ಕುಂದಾಪುರ : ಶೈಕ್ಷಣಿಕ ಅಭ್ಯಾಸದ ಜತೆಗೆ ವಿದ್ಯಾರ್ಥಿಗಳು ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳುವುದು ಉತ್ತಮ ಕೇವಲ ಪಾಠದ ಕಡೆಗೆ ಮಾತ್ರ ಗಮನ ಕೊಡದೆ ಯೋಚನಾ ಶಕ್ತಿಯನ್ನು ಹೆಚ್ಚಿಸುವ ಹಲವಾರು ರೀತಿಯ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಾಗ ಬೌದ್ಧಿಕ ಮಟ್ಟದ ಬೆಳವಣಿಗೆಯೂ ಹೆಚ್ಚುತ್ತದೆ.ಶಾಲಾ ಕಾಲೇಜುಗಳಲ್ಲಿ ಪಾಠದ ಜತೆಗೆ ಪಠ್ಯೇತರ ಚಟುವಟಿಕೆಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿದಾಗ ಮಕ್ಕಳು ಸಕ್ರಿಯರಾಗಿರುತ್ತಾರೆ. ಎಂದು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎ.ಕಿರಣ್ ಕುಮಾರ್ ಕೊಡ್ಗಿಯವರು ಹೇಳಿದರು
ರಾಷ್ಟ್ರೀಯ ಸೇವಾ ಯೋಜನಾ ವಾರ್ಷಿಕ ಕಾರ್ಯ ಚಟುವಟಿಕೆ ಹಾಗೂ ಅಭಿವಿನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಹಾಲಾಡಿ ಗ್ರಾಮ ಪಂಚಾಯಿತಿನ ಅಧ್ಯಕ್ಷರಾದ ಅಶೋಕ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು
ಹಾಲಾಡಿ ಗ್ರಾಮ ಪಂಚಾಯತಿನ ಸದಸ್ಯರಾದ ಜನಾರ್ದನ ಮತ್ತು ಗುರುಪ್ರಸಾದ್ರಾಷ್ಟ್ರೀಯ ಸೇವಾ ಯೋಜನಾ ಅಧಿಕಾರಿ ಮಮತಾ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಬಾಲಕೃಷ್ಣ ಭಟ್, ಪ್ರೌಢಶಾಲಾ ಮುಖ್ಯ ಶಿಕ್ಷಕಿಯಾದ ರೋಷನ್ ಬೇಬಿ,, ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ರಾಘವೇಂದ್ರ ಆಚಾರ್ಯ, ಹಿರಿಯ ಪ್ರಾಥಮಿಕ ಶಾಲೆ 28 ಹಾಲಾಡಿ ಇದರ ಮುಖ್ಯ ಶಿಕ್ಷಕಿಯಾದ ಲೀಲಾವತಿ, ಕಾಲೇಜಿನ ಶಿಕ್ಷಕರಾದ ಗಣಪತಿ ಹೆಗ್ಡೆ ಮತ್ತು ಗ್ರಾಮಸ್ಥರು, ಶಿಕ್ಷಕ ವೃಂದದವರು ಹಳೆ ವಿದ್ಯಾರ್ಥಿ ಸಂಘದ ಸದಸ್ಯರು ಉಪಸ್ಥಿತರಿದ್ದರು
ಎನ್.ಎಸ್.ಎಸ್. ವಿದ್ಯಾರ್ಥಿಗಳ ಪ್ರತಿಭಾ ಕಾರ್ಯಕ್ರಮವು ಹೆಗ್ಗುಂಜೆ ರಾಜೀವ ಶೆಟ್ಟಿ ಹಾಲಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿತು