ಕುಂದಾಪುರ : ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿಯವರ ನೇತ್ರತ್ವದಲ್ಲಿ ಬೈಂದೂರು ಶಾಸಕರಾದ ಗುರುರಾಜ್ ಗಂಟಿಹೊಳೆ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಉಪಸ್ಥಿತಿಯಲ್ಲಿ
ಕುಂದಾಪುರ ಚಿಪ್ಪು ಕಾರ್ಮಿಕರ ಸಮಸ್ಯೆಯನ್ನು ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ಅಧಿಕ್ಷರಾದ ಡಾ. ಕೆ ಅರುಣ್ ಕುಮಾರ್ ಇವರ ಸಹಕಾರದಿಂದ ಶೀಘ್ರವಾಗಿ ಸಮಸ್ಯೆಯನ್ನು ಪರಿಹರಿಸಿದ್ದಕ್ಕಾಗಿ ಚಿಪ್ಪು ಕಾರ್ಮಿಕರ ಸಂಘಟನೆಯ ನಿಯೋಗದ ವತಿಯಿಂದ ಶಾಸಕಾರದ ಎ. ಕಿರಣ್ ಕುಮಾರ್ ಕೊಡ್ಗಿಯವರನ್ನು ಕುಂದಾಪುರ ಶಾಸಕರ ಕಛೇರಿಯಲ್ಲಿ ಗೌರವಿಸಿ ಅಭಿನಂದನೆ ಸಲ್ಲಿಸಲಾಯಿತು ಈ ಸಂದರ್ಭದಲ್ಲಿ ಪ್ರಕಾಶ್ ಖಾರ್ವಿ ಮಂಗಳೂರು ಪ್ರಭಾರಿ ರಾಜೇಶ್ ಕಾವೇರಿ ಉಪಸ್ಥಿತರಿದ್ದರು