Home » ವಿದ್ಯಾರ್ಥಿಗಳಿಗೆ ಯಕ್ಷಗಾನ ತರಬೇತಿ
 

ವಿದ್ಯಾರ್ಥಿಗಳಿಗೆ ಯಕ್ಷಗಾನ ತರಬೇತಿ

by Kundapur Xpress
Spread the love

ಉಡುಪಿ : ಯಕ್ಷ ಶಿಕ್ಷಣ ಟ್ರಸ್ಟ್ ರಿ. ಉಡುಪಿ ವತಿಯಿಂದ ಕುತ್ಯಾರು ಸೂರ್ಯ ಚೈತನ್ಯ ಗ್ಲೋಬಲ್ ಆಕಾಡೆಮಿ ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಯಕ್ಷಗಾನ ತರಬೇತಿ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಚಾಲನೆ ಯಕ್ಷ ಶಿಕ್ಷಣ ಟ್ರಸ್ಟ್ (ರಿ.) ಉಡುಪಿ ಕಾಪು ವಿಧಾನಸಭಾ ಕ್ಷೇತ್ರದ ಇದರ ವತಿಯಿಂದ ಆನೆಗುಂದಿ ಶ್ರೀ ಸರಸ್ವತೀ ಪೀಠ ಸೂರ್ಯ ಚೈತನ್ಯ ಗ್ಲೋಬಲ್ ಆಕಾಡೆಮಿ ಹೈಸ್ಕೂಲ್ ಕುತ್ಯಾರು ಇಲ್ಲಿನ ವಿದ್ಯಾರ್ಥಿಗಳಿಗೆ ಯಕ್ಷಗಾನ ತರಬೇತಿ ನೀಡಲಾಗುತ್ತಿದ್ದು,  ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ದೀಪ ಬೆಳಗಿಸುವ ಮೂಲಕ ತರಬೇತಿಗೆ ಚಾಲನೆ ನೀಡಿದರು.

ಶಾಲಾ ವಿದ್ಯಾರ್ಥಿಗಳಲ್ಲಿ ಯಕ್ಷಗಾನದ ಬಗ್ಗೆ ಆಸಕ್ತಿ ಮೂಡಿಸುವುದರ ಜೊತೆಗೆ ಅವರ ವಾಕ್ ಚಾತುರ್ಯವನ್ನು ಹೆಚ್ಚಿಸಿಕೊಳ್ಳಲು ಜೊತೆಗೆ ಜ್ಞಾಪಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಯಕ್ಷಗಾನ ಒಂದು ಉತ್ತಮ ವೇದಿಕೆಯಾಗಿದೆ. ಯಕ್ಷ ಶಿಕ್ಷಣ ಟ್ರಸ್ಟ್ ರಿ. ಉಡುಪಿ ಇವರ ಮೂಲಕ ಈ ವರ್ಷದಿಂದ ಕಾಪು ವಿಧಾನಸಭಾ ಕ್ಷೇತ್ರದಾದ್ಯಂತ ಸುಮಾರು 15 ಶಾಲೆಗಳಲ್ಲಿ ಯಕ್ಷಗಾನ ತರಬೇತಿಯನ್ನು ನೀಡಲಾಗುತ್ತಿದೆ.ಈ ಸಂದರ್ಭದಲ್ಲಿ ಕುತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜನಾರ್ಧನ ಆಚಾರ್ಯ, ಹಳೆಯಂಗಡಿ ಆಸೆಟ್ ಅಧ್ಯಕ್ಷರಾದ ಸೂರ್ಯ ಕುಮಾರ್, ಕಾರ್ಯಾಧ್ಯಕ್ಷರಾದ ಮೋಹನ್ ಕುಮಾರ್ ಬೆಳ್ಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಅಶೋಕ್ ಕಾಮತ್, ಆನೆಗುಂದಿ ಪ್ರತಿಷ್ಠಾನದ ಕಾರ್ಯದರ್ಶಿಗಳಾದ ಎಂ.ಬಿ ಲೋಕೇಶ್, ವಿಶು ಕುಮಾರ್, ಅಸೆಟ್ ಉಪಾಧ್ಯಕ್ಷರಾದ ವಿವೇಕ್ ಆಚಾರ್ಯ, ಯಕ್ಷಗಾನ ಕಲಾರಂಗದ ಉಪಾಧ್ಯಕ್ಷರಾದ ವಿ.ಜಿ ಶೆಟ್ಟಿ, ಟ್ರಸ್ಟಿಗಳಾದ ನಾರಾಯಣ ಹೆಗ್ಡೆ, ಯಕ್ಷಗಾನ ಗುರುಗಳಾದ ರಾಮಕೃಷ್ಣ ಆಚಾರ್ಯ ನಂದಿಕೂರು, ಕರಾಟೆ ಗುರುಗಳಾದ ಸತೀಶ್ ಬೆಳ್ಮಣ್, ಶಾಲಾ ಮುಖ್ಯ ಶೈಕ್ಷಣಿಕ ಸಲಹೆಗಾರರಾದ ದಿವಾಕರ್ ಆಚಾರ್ಯ, ಆನೆಗುಂದಿ ಸರಸ್ವತೀ ಪೀಠದ ಸಂಗೀತಾ ಎಸ್. ರಾವ್ ಉಪಸ್ಥಿತರಿದ್ದರು

   

Related Articles

error: Content is protected !!