ್ಲಿ ಭಾಗವಹಿಸಿ ಅವರ ಗೌರವಾರ್ಪಣೆಯನ್ನು ಸ್ವೀಕರಿಸಿದರು. ಈ ಕಾರ್ಯಕ್ರಮದಲ್ಲಿ ಅಧಿಕಾರಿ ವರ್ಗದವರು ಮತ್ತು ಶಾಲಾ ಶಿಕ್ಷಕರು, ಶಾಲಾ ಅಭಿವೃದ್ಧಿ ಸಮಿತಿ ಮತ್ತು ಪೋಷಕರು ಉಪಸ್ಥಿತರಿದ್ದರು