ಮಂಗಳೂರು : ಮಾದಕ ದ್ರವ್ಯ ಮುಕ್ತ ಮಂಗಳೂರು ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿ ಸಿ ಬಿ ಪೊಲೀಸರು ಕಾರ್ಯಾಚರಣೆ ನಡೆಸಿ ನಗರದಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಡ್ರೆಗ್ಸ್ ಮಾರಾಟ ಮಾಡುತ್ತಿದ್ದ ಉಳ್ಳಾಲ ನಿವಾಸಿಯಾದ ಅಬ್ದುಲ್ ಸವಾಜ್ ಆಲಿಯಾಸ್ ಚವ್ವಾ (30ವರ್ಷ) ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ
ಡ್ರಗ್ಸ್ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು 25 ಗ್ರಾಂ ತೂಕದ 1,25,000 ಮೌಲ್ಯದ ಡ್ರಗ್ಸ್ ಹಾಗೂ ಹೊಂಡಾ ಆಕ್ಟಿವಾ ಸ್ಕೂಟರ್ ಮತ್ತು ಡಿಜಿಟಲ್ ತೂಕ ಮಾಪನವನ್ನು ಪೊಲೀಸರು ಸ್ವಾಧೀನ ಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ