Home » ಎನ್.ಎಸ್.ಎಸ್. ಸ್ವಯಂಸೇವಕಿ ಪ್ರಥಮ ಸ್ಥಾನ
 

ಎನ್.ಎಸ್.ಎಸ್. ಸ್ವಯಂಸೇವಕಿ ಪ್ರಥಮ ಸ್ಥಾನ

ಶ್ರೇಯಾ ಖಾರ್ವಿ

by Kundapur Xpress
Spread the love

ಕುಂದಾಪುರ : ಜೈಪುರದ ಐಐಎಸ್ ವಿಶ್ವವಿದ್ಯಾನಿಲಯ ಆಶ್ರಯದಲ್ಲಿ ಏಕ್ ಭಾರತ್ ಶ್ರೇಷ್ಠ ಭಾರತ್ ಕಾರ್ಯಕ್ರಮದಡಿ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಹಮ್ಮಿಕೊಂಡ ರಾಷ್ಟ್ರಮಟ್ಟದ ದೇಶಭಕ್ತಿಗೀತೆ ಗಾಯನ ಸ್ಪರ್ಧೆಯಲ್ಲಿ ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್. ಸ್ವಯಂಸೇವಕಿ ಮಂಗಳೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಿ ಪ್ರಥಮ ಸ್ಥಾನ ಪಡೆದಿದ್ದಾರೆ. ದೇಶದ ವಿವಿಧ ವಿಶ್ವವಿದ್ಯಾನಿಲಯದ ಕಾಲೇಜುಗಳ ಎನ್.ಎಸ್.ಎಸ್. ಸ್ವಯಂಸೇವಕರು ಭಾಗವಹಿಸಿದ ಈ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಪಶ್ಚಿಮ ಬಂಗಾಳದ ಡಾರ್ಜಲಿಂಗ್ ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಿದ, ಶ್ರೀಜಯಂತಿ ಭಟ್ಟಾಚಾರ್ಯ, ದ್ವಿತೀಯ ಸ್ಥಾನವನ್ನು ಪಡೆದರೆ, ಅಸ್ಸಾಂನ ಗೋಲ್‍ಗತ್ ಎಚ್.ಪಿ.ಬಿ ಗಲ್ರ್ಸ್ ಹೈಸ್ಕೂಲ್‍ನ ಗೌರಿಬೋರಾ ತೃತೀಯ ಸ್ಥಾನ ಪಡೆದಿದ್ದಾರೆ.

   

Related Articles

error: Content is protected !!