ಕಾಪು : ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಕಾಪು ಇದರ ವಿದ್ಯಾರ್ಥಿ ಪರಿಷತ್ ನ ಉದ್ಘಾಟನೆಯನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಪುರಸಭಾ ಸದಸ್ಯರಾದ ಅನಿಲ್ ಕುಮಾರ್, ನಾಗೇಶ್, ಹರಿಣಾಕ್ಷಿ, ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಾಂಶುಪಾಲರಾದ ಡಾ. ಗೋಪಾಲಕೃಷ್ಣ ಎಂ. ಗಾವಂಸ್ಕರ್, ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರಿನ ಇಂಗ್ಲಿಷ್ ವಿಭಾಗದ ಡಾ. ಪ್ರಸಾದ್ ರಾವ್, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳಾದ ಪ್ರೋ. ದೀಪಿಕಾ ಸುವರ್ಣ, ವಿದ್ಯಾರ್ಥಿ ಪರಿಷತ್ ಅಧ್ಯಕ್ಷರಾದ ಕವಿತಾ, ಉಪಾಧ್ಯಕ್ಷರಾದ ಶರಣ್ಯ, ಸೂರಜ್, ಕಾರ್ಯದರ್ಶಿಗಳಾದ ಸುಶ್ಮಿತಾ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು, ಬೋಧಕ ಬೋಧಕೇತರವೃಂದ, ವಿದ್ಯಾರ್ಥಿಗಳು, ಹಳೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು