ಕೋಟೇಶ್ವರ : ಕಾಲೇಜಿನ ಉದ್ಯೋಗ ಮಾರ್ಗದರ್ಶನ ಕೋಶ, ಐ.ಕ್ಯೂ.ಎ.ಸಿ. ಹಾಗೂ ಸ್ಪರ್ಧಾ ಸಾರಥಿ ಅಕಾಡೆಮಿ ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ವಿಶಾಲವಾದ ಸಭಾಂಗಣದಲ್ಲಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಅರಿವು ಕಾರ್ಯಗಾರ ನಡೆಯಿತು. ಸ್ಪರ್ಧಾ ಸಾರಥಿ ಅಕಾಡೆಮಿಯ ನಿರ್ಧೇಶಕರಾದ ಆದರ್ಶ ಇವರು ನೆರೆದಿದ್ದ 400 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ರಾಜ್ಯ ಹಾಗೂ ರಾಷ್ಟ್ರಮಟ್ಟದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ನೀಡಿದ್ದಲ್ಲದೇ ಎದುರಿಸುವ ಬಗೆ ಹಾಗೂ ಪೂರ್ವ ತಯಾರಿಯ ಬಗ್ಗೆ ಸಮಗ್ರ ಮಾಹಿತಿ ನೀಡಿದರು. ಇನ್ನೊರ್ವ ಸಂಪನ್ಮೂಲ ವ್ಯಕ್ತಿ ಹಾಗೂ ಐ.ಎ.ಎಸ್., ಕೆ.ಎ.ಎಸ್. ಪರೀಕ್ಷಾ ತರಬೇತುದಾರರಾದ ಶ್ರೀ ತೌಸಿಫ್ ಇವರು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಭಾರತದ ಸಂವಿಧಾನ ಎನ್ನುವ ವಿಚಾರವಾಗಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಯಕ್ಷತೆಯನ್ನು ವಹಿಸಿದ್ಧ ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಜೇಂದ್ರ ಎಸ್. ನಾಯಕ ತಮ್ಮ ಅಧ್ಯಕ್ಷೀಯ ನುಡಿಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳಿಗಿರುವ ವಿಪುಲ ಅವಕಾಶ ಹಾಗೂ ಕಾಲೇಜಿನಲ್ಲಿರುವ ಗ್ರಂಥಾಲಯ ಹಾಗೂ ಇತರ ವ್ಯವಸ್ಥೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿಗಳಾದ ರಾಮರಾಯ ಆಚಾರ್ಯ, ಐ.ಕ್ಯೂ.ಎ.ಸಿ ಸಂಚಾಲಕರಾದ ನಾಗರಾಜ ಯು, ಗ್ರಂಥಪಾಲಕರಾದ ವೆಟರನ್ ರವಿಚಂದ್ರ ಹೆಚ್. ಎಸ್., ಕಾಲೇಜಿನ ಇತರ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರು ಹಾಗೂ ಉದ್ಯೋಗ ಮಾರ್ಗದರ್ಶನ ಕೋಶದ ಸಂಚಾಲಕರಾದ ಮನೋಹರ ಬಿ. ಇವರು ಕಾರ್ಯಕ್ರಮವನ್ನು ಸಂಘಟಿಸಿ ಕಾರ್ಯಕ್ರಮದಲ್ಲಿ ನೆರೆದಿದ್ದವರನ್ನು ಸ್ವಾಗತಿಸಿದರು. ಅಂತಿಮ ಬಿ.ಕಾಂ. ವಿದ್ಯಾರ್ಥಿ ಗೌರೀಶ್ ಕಾರ್ಯಕ್ರಮವನ್ನು ನಿರೂಪಿಸಿದರು.