ಕುಂದಾಪುರ:ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಇದರ 2023-24ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭವು ನೆರವೇರಿತು. ಕಾರ್ಯಕ್ರಮವನ್ನು ಭಂಡಾರ್ಕಾರ್ಸ್ ಕಾಲೇಜಿನ ನಿವೃತ್ತ ಪ್ರಾಧ್ಯಾಪಕರಾದ ವಾಣಿಜ್ಯ ವಿಭಾಗದ ಮುಖ್ಯಸ್ಥ ರಾಗಿದ್ದ ಪ್ರೊ ಜಿ. ಎಸ್. ಹೆಗಡೆ ಯವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಏನ್.ಎಸ್. ಎಸ್ ನ ಧ್ಯೇಯ್ಯೋದ್ದೇಶಗಳು, ಅದರಿಂದಾಗುವ ಪ್ರಯೋಜನಗಳ ಬಗ್ಗೆ ವಿವರಿಸಿ ಶುಭ ಹಾರೈಸಿದರು.
ಪ್ರಾಂಶುಪಾಲರಾದ ಡಾ. ಶುಭಕಾರಾಚಾರಿ ಇವರು ಏನ್.ಎಸ್. ಎಸ್ ನ ಮಹತ್ವ ಮತ್ತು ಅಗತ್ಯತೆ ಬಗ್ಗೆ ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಡಾ. ವಿಜಯ ಕುಮಾರ್ ಕೆ. ಎಂ., ಐಕ್ಯೂಎಸಿ ಸಂಯೋಜಕರು,ಏನ್ ಎಸ್ ಎಸ್ ಯೋಜನಾಧಿಕಾರಿಗಳಾದ ರಾಮಚಂದ್ರ ಆಚಾರ್ ಹಾಗೂ ಉಪನ್ಯಾಸಕವೃಂದದವರು ಉಪಸ್ಥಿತರಿದ್ದರು.ಸ್ವಯಂಸೇವಕರಾದ ಕುಮಾರಿ ಶ್ರದ್ಧಾ ಸ್ವಾಗತಿಸಿದರು, ಕುಮಾರಿ ಸುಧೀಕ್ಷಾ ಅತಿಥಿಗಳನ್ನು ಪರಿಚಯಿಸಿದರು,ಕುಮಾರಿ ಕವನಾ ವಂದಿಸಿದರು ಹಾಗೂ ಕುಮಾರಿ ಶ್ರೀಲಕ್ಷ್ಮಿ ಕಾರ್ಯಕ್ರಮ ನಿರ್ವಹಿಸಿದರು