Home » ಮರವಂತೆ-ಬಡಾಕೆರೆ ವ್ಯವಸಾಯ ಸೇ.ಸ.ಸಂಘ ಮಹಾಸಭೆ
 

ಮರವಂತೆ-ಬಡಾಕೆರೆ ವ್ಯವಸಾಯ ಸೇ.ಸ.ಸಂಘ ಮಹಾಸಭೆ

by Kundapur Xpress
Spread the love

ಕುಂದಾಪುರ : ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಮಹಾಸಭೆ ನಾವುಂದದ ಶ್ರೀ ಮಹಾಗಣಪತಿ ಮಾಂಗಲ್ಯ ಮಂಟಪದಲ್ಲಿ ನಡೆಯಿತು

ಮಹಾಸಭೆಯ ಅಧ್ಯಕ್ಷತೆ ವಹಿಸಿದ ಸಂಘದ ಅಧ್ಯಕ್ಷ ಎಸ್. ರಾಜು ಪೂಜಾರಿ ಮಾತನಾಡಿ ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘವು ವರದಿ ಸಾಲಿನಲ್ಲಿ ರೂ. 312 ಕೋಟಿಗೂ ಮಿಕ್ಕಿದ ವ್ಯವಹಾರ ನಡೆಸಿ, ರೂ. 1.25 ಕೋಟಿ ಲಾಭ ಗಳಿಸಿದೆ. ಸದಸ್ಯರಿಗೆ ಶೇ. 14 ಡಿವಿಡೆಂಡ್ ನೀಡಲು ನಿರ್ಧರಿಸಲಾಗಿದೆ. ಸಂಘವು ವರದಿ ಸಾಲಿನಲ್ಲಿ ರೂ. 58.70 ಕೋಟಿ ಠೇವಣಿ ಹೊಂದಿ, ಸದಸ್ಯರಿಗೆ ರೂ. 43.82 ಕೋಟಿ ಸಾಲ ನೀಡಿದೆ. ಅದರಲ್ಲಿ ರೂ. 10 ಕೋಟಿಗೂ ಮಿಕ್ಕಿ ಕೃಷಿ ಸಾಲವನ್ನು ಸಂಘವು ಸದಸ್ಯರಿಗೆ ನೀಡಲಾಗಿದ್ದು, ವಿವಿಧ ನಿಧಿಗಳಲ್ಲಿ 45.71 ಕೋಟಿ ರೂ. ಸಂಚಯಿಸಲಾಗಿದೆ ಎಂದರು. ಸಂಸ್ಥೆಯ ಉಪಾಧ್ಯಕ್ಷ ಎಂ. ಚಂದ್ರಶೀಲ ಶೆಟ್ಟಿ, ನಿರ್ದೇಶಕರಾದ ವಾಸು ಪೂಜಾರಿ, ಭೋಜ ನಾಯ್ಕ್, ಜಗದೀಶ ಪಿ. ಪೂಜಾರಿ, ನರಸಿಂಹ ದೇವಾಡಿಗ, ರಾಮಕೃಷ್ಣ ಖಾರ್ವಿ, ಪ್ರಕಾಶ ದೇವಾಡಿಗ, ಎಂ. ಅಣ್ಣಪ್ಪ ಬಿಲ್ಲವ, ನಾರಾಯಣ ಶೆಟ್ಟಿ, ರಾಮ, ನಾಗಮ್ಮ ಸರೋಜಾ ಆರ್. ಗಾಣಿಗ, ಎಂ. ವಿನಾಯಕ ರಾವ್, ಉಪಸ್ಥಿತರಿದ್ದರು. ನೂತನ ಬಡಾಕೆರೆ ಶಾಖೆಯಲ್ಲಿ ಉತ್ತಮ ಠೇವಣಿ ಹಾಗೂ ಸಾಲ ವಸೂಲಾತಿ ಮಾಡಿದ ಶಾಖಾ ಪ್ರಬಂಧಕ ರತ್ನಾಕರ ಬಿಲ್ಲವ ಅವರನ್ನು ಗೌರವಿಸಲಾಯಿತು. ಎಸ್.ಎಸ್.ಎಲ್ಸಿ ಹಾಗೂ ಪಿಯುಸಿಯಲ್ಲಿ ಉತ್ತಮ ಅಂಕ ಗಳಿಸಿದ ಸಂಘದ ವ್ಯಾಪ್ತಿಯ ಸದಸ್ಯರ ಮಕ್ಕಳಿಗೆ ಪ್ರೋತ್ಸಾಹಧನ, ಇಂಜಿನಿಯರಿಂಗ್ ಕಲಿಯುವ ವಿದ್ಯಾರ್ಥಿಗಳಿಗೆ ಧನಸಹಾಯ ವಿತರಿಸಲಾಯಿತು. ನಿರ್ದೇಶಕ ಎಂ. ವಿನಾಯಕ ರಾವ್ ಸ್ವಾಗತಿಸಿದರು. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸುರೇಶ ಅಳ್ವೆಗದ್ದೆ ವರದಿ, ಆಯವ್ಯಯ ವಿವರ ನೀಡಿದರು. ಮರವಂತೆ ಶಾಖಾ ವ್ಯವಸ್ಥಾಪಕ ಸೋಮಯ್ಯ ಬಿಲ್ಲವ ನಿರೂಪಿಸಿದರು

   

Related Articles

error: Content is protected !!