ಉಡುಪಿ : ವ್ಯವಸ್ಥಿತ ಕಾರ್ಯಾಲಯದ ಮೂಲಕ ಕಾರ್ಯ ವಿಸ್ತಾರ ಮಾಡುವ ಬಿಜೆಪಿ ಕೇಂದ್ರ ಸಮಿತಿಯ ನಿರ್ಣಯದಂತೆ, ಉಡುಪಿ ಜಿಲ್ಲಾ ಬಿಜೆಪಿ ಸ್ಥಿರಾಸ್ತಿಯನ್ನು ಖರೀದಿಸಿದ್ದು, ನೂತನ ಕಟ್ಟಡ ನಿರ್ಮಾಣದೊಂದಿಗೆ ಸುಸಜ್ಜಿತ ಕಾರ್ಯಾಲಯವನ್ನು ಹೊಂದಲಿದೆ. ಈ ನೆಲೆಯಲ್ಲಿ ಜಿಲ್ಲಾ ಕಾರ್ಯಾಲಯದ ಸುವ್ಯವಸ್ಥೆಗಳ ಅವಲೋಕನ ಮತ್ತು ಅನುಷ್ಠಾನಕ್ಕಾಗಿ ರಾಜ್ಯ ತಂಡದ ಜೊತೆಗೆ ಜಿಲ್ಲಾ ಕಾರ್ಯಾಲಯ ವ್ಯವಸ್ಥೆ ಸಮಿತಿ ಸಭೆಯನ್ನು ಆಯೋಜಿಸಲಾಗಿದೆ ಎಂದು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಹಾಗೂ ಕಾರ್ಯಾಲಯ ನಿರ್ವಹಣೆ ರಾಜ್ಯ ತಂಡದ ಸದಸ್ಯ ಕೆ.ಉದಯ ಕುಮಾರ್ ಶೆಟ್ಟಿ ಹೇಳಿದರು.ಅವರು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಜಿಲ್ಲಾ ಕಾರ್ಯಾಲಯ ವ್ಯವಸ್ಥೆ ಸಮಿತಿ ಸಭೆಯ ನೇತೃತ್ವ ವಹಿಸಿ ಮಾತನಾಡಿದರು.
ರಾಜ್ಯ ತಂಡದ ಸದಸ್ಯ ಹಾಗೂ ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಎಮ್.ಜಿ. ಮಹೇಶ್ ಮಾತನಾಡಿ, ಬಿಜೆಪಿ ವಿಶ್ವದ ಅತೀ ದೊಡ್ಡ ರಾಜಕೀಯ ಪಕ್ಷ. ಸಂಘಟನಾತ್ಮಕ ವಿಚಾರ ಬಂದಾಗ ಪಕ್ಷದ ಹಿರಿಯರು ಹಾಕಿಕೊಟ್ಟ ಮಾರ್ಗದಲ್ಲಿ, ಯಶಸ್ಸಿನ ಪಥದಲ್ಲಿ ಮುನ್ನಡೆಯುತ್ತಿರುವ ಉಡುಪಿ ಜಿಲ್ಲೆ ರಾಜ್ಯಕ್ಕೇ ಮಾದರಿ. ದೇಶದ ಅಮೃತ ಕಾಲ ಘಟ್ಟದಲ್ಲಿ ಜಿಲ್ಲಾ ಕಾರ್ಯಾಲಯ ಹೇಗಿರಬೇಕು ಹಾಗೂ ಸುವ್ಯವಸ್ಥೆಗೆ ಏನೆಲ್ಲಾ ಬೇಕು ಎಂಬ ಅವಲೋಕನದ ಜೊತೆಗೆ ಅಗತ್ಯ ವ್ಯವಸ್ಥೆಗಳನ್ನು ಅಳವಡಿಸಿಕೊಳ್ಳುವುದು ಈ ಸಭೆಯ ಉದ್ದೇಶ ಎಂದರು. ಬಿಜೆಪಿ ರಾಜ್ಯ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಮುನಿರಾಜು ಗೌಡ ಮಾತನಾಡಿ, ಮಾದರಿ ಜಿಲ್ಲೆ ಉಡುಪಿ ಜಿಲ್ಲಾ ಕಾರ್ಯಾಲಯವನ್ನು ಇನ್ನಷ್ಟು ಮಾದರಿಯನ್ನಾಗಿಸುವ ನಿಟ್ಟಿನಲ್ಲಿ, ರಾಜ್ಯದ ಸೂಚನೆಯಂತೆ 32 ವಿಭಾಗಗಳಲ್ಲಿ ಪರಿಶೀಲನೆ ನಡೆಸುವ ಜೊತೆಗೆ ಸ್ವಚ್ಛತೆ ಸಹಿತ ಎಲ್ಲ ನಿಗದಿತ ಮೂಲಭೂತ ಅಗತ್ಯತೆಗಳನ್ನು ಅಳವಡಿಸಿಕೊಳ್ಳಲು ಜಿಲ್ಲಾ ಕಾರ್ಯಾಲಯ ವ್ಯವಸ್ಥೆ ಸಮಿತಿ ಎಲ್ಲರ ಸಹಕಾರದೊಂದಿಗೆ ಕಾರ್ಯ ಪ್ರವೃತ್ತರಾಗಬೇಕು ಎಂದರು.ಸಭೆಯಲ್ಲಿ ರಾಜ್ಯದ ಮಾದರಿಯಂತೆ ವಿವಿಧ ವಿಭಾಗಗಳ ಪರಿಶೀಲನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ರಾಜ್ಯ ತಂಡದ ಸದಸ್ಯ ಪ್ರೇಮ್ ಕುಮಾರ್ ಚಿಕ್ಕಮಗಳೂರು, ಮಂಗಳೂರು ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕುಮಾರ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ರವಿ ಅಮೀನ್ ಬನ್ನಂಜೆ, ಕಿಶೋರ್ ಕುಮಾರ್ ಕುಂದಾಪುರ, ಪೆರ್ಣಂಕಿಲ ಶ್ರೀಶ ನಾಯಕ್, ಬೈಕಾಡಿ ಸುಪ್ರಸಾದ್ ಶೆಟ್ಟಿ, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಗೀತಾಂಜಲಿ ಎಮ್. ಸುವರ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಮನೋಹರ್ ಎಸ್. ಕಲ್ಮಾಡಿ, ಸದಾನಂದ ಉಪ್ಪಿನಕುದ್ರು, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಕಾರ್ಯದರ್ಶಿ ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ, ಜಿಲ್ಲಾ ಸಹ ವಕ್ತಾರರಾದ ಶಿವಕುಮಾರ್ ಅಂಬಲಪಾಡಿ, ಗಿರೀಶ್ ಎಮ್. ಅಂಚನ್, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ವಿಖ್ಯಾತ್ ಶೆಟ್ಟಿ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ದಾವೂದ್ ಅಬೂಬಕರ್, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ವಿಜಯಕುಮಾರ್ ಉದ್ಯಾವರ, ಜಿಲ್ಲಾ ವೈದ್ಯಕೀಯ ಪ್ರಕೋಷ್ಠದ ಸಂಚಾಲಕ ಡಾ! ರಾಮಚಂದ್ರ ಕಾಮತ್, ಜಿಲ್ಲಾ ಸಹಕಾರ ಪ್ರಕೋಷ್ಠದ ಸಂಚಾಲಕ ಮುರಳೀಧರ ಪೈ, ಜಿಲ್ಲಾ ಕಾರ್ಯಾಲಯ ಸಿಬ್ಬಂದಿಗಳಾದ ಶಿವರಾಮ್ ಕಾಡಿಮಾರ್ ಮತ್ತು ಚಂದ್ರಶೇಖರ್ ಪ್ರಭು ಹಾಗೂ ದಿನಕರ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು