Home » ಪ್ರಧಾನಿ ಮೋದಿ ಜನ್ಮದಿನಾಚರಣೆ
 

ಪ್ರಧಾನಿ ಮೋದಿ ಜನ್ಮದಿನಾಚರಣೆ

ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ : ರಕ್ತದಾನ ಶಿಬಿರ

by Kundapur Xpress
Spread the love

ಉಡುಪಿ : ಪ್ರಧಾನಿ ನರೇಂದ್ರ ಮೋದಿಯವರ 73ನೇ ಜನ್ಮ ದಿನಾಚರಣೆ ಪ್ರಯುಕ್ತ ಸೇವಾ ಪಾಕ್ಷಿಕ ಅಭಿಯಾನದ ಅಂಗವಾಗಿ ಬಿಜೆಪಿ ಜಿಲ್ಲಾ‌ ಮಹಿಳಾ ಮೋರ್ಜಾ ಮತ್ತು ಅಭಯಹಸ್ತ ಚಾರಿಟೇಬಲ್ ಟ್ರಸ್ಟ್(ರಿ.) ಉಡುಪಿ ಇದರ ಜಂಟಿ ಆಶ್ರಯದಲ್ಲಿ ರಕ್ತನಿಧಿ ವಿಭಾಗ ಕೆಎoಸಿ‌ ಮಣಿಪಾಲ ಇದರ ಸಹಯೋಗದೊಂದಿಗೆ ಸ್ವಯಂಪ್ರೇರಿತ ರಕ್ತದಾನ ಶಿಬಿರವು  ಮಣಿಪಾಲ ಕೆಎಂಸಿಯ ರಕ್ತನಿಧಿ ವಿಭಾಗದಲ್ಲಿ ನಡೆಯಿತು. ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹಾಗೂ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಶಿಬಿರವನ್ನು ಉದ್ಘಾಟಿಸಿದರು.

ಶಾಸಕ ಯಶ್ಪಾಲ್ ಸುವರ್ಣ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿಯವರ 73ನೇ ಜನ್ಮ ದಿನಾಚರಣೆಯಂದು ಬಿಜೆಪಿ ಜಿಲ್ಲಾ‌ ಮಹಿಳಾ ಮೋರ್ಚಾ ರಕ್ತದಾನ ಶಿಬಿರ ಆಯೋಜಿಸಿ‌ ಇತರರಿಗೆ ಮಾದರಿಯಾಗಿದ್ದಾರೆ. ದೇಶದ ಕಟ್ಟಕಡೆಯ ವ್ಯಕ್ತಿಯೂ ಇಂದು ನಿರ್ಭೀತಿಯಿಂದ ನೆಮ್ಮದಿಯ ಜೀವನ ನಡೆಸುವಂತೆ ಮಾಡಿದ ಭಾರತ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟು ಹಬ್ಬ ದಿನಾಚರಣೆಯ ಸಂಭ್ರಮವನ್ನು ಹೆಚ್ಚಿಸಲು ಜಿಲ್ಲಾ ಮಹಿಳಾ ಮೋರ್ಚಾದ ಸದಸ್ಯರುಗಳು ಹೆಚ್ಚಿನ ಸಂಖ್ಯೆಯಲ್ಲಿ ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿರುವುದು ಪ್ರಶಂಸನೀಯ ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಮಾತನಾಡಿ ಪ್ರಧಾನಿ ನರೇಂದ್ರ ಮೋದಿ ಜನ್ಮ ದಿನಾಚರಣೆಯ ಪ್ರಯುಕ್ತ ಜಿಲ್ಲಾ ಮಹಿಳಾ ಮೋರ್ಚಾ ಸಹಿತ ಜಿಲ್ಲೆಯ ಎಲ್ಲಾ ಮಂಡಲಗಳಲ್ಲಿ ರಕ್ತದಾನ ಶಿಬಿರ ಆಯೋಜಿಸಿರುವುದು ಅಭಿನಂದನೀಯ. ಸೆ.17ರಿಂದ ಅ.2ರ ವರೆಗೆ ನಡೆಯುವ ಸೇವಾ ಪಾಕ್ಷಿಕ ಅಭಿಯಾನದ ಎಲ್ಲಾ ಸೇವಾ ಚಟುವಟಿಕೆಗಳಲ್ಲಿ ಪಕ್ಷದ ಸಮಸ್ತ ಕಾರ್ಯಕರ್ತರು ಸಕ್ರಿಯವಾಗಿ ತೊಡಗಿಸಿಕೊಂಡು ಅಭಿಯಾನವನ್ನು ಅತ್ಯಂತ ಯಶಸ್ವಿಗೊಳಿಸಬೇಕು ಎಂದರು.

ರಕ್ತದಾನ ಶಿಬಿರದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ಮಾತನಾಡಿ ಪ್ರತೀ ವರ್ಷ ನರೇಂದ್ರ ಮೋದಿಯವರ ಜನ್ಮ ದಿನದ ಪ್ರಯುಕ್ತ ಸೇವಾ ಪಾಕ್ಷಿಕ ಅಭಿಯಾನದ ಅಂಗವಾಗಿ ಉಚಿತ ಕಣ್ಣಿನ ತಪಾಸಣಾ ಶಿಬಿರ, ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ರಕ್ತದಾನ ಶಿಬಿರದಂತಹ ಜನೋಪಯೋಗಿ ಸೇವಾ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬಂದಿದ್ದೇವೆ. ಪ್ರಧಾನಿ ಮೋದಿ ಜನ್ಮ ದಿನಾಚರಣೆ ಬಿಜೆಪಿ ಕಾರ್ಯಕರ್ತರಿಗೆ ಸ್ಪೂರ್ತಿ ತುಂಬುವ ಕಾರ್ಯಕ್ರಮ ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷೆ ಗೀತಾಂಜಲಿ ಎಮ್. ಸುವರ್ಣ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ರಕ್ತದ ಆಪತ್ಬಾಂಧವ ಸತೀಶ್ ಸಾಲ್ಯಾನ್, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಾಲಕೃಷ್ಣ ಶೆಟ್ಟಿ, ನಗರಸಭಾ ಸದಸ್ಯರು, ಜಿಲ್ಲಾ ಮಹಿಳಾ ಮೋರ್ಚಾದ ಪದಾಧಿಕಾರಿಗಳು, ಕಾರ್ಯಕಾರಿಣಿ ಸದಸ್ಯರು, ಉಡುಪಿ ನಗರ ಮಹಿಳಾ ಮೋರ್ಚಾದ ಸದಸ್ಯರು ಉಪಸ್ಥಿತರಿದ್ದರು.

   

Related Articles

error: Content is protected !!