ಕಾಪು : ಬಸವ ವಸತಿ ಯೋಜನೆಯಡಿ ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ 5 ಫಲಾನುಭವಿಗಳಿಗೆ ಮನೆ ಮಂಜೂರಾತಿ ಆದೇಶ ಪತ್ರ ಮಂಜೂರಾಗಿದೆ ಹಿರಿಯಡಕ ಶಾಸಕರ ಕಚೇರಿಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಫಲಾನುಭವಿಗಳಿಗೆ ಮಂಜೂರಾತಿ ಆದೇಶ ಪತ್ರವನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಯಂತಿ ಶೆಟ್ಟಿ, ಉಪಾಧ್ಯಕ್ಷರಾದ ಹರೀಶ್ ಸಾಲಿಯಾನ್, ಪಂಚಾಯತ್ ಸದಸ್ಯರಾದ ಸುನಿಲ್ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು