ಕುಂದಾಪುರ : ಭಾರತೀಯ ಜನತಾ ಪಾರ್ಟಿ ಕುಂದಾಪುರ ಮಂಡಲದ ವತಿಯಿಂದ ನಗರದ ಬಿಜೆಪಿ ಕಚೇರಿಯಲ್ಲಿ ಕರ್ನಾಟಕ ವಿಧಾನ ಪರಿಷತ್ ಚುನಾವಣೆ – 2024 ರ ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ಶಿಕ್ಷಕರ ಚುನಾವಣಾ ಕ್ಷೇತ್ರ ಚುನಾವಣೆ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆ ಜರುಗಿತು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಸುರೇಶ್ ನಾಯಕ್ ಕುಯಿಲಾಡಿಯವರು ಪಕ್ಷದ ಪದಾಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿ ಪದವಿ ಪೂರೈಸಿರುವ ಮತದಾರರು ಚುನಾವಣಾ ಆಯೋಗದ 18 ನಮೂನೆ ಅರ್ಜಿಯನ್ನು ಭರ್ತಿ ಮಾಡುವ ಮೂಲಕ ಮತದಾರ ಪಟ್ಟಿಯಲ್ಲಿ ಹೆಸರು ನೊಂದಾಯಿಸಿಕೊಳ್ಳುವ ಪ್ರಕ್ರಿಯೆ ಶೀಘ್ರಗತಿಯಲ್ಲಿ ಆಗಬೇಕು ಎಂದು ಸಮಗ್ರವಾದ ಮಾಹಿತಿ ನೀಡಿದರು.
ಪಕ್ಷದ ಕಚೇರಿಯಲ್ಲಿ ಜರುಗಿದ ಸಭೆಯ ಅಧ್ಯಕ್ಷತೆಯನ್ನು ಶಾಸಕರಾದ ಶ್ರೀ ಎ.ಕಿರಣ್ ಕುಮಾರ್ ಕೊಡ್ಗಿಯವರು ವಹಿಸಿದ್ದರು ಕುಂದಾಪುರ ಬಿಜೆಪಿ ಕ್ಷೇತ್ರಧ್ಯಕ್ಷರಾದ ಶಂಕರ ಅಂಕದಕಟ್ಟೆ ಸಭಯನ್ನುದ್ಧೇಶಿಸಿ ಮಾತನಾಡಿದರು ಸಭೆಯಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ರವಿ ಅಮೀನ್ ಮಂಗಳೂರು ಸಹ ಪ್ರಭಾರಿ ರಾಜೇಶ್ ಕಾವೇರಿ ಜಿಲ್ಲಾ ಕಾರ್ಯದರ್ಶಿ ಸದಾನಂದ ಬಳ್ಕೂರ್ ಉಪಸ್ಥಿತರಿದ್ದರು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುರೇಶ್ ಶೆಟ್ಟಿ ಗೋಪಾಡಿ ಸ್ವಾಗತಿಸಿ ವಂದಿಸಿದರು