ಕಾಪು :ಕಾಪು ತಾಲೂಕು ಆಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಇವರ ಆಶ್ರಯದಲ್ಲಿ ಕಾಪು ಶ್ರೀ ಕಾಳಿಕಾಂಬ ದೇವಸ್ಥಾನದಲ್ಲಿ ಆಯೋಜಿಸಲಾದ ಕಾಪು ತಾಲೂಕು ಮಟ್ಟದ “ಶ್ರೀ ವಿಶ್ವಕರ್ಮ ಜಯಂತಿ ಆಚರಣೆ” ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.
ಕಾರ್ಯಕ್ರಮದಲ್ಲಿ ಶಾಸಕರು ಮಾತನಾಡಿ ಪಂಚ ಕರ್ಮಗಳಿಗೆ ಅಧಿಪತಿ ವಿಶ್ವಕರ್ಮ. ವಿಶ್ವಕರ್ಮ ಸಮಾಜದವರು ಸಾತ್ವಿಕ ಪರಂಪರೆಯ ಸಮಾಜವಾದವರು ಎಂದು ಹೇಳಿದ ಅವರು ವಿಶ್ವಕರ್ಮ ಜಯಂತಿಯ ಈ ಸಂದರ್ಭದಲ್ಲಿ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರು ಪಿ.ಎಂ ವಿಶ್ವಕರ್ಮ ಯೋಜನೆಯನ್ನು ಇಂದಿನಿಂದ ಜಾರಿಗೊಳಿಸಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಕಾಪು ಶ್ರೀ ಕಾಳಿಕಾಂಬ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಶೇಖರ್ ಆಚಾರ್ಯ, ಕಟಪಾಡಿ ವೇಣುಗಿರಿ ಕಾಳಿಕಾಂಬ ವಿಶ್ವಕರ್ಮೇಶ್ವರ ದೇವಸ್ಥಾನ ಆಡಳಿತ ಮೊಕ್ತೇಸರರಾದ ನವೀನ್ ಆಚಾರ್ಯ ಪಡುಬಿದ್ರಿ, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿ ಜಿಲ್ಲಾ ವಿಶ್ವಕರ್ಮ ಒಕ್ಕೂಟ (ರಿ.) ಅಧ್ಯಕ್ಷರಾದ ಮುಲ್ಕಿ ಮಧು ಆಚಾರ್ಯ, ಕಾಪು ವಿಶ್ವ ಬ್ರಾಹ್ಮಣ ಯುವ ಸಂಘಟನೆ ಅಧ್ಯಕ್ಷರಾದ ಬಿಳಿಯಾರು ಸುಧಾಕರ ಆಚಾರ್ಯ, ಮುರುಡೇಶ್ವರ ಆರ್.ಎನ್ ಶೆಟ್ಟಿ ಪಾಲಿಟೆಕ್ನಿಕ್ ಕಾಲೇಜು ಉಪನ್ಯಾಸಕರಾದ ಚೇಂಪಿ ದಿನೇಶ್ ಆಚಾರ್ಯ, ಕಾಪು ತಹಶೀಲ್ದಾರರಾದ ನಾಗರಾಜ್ ನಾಯ್ಕಡ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.