Home » ನನ್ನ ಮಣ್ಣು ನನ್ನ ದೇಶ’ ಅಭಿಯಾನ
 

ನನ್ನ ಮಣ್ಣು ನನ್ನ ದೇಶ’ ಅಭಿಯಾನ

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಚಾಲನೆ

by Kundapur Xpress
Spread the love

ಉಡುಪಿ : ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆಯಾದ ದೇಶದ ನೂತನ ಸಂಸತ್ ಭವನ ‘ಕರ್ತವ್ಯ ಪಥ’ದ ಬಳಿ ನಿರ್ಮಾಣಗೊಳ್ಳಲಿರುವ ‘ಅಮೃತ ಉದ್ಯಾನವನ’ಕ್ಕೆ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಜಿಲ್ಲೆಯ ಎಲ್ಲ ಗ್ರಾಮಗಳಿಂದ ಮಣ್ಣು ಸಂಗ್ರಹಿಸುವ ‘ನನ್ನ ಮಣ್ಣು ನನ್ನ ದೇಶ’ ಅಭಿಯಾನಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆಯವರು ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಚಾಲನೆ ನೀಡಿದರು. ದೇಗುಲದ ಪರಿಸರದಲ್ಲಿ ಸಂಗ್ರಹಿಸಿದ ಪವಿತ್ರ ಮಣ್ಣನ್ನು ಅಮೃತ ಕಳಶಗಳಲ್ಲಿರಿಸಿ ದೇವರಿಗೆ ಪೂಜೆ ಸಲ್ಲಿಸಿದ ಬಳಿಕ ಕಡಿಯಾಳಿ ದೇವಸ್ಥಾನದಿಂದ ಬಿಜೆಪಿ ಜಿಲ್ಲಾ ಕಛೇರಿಯವರೆಗೆ ಮೆರವಣಿಗೆಯಲ್ಲಿ ತರಲಾಯಿತು.

ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅಮೃತ ಕಳಸಗಳನ್ನು ಜಿಲ್ಲೆಯ ಎಲ್ಲ ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷರಿಗೆ ಹಸ್ತಾಂತರಿಸಲಾಯಿತು. ಅ.13ರ ಒಳಗೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಗ್ರಾಮಸ್ಥರು ಹಾಗೂ ಸಾಮಾಜಿಕ ಮತ್ತು ಧಾರ್ಮಿಕ ಮುಖಂಡರ ಸಮಾಗಮದೊಂದಿಗೆ ಕಾರ್ಯಕ್ರಮವನ್ನು ಆಯೋಜಿಸುವ ಮೂಲಕ ಗ್ರಾಮದಲ್ಲಿ ಸಂಗ್ರಹಿಸಿದ ಮಣ್ಣನ್ನು ಮಂಡಲಗಳ ಮೂಲಕ ಬಿಜೆಪಿ ಜಿಲ್ಲಾ ಕಛೇರಿಗೆ ತಲುಪಿಸಲು ಸೂಚಿಸಲಾಯಿತು.

ಈ ಸಂದರ್ಭದಲ್ಲಿ ಶಾಸಕರಾದ ಯಶ್‌ಪಾಲ್ ಸುವರ್ಣ, ಗುರುರಾಜ್ ಗಂಟಿಹೊಳೆ, ಗುರ್ಮೆ ಸುರೇಶ್ ಶೆಟ್ಟಿ, ಕಿರಣ್ ಕುಮಾರ್ ಕೊಡ್ಗಿ, ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ರಾಜ್ಯ ಉಪಾಧ್ಯಕ್ಷೆೆ ನಯನಾ ಗಣೇಶ್, ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಮುಖಂಡರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಗೀತಾಂಜಲಿ ಎಮ್. ಸುವರ್ಣ, ಕುತ್ಯಾರು ನವೀನ್ ಶೆಟ್ಟಿ, ಮನೋಹರ್ ಎಸ್. ಕಲ್ಮಾಡಿ, ಸದಾನಂದ ಉಪ್ಪಿನಕುದ್ರು, ತಿಂಗಳೆ ವಿಕ್ರಮಾರ್ಜುನ ಹೆಗ್ಡೆೆ, ಶ್ಯಾಮಲಾ ಎಸ್. ಕುಂದರ್, ಅಂಡಾರು ದೇವಿಪ್ರಸಾದ್ ಶೆಟ್ಟಿ, ದಿನಕರ ಬಾಬು, ವೀಣಾ ಎಸ್. ಶೆಟ್ಟಿ, ಸತ್ಯಾನಂದ ನಾಯಕ್, ಗುರುಪ್ರಸಾದ್ ಶೆಟ್ಟಿ, ಶಿವಕುಮಾರ್ ಅಂಬಲಪಾಡಿ, ಪ್ರತಾಪ್‌ ಶೆಟ್ಟಿ ಚೇರ್ಕಾಡಿ, ರಾಘವೇಂದ್ರ ಉಪ್ಪೂರು, ಕಿರಣ್ ಕುಮಾರ್, ಅಭಿಯಾನದ ಸಂಯೋಜಕ ಸುಪ್ರಸಾದ್ ಶೆಟ್ಟಿ, ಸಹ ಸಂಯೋಜಕರಾದ ಶ್ರೀನಿಧಿ ಹೆಗ್ಡೆೆ, ಸುದೀಪ್ ಶೆಟ್ಟಿ ನಿಟ್ಟೆೆ ಮತ್ತು ನಳಿನಿ ಪ್ರದೀಪ್‌ ರಾವ್, ದಾವೂದ್ ಅಬೂಬಕ್ಕರ್, ಆಲ್ವಿನ್ ಡಿ’ಸೋಜಾ, ಪ್ರವೀಣ್‌ ಕುಮಾರ್ ಗುರ್ಮೆ, ದೀಪಕ್ ಕುಮಾರ್ ಶೆಟ್ಟಿ, ಶಂಕರ ಅಂಕದಕಟ್ಟೆ, ಮಹಾವೀರ ಹೆಗ್ಡೆ, ಶ್ರೀಕಾಂತ್ ನಾಯಕ್, ವೀಣಾ ನಾಯ್ಕ್, ದಿನೇಶ್ ಅಮೀನ್, ನವೀನ್ ನಾಯಕ್, ಪ್ರಿಯದರ್ಶಿನಿ, ರಾಜು ಕುಲಾಲ್, ರಘುವೀರ್ ಶೆಣೈ, ಸಚಿನ್ ಪೂಜಾರಿ, ಸುಮಾ ಶೆಟ್ಟಿ ಹಾಗೂ ಪಕ್ಷದ ಪ್ರಮುಖರು, ಬಿಜೆಪಿ ಜಿಲ್ಲಾ, ಮೋರ್ಚಾ, ಪ್ರಕೋಷ್ಠ, ಮಂಡಲಗಳ ಪದಾಧಿಕಾರಿಗಳು, ಉಡುಪಿ ನಗರಸಭಾ ಸದಸ್ಯರುಗಳ ಸಹಿತ ವಿವಿಧ ಸ್ತರದ ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು

   

Related Articles

error: Content is protected !!