ಕುಂದಾಪುರ : ಪಡಿತರ ಚೀಟಿಯಲ್ಲಿ ತಿದ್ದುಪಡಿಗೆ ಇಂದಿನಿಂದ ಅವಕಾಶವನ್ನು ಕಲ್ಪಿಸಲಾಗಿದೆ ಪ್ರಸ್ತುತ ಚಾಲ್ತಿಯಲ್ಲಿರುವ ಪಡಿತರ ಚೀಟಿಗಳಲ್ಲಿ ಹೆಸರು ಸೇರ್ಪಡೆ ಹೆಸರು ತೆಗೆಯುವುದು ವಿಳಾಸ ಬದಲಾವಣೆ ಸದಸ್ಯರ ಹೆಸರು ತಿದ್ದುಪಡಿಯನ್ನು ಇಂದಿನಿಂದ ಅಂದರೆ ಸೆಪ್ಟೆಂಬರ್ 12 ರಿಂದ ಸೆಪ್ಟೆಂಬರ್ 14ರ ವರೆಗೆ ಬೆಳಿಗ್ಗೆ 10 ರಿಂದ ರಾತ್ರಿ 8 ರವರೆಗೆ ಮಾಡಬಹುದು ಕರ್ನಾಟಕ ಓನ್ ಗ್ರಾಮ ಓನ್ ಮತ್ತು ಸೇವಾ ಸಿಂಧು ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಪ್ರಕಟಣೆ ತಿಳಿಸಿದೆ