ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯ 2023-24 ನೇ ಸಾಲಿನ ಶೈಕ್ಷಣಿಕ ಮಂಡಳಿಯ ದ್ವಿತೀಯ ಸಾಮನ್ಯ ಸಭೆಯು ನಿನ್ನೆ ದಿನಾಂಕ 04-10-2023 ರಂದು ಜರುಗಿತು ಕಾಪು ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾವಿಷಯಕ ಪರಿಷತ್ತಿನ ಸದಸ್ಯರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಶೈಕ್ಷಣಿಕ ಮಂಡಳಿಯಲ್ಲಿ ಮಂಡಿಸಲಾದ ಪ್ರಸ್ತಾವನೆಗಳ ಬಗ್ಗೆ ವಿಸ್ತೃತವಾಗಿ ಚರ್ಚಿಸಿದರು
ಶಾಸಕರು ಸಭೆಯಲ್ಲಿ ಮಾತನಾಡಿ ಪದವಿ ಪೂರ್ಣಗೊಂಡ ವಿದ್ಯಾರ್ಥಿಗಳಿಗೆ ಸರಿಯಾದ ಉದ್ಯೋಗ ದೊರಕುತ್ತಿಲ್ಲ. ಇದರಿಂದ ಅವರು ನಿರುದ್ಯೋಗಿಗಳಾಗುತ್ತಿದ್ದಾರೆ. ಕಾಲೇಜುಗಳಲ್ಲಿ ಗುಣಮಟ್ಟದ ಶಿಕ್ಷಣವನ್ನು ನೀಡುವುದರ ಜೊತೆಗೆ ಕೌಶಲ್ಯ ಅಭಿವೃದ್ಧಿ ತರಬೇತಿಗಳನ್ನು ನೀಡಬೇಕು ಇದರಿಂದ ಅವರ ಮುಂದಿನ ಜೀವನ ರೂಪಿಸಿಕೊಳ್ಳಲು ಸಹಕಾರಿಯಾಗಲಿದೆ ಎಂದು ಹೇಳಿದ ಅವರು ಕಾಲೇಜುಗಳಲ್ಲಿ ಬಾಕಿ ಇರುವ ಸರ್ಕಾರಿ ಅಧ್ಯಾಪಕರನ್ನು ಭರ್ತಿಗೊಳಿಸುವುದರ ಜೊತೆಗೆ ಅತಿಥಿ ಉಪನ್ಯಾಸಕರ ಸಮಸ್ಯೆಯನ್ನು ಬಗೆಹರಿಸಬೇಕು ಎಂದರು.
ಈ ಸಂದರ್ಭದಲ್ಲಿ ಮಡಿಕೇರಿ ಶಾಸಕರು, ವಿದ್ಯಾವಿಷಯಕ ಪರಿಷತ್ತಿನ ಸದಸ್ಯರಾದ ಡಾ. ಮಂತರ್ ಗೌಡ, ಮಂಗಳೂರು ವಿಶ್ವವಿದ್ಯಾನಿಲಯದ ಸಹ ಕುಲಪತಿಗಳಾದ ಜಯರಾಜ್ ಅಮೀನ್, ಕುಲಸಚಿವರಾದ (ಆಡಳಿತ) ರಾಜು ಕೆ, ಕುಲಸಚಿವರಾದ (ಪರೀಕ್ಷಾಂಗ) ರಾಜು ಚಲ್ಲಣ್ಣ, ಹಣಕಾಸು ಅಧಿಕಾರಿಗಳಾದ ಚಂಗಪ್ಪ ಉಪಸ್ಥಿತರಿದ್ದರು