ಕುಂದಾಪುರ :ಸರ್ಕಾರಿ ಪದವಿ ಪೂರ್ವ ಕಾಲೇಜು ಗೋಳಿಯಂಗಡಿಯಲ್ಲಿ ಶಾಲಾ ಅಭಿವೃದ್ಧಿ ಸಮಿತಿ ಸಭೆ ಹಾಗೂ ಪೋಷಕರ ಸಭೆಯಲ್ಲಿಮಾನ್ಯ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ *ಎ.ಕಿರಣ್ ಕುಮಾರ್ ಕೊಡ್ಗಿಯವರು ಭಾಗವಹಿಸಿದರು, ಈ ಕಾರ್ಯಕ್ರಮದಲ್ಲಿ ಸಂವಿಧಾನದ ಪೀಠಿಕೆಯನ್ನು ಸಾಮೂಹಿಕವಾಗಿ ವಾಚನ ಮಾಡುವ ವಿಶೇಷ ಕಾರ್ಯಕ್ರಮವನ್ನು ಸರ್ಕಾರ ಹಮ್ಮಿಕೊಂಡಿದ್ದು ಇಂತಹ ಮಹತ್ವದ ದಿನದ ಸಂದರ್ಭದಲ್ಲಿ ಸಂವಿಧಾನ ಪೀಠಿಕೆಯ ಭ್ರಾತತ್ವ ಸಾಮರಸ್ಯ ಹಾಗೂ ಸಮಾನತೆಯ ಕುರಿತು ಅರಿತುಕೊಳ್ಳುವುದು ಅತಿ ಮುಖ್ಯ ಎಂದರು ಅವರು ಸಂವಿಧಾನ ಪೀಠಿಕೆಯನ್ನು ಓದಿ ಪ್ರೌಢಶಾಲೆಗೆ ಭೇಟಿಕೊಟ್ಟು ಇಲ್ಲಿನ ಕುಂದು ಕೊರತೆಗಳ ಬಗ್ಗೆ ವೀಕ್ಷಿಸಿದರು
ಈ ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಪ್ರಮೋದ ಹೆಗಡೆ ಹಾಗೂ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರದ ನಾಗರಾಜ್ *,,ಹಾಗೂ ಸಮಿತಿಯ ಸರ್ವ ಸದಸ್ಯರು ಹಾಗೂ *ಪೋಷಕರು ಹಾಗೂ ವಿದ್ಯಾರ್ಥಿಗಳು, ಶಿಕ್ಷಕ ವೃಂದದವರು ಮತ್ತು ನಾಗರಿಕರು ಉಪಸ್ಥಿತರಿದ್ದರು.