Home » ಕಾನೂನುಬಾಹಿರ ಗಣಿಗಾರಿಕೆಗೆ ಅವಕಾಶ ಇಲ್ಲ
 

ಕಾನೂನುಬಾಹಿರ ಗಣಿಗಾರಿಕೆಗೆ ಅವಕಾಶ ಇಲ್ಲ

ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

by Kundapur Xpress
Spread the love

ಬೆಂಗಳೂರು : ಕಾನೂನುಬಾಹಿರ ಗಣಿಗಾರಿಕೆಗೆ ಅವಕಾಶ ನೀಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದು ಕೆಂಪುಕಲ್ಲು ಹಾಗೂ ಮಣ್ಣಿನ ವಿಚಾರದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ

ಉಡುಪಿ ಜಿಲ್ಲೆಯ ವ್ಯಾಪ್ತಿಯಲ್ಲಿ ಮರಳು ಮತ್ತು ಕೆಂಪು ಕಲ್ಲು ಗಣಿಗಾರಿಕೆಗೆ ಸಂಬಂಧಿಸಿದಂತೆ ಗುರುವಾರ ಅವರು ಸಭೆಯಲ್ಲಿ ಮಾತನಾಡಿದರು ಮರಳುಗಾರಿಕೆಗೆ ಜಿಲ್ಲಾಧಿಕಾರಿಗಳ ಮೂಲಕ ಪರವಾನಿಗೆ ನೀಡಲಿ ಮನೆ ಕಟ್ಟಲು ಅಗತ್ಯವಿರುವ ಸೈಜುಕಲ್ಲುಗಳಿಗೆ ಗಣಿಕೆ ಗಣಿಗಾರಿಕೆ ಮಾಡಲು ಕಾಯ್ದೆ ಸರಳೀಕರಣ ಮಾಡಿ ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಬೇಕು ಎಂದು ಮುಖ್ಯಮಂತ್ರಿಗಳ ಸಭೆಯಲ್ಲಿ ಮನವಿ ಮಾಡಲಾಯಿತು.

ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಅರ್ಹಳ್ಕರ್ ಸಚಿವರಾದ ಎಸ್ ಎಸ್ ಮಲ್ಲಿಕಾರ್ಜುನ್ ಎಚ್‌ ಸಿ ಮಹದೇವಪ್ಪ ಚೆಲುವರಾಯಸ್ವಾಮಿ ಬಿ ನಾಗೇಂದ್ರ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ್ ಹೆಗ್ಡೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಯಶ್ಪಾಲ್ ಸುವರ್ಣ ಕಿರಣ್ ಕುಮಾರ್ ಕೊಡ್ಗಿ ಗುರುರಾಜ್ ಗಂಟಿಹೊಳೆ, ವಿಧಾನ ಪರಿಷತ್‌ ಸದಸ್ಯರಾದ ಕೋಟ ಶ್ರೀನಿವಾಸ್ ಪೂಜಾರಿ ಮಂಜುನಾಥ್ ಭಂಡಾರಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಹಾಗೂ ದಿನೇಶ್ ಹೆಗ್ಡೆ ಮೊಳಹಳ್ಳಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ.ಕೆ ಅರುಣ್ ಹಾಗೂ ಜಿಲ್ಲಾ ಪಂಚಾಯತ್ ಸಿಇಒ ಪ್ರಸನ್ನ ಹಾಜರಿದ್ದರು

   

Related Articles

error: Content is protected !!