Home » “ವಿವೇಕ ಮತ್ತು ವಿವೇಚನೆ” – ಉಪನ್ಯಾಸ
 

“ವಿವೇಕ ಮತ್ತು ವಿವೇಚನೆ” – ಉಪನ್ಯಾಸ

by Kundapur Xpress
Spread the love

ಕುಂದಾಪುರ : ವಿವೇಕ ರಹಿತ ವಿದ್ಯೆ ಅನಾಹುತಕ್ಕೆ ದಾರಿ. ವಿದ್ಯೆ ವಿವೇಕವನ್ನು ಮೂಡಿಸುತ್ತದೆ. ವಿವೇಕ ವಿವೇಚನೆಯನ್ನು ಜಾಗೃತಗೊಳಿಸುತ್ತದೆ ಈ ಹಿನ್ನಲೆಯಲ್ಲಿ ವಿದ್ಯಾರ್ಥಿ ದೆಸೆಯಲ್ಲಿಯೇ ವಿವೇಚನಶೀಲ ವ್ಯಕ್ತಿತ್ವವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕೆಂದು ವಾಣಿಜ್ಯ ತೆರಿಗೆ ಪರಿವೀಕ್ಷಕ ಶ್ರೀ ಸುಬ್ರಹ್ಮಣ್ಯ ಶೆಟ್ಟಿ ಹೇಳಿದರು.
ಅವರು ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಆಶ್ರಯದಲ್ಲಿ ನೂತನವಾಗಿ ಸೇರ್ಪಡೆಗೊಂಡ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಆಯೋಜಸಿದ ‘ಪ್ರೇರಣಾ ಶಿಬಿರ’ದಲ್ಲಿ “ವಿವೇಕ ಮತ್ತು ವಿವೇಚನೆ” ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು.
ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ, ಉಪ ಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ, ಬೋಧಕ-ಬೋಧಕೇತರ ವೃಂದ, ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಗಣಕ ವಿಜ್ಞಾನ ವಿಭಾಗದ ಉಪನ್ಯಾಸಕಿ ವಿನುತಾ ಹೆಚ್.ಎಸ್. ಅತಿಥಿಗಳನ್ನು ಪರಿಚಯಿಸಿದರು. ಕನ್ನಡ ಉಪನ್ಯಾಸಕಿ ಶ್ರೀಮತಿ ರೇವತಿ ಕಾರ್ಯಕ್ರಮದ ನಿರೂಪಿಸಿದರು.

   

Related Articles

error: Content is protected !!