ಉಡುಪಿ : ವರ್ಷಂಪ್ರತಿಯಂತೆ, ನವರಾತ್ರಿ ಉತ್ಸವದ ಪ್ರಯುಕ್ತ ಅ.22 ರವಿವಾರ ಬಿಜೆಪಿ ಉಡುಪಿ ಜಿಲ್ಲೆ ಮತ್ತು ಬಿಜೆಪಿ ಉಡುಪಿ ನಗರ ವತಿಯಿಂದ ಶಾರದಾ ಪೂಜೆ ಕಾರ್ಯಕ್ರಮವು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯಲಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.
ಅ.22ರ ಬೆಳಿಗ್ಗೆ ಗಂಟೆ 8.00ಕ್ಕೆ ಗಣ ಹೋಮ, 9.30ಕ್ಕೆ ಭಜನೆ ಮತ್ತು ವೀಣಾ ವಾದನ, ಮಧ್ಯಾಹ್ನ ಗಂಟೆ 12.00ಕ್ಕೆ ಮಹಾಪೂಜೆ ಹಾಗೂ 12.30ಕ್ಕೆ ಪ್ರಸಾದ ವಿತರಣೆ ಮತ್ತು ಅನ್ನ ಸಂತರ್ಪಣೆ ನೆರವೇರಲಿದೆ. ಪಕ್ಷದ ಪ್ರಮುಖರು, ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತ ಬಂಧುಗಳು ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.