ಕುಂದಾಪುರ : ಉದ್ಯಮಿಯೊಬ್ಬರಿಗೆ ಕೋಟ್ಯಾಂತರ ರೂಪಾಯಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆಯ ಕಾರ್ಯಕರ್ತೆ ಚೈತ್ರಾ ಕುಂದಾಪುರ ಮತ್ತು ಅವರ ಜೊತೆಗಾರರನ್ನು ಬೆಂಗಳೂರು ಸಿಸಿಬಿ ಪೊಲೀಸರು ಮಂಗಳವಾರ ರಾತ್ರಿ ಉಡುಪಿಯಲ್ಲಿ ವಶಕ್ಕೆ ಪಡೆದಿದ್ದಾರೆ
ಕಳೆದ ವಿಧಾನಸಭೆಯ ಚುನಾವಣೆಯ ಸಂದರ್ಭದಲ್ಲಿ ಬೈಂದೂರು ಕ್ಷೇತ್ರದಿಂದ ಉದ್ಯಮಿ ಗೋವಿಂದ ಬಾಬು ಪೂಜಾರಿಯವರು ಬಿಜೆಪಿಯಿಂದ ಟಿಕೆಟ್ ಆಕಾಂಕ್ಷಿಯಾಗಿದ್ದರು ಬೈಂದೂರು ಕ್ಷೇತ್ರಕ್ಕೆ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ಗೋವಿಂದ ಬಾಬು ಪೂಜಾರಿಯವರನ್ನು ನಂಬಿಸಿ ಹಣ ಪಡೆದುಕೊಂಡು ಚೈತ್ರಾ ಕುಂದಾಪುರವರು ವಂಚಿಸಿರುವುದಾಗಿ ಬೆಂಗಳೂರು ನಗರದ ಬಂಡೇಪಾಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು ಬೆಂಗಳೂರು ಪೊಲೀಸರು ಚೈತ್ರಾ ಕುಂದಾಪುರ ಹಾಗೂ ಅವರ ಜೊತೆಗಾರರನ್ನು ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದಾರೆ ಉದ್ಯಮಿ ಗೋವಿಂದ ಬಾಬು ಪೂಜಾರಿಯವರು ಚೈತ್ರಾ ರಿಗೆ ಟಿಕೆಟ್ ಗಾಗಿ ಹಣ ನೀಡಿದ ವಿಚಾರಗಳು ಚುನಾವಣೆಯ ನಂತರದ ದಿನಗಳಲ್ಲಿ ವಾಟ್ಸಾಫ್ ಗಳಲ್ಲಿ ಹರಿದಾಡಿದ್ದನ್ನು ಇಲ್ಲಿ ಸ್ಮರಿಸಬಹುದು