ಕುಂದಾಪುರ : ವಿದ್ಯಾರ್ಥಿ ಬದುಕಿನಲ್ಲಿ ಕನಸು ಕಾಣುವುದರ ಜೊತೆಗೆ ಅವಿರತ ಪ್ರಯತ್ನ ಇದ್ದಲ್ಲಿ ಮಾತ್ರ ಬದುಕು ರೂಪಿಸಿಕೊಳ್ಳಲು ಸಾಧ್ಯ. ಈ ಹಂತದಲ್ಲಿ ಕಾಣುವ ಕನಸೇ ನಿಮ್ಮಲ್ಲಿನ ಪ್ರತಿಭೆ ಹಾಗೂ ಸೃಜನಶೀಲತೆಗೆ ಉತ್ತೇಜನ ನೀಡುವುದು ಹೀಗಾಗಿ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಕ್ರಿಯಾಶೀಲ ವಿದ್ಯಾರ್ಥಿಗಳ ಬೆಳವಣಿಗೆಗೆ ಸೇತುವೆಯಾಗಲಿ ಎಂದು ಡಾ| ಅಸೋಡು ಅನಂತರಾಮ ಶೆಟ್ಟಿಯವರು ಹೇಳಿದರು. ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯನ್ನು ಉದ್ಘಾಟಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ಅಧ್ಯಕ್ಷತೆ ವಹಿಸಿದ್ದರು. ಉಪಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಶ್ರೀ ರಕ್ಷಿತ್ ರಾವ್ ಗುಜ್ಜಾಡಿ ಉಪಸ್ಥಿತರಿದ್ದರು.
ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ ಕಾರ್ಯದರ್ಶಿ ಸ್ಕಂದ ಛಾತ್ರ, ತೃತೀಯ ಬಿ.ಕಾಂ. ‘ಬಿ’ ಪ್ರತಿಜ್ಞಾ ವಿಧಿ ಬೋಧಿಸಿದರು. ಚೇತನ್, ತೃತೀಯ ಬಿಬಿಎ 2023-24ನೇ ಸಾಲಿನ ಯೋಜನೆಗಳ ಪಟ್ಟಿಯನ್ನು ಪ್ರಸ್ತುತ ಪಡಿಸಿದರು. ವಿದ್ಯಾರ್ಥಿಗಳಾದ ಶ್ರೀಶಾಂತ್ ಮತ್ತು ಮದನ್ ಪ್ರಾರ್ಥಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಶ್ರೀಮತಿ ಪ್ರೀತಿ ಹೆಗ್ಡೆ ವಂದಿಸಿದರು. ಇಂಗ್ಲೀಷ್ ಉಪನ್ಯಾಸಕಿ ಮೋನಿಕಾ ಡಿಸೋಜಾ ನಿರೂಪಿಸಿದರು.