ಕುಂದಾಪುರ : ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಯವರ ನೇತೃತ್ವದಲ್ಲಿ ಗುರುವಾರ ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮ ಪಂಚಾಯತ್ ಅಧ್ಯಕ್ಷರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಪುರಸಭಾ ಸದಸ್ಯರು, ಮುಖ್ಯಾಧಿಕಾರಿ ಹಾಗೂ ಸಿಬ್ಬಂದಿಗಳು, ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿಯವರ ತಂಡದೊಂದಿಗೆ ವೈಜ್ಞಾನಿಕವಾಗಿ ಸಮಗ್ರ ಘನ ದ್ರವ ತ್ಯಾಜ್ಯ ನಿರ್ವಹಣೆ ಅನುಷ್ಠಾನ ಮಾಡುವ ಮುಂದಿನ ದಿಟ್ಟ ಹೆಜ್ಜೆ ಇಡುವ ಉದ್ದೇಶದಿಂದ ಬಂಟ್ವಾಳ ಶಾಸಕರಾದ ರಾಜೇಶ್ ನಾಯಕ್ ಅವರ ಗಂಜಿಮಠದ ಫಾರ್ಮ್ ನಲ್ಲಿರುವ ಸಿಎನ್ಜಿ ಗ್ಯಾಸ್ ತಯಾರಿಕ ಘಟಕವನ್ನು ಮತ್ತು ಸಮಗ್ರ ಘನ ತ್ಯಾಜ್ಯ ನಿರ್ವಹಣೆ ಕೇಂದ್ರ ನಿಟ್ಟೆ ಹಾಗೂ ದ್ರವ ತ್ಯಾಜ್ಯ ಸಂಸ್ಕರಣಾ ಘಟಕ ಬಡಗುಬೆಟ್ಟು ಘಟಕಗಳಿಗೆ ಭೇಟಿ ನೀಡಿ ಮಾಹಿತಿಯನ್ನು ಪಡೆಯಲಾಯಿತು
ಈ ಭೇಟಿಯು ಪ್ರವಾಸ ಆಗಿರದೆ ಮುಂದಿನ ದಿನದಲ್ಲಿ ನಾವೆಲ್ಲರೂ ಸೇರಿ ತ್ಯಾಜ್ಯ ನಿರ್ವಹಣೆಯನ್ನು ಸಮರ್ಪಕ ಮಾಡಿ ಸ್ವಚ್ಛ ಸುಂದರ ಕುಂದಾಪುರ ಕ್ಷೇತ್ರವನ್ನಾಗಿಸಲು ನಾವೆಲ್ಲರೂ ಪ್ರಯತ್ನ ಪಡೋಣ ಎಂದು ಶಾಸಕರಾದ ಕಿರಣ್ ಕುಮಾರ್ ಕೊಡ್ಗಿಯವರು ಹೇಳಿದರು