ಉಡುಪಿ : ಇಸ್ರೇಲ್ ದೇಶದ ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿ ಇಟ್ಟುಕೊಂಡು ಇಸ್ರೇಲ್ ದೇಶಗಳಲ್ಲಿ ವ್ಯಾಪಾರ ಶಿಕ್ಷಣ ಉದ್ಯೋಗ ಹಾಗೂ ಇತರೆ ಉದ್ದೇಶಗಳಿಗೆ ಹೋಗಿರುವ ಮತ್ತು ವಾಸವಿರುವ ಉಡುಪಿ ಜಿಲ್ಲೆಗೆ ಸಂಬಂಧಪಟ್ಟ ಭಾರತದ ಪ್ರಜೆಗಳಿದ್ದಲ್ಲಿ ಅವರ ಬಗ್ಗೆ ಮಾಹಿತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ, ಉಡುಪಿ ರಜತಾದ್ರಿ, ಮಣಿಪಾಲ ಇಲ್ಲಿ ತೆರೆದಿರುವ ಕಂಟ್ರೋಲ್ ರೂಮ್ ಸಂಖ್ಯೆ 1077 ಅಥವಾ ಫೋನ್ ನಂಬರ್ 0820 ; 2574802 ಅಥವಾ ರಾಜ್ಯ ಸರ್ಕಾರದ ತುರ್ತು ಸಂಖ್ಯೆ 080;22340676 080;22253707 ಇದಕ್ಕೆ ಕರೆ ಮಾಡಿ ಕೂಡಲೇ ಮಾಹಿತಿ ನೀಡಬೇಕೆಂದು ಜಿಲ್ಲಾಧಿಕಾರಿಯವರ ಪ್ರಕಟಣೆ ತಿಳಿಸಿದೆ