ಕುಂದಾಪುರ : ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿಯೊಬ್ಬರಿಗೆ ಬಹುಕೋಟಿ ವಂಚನೆ ಪ್ರಕರಣವನ್ನು ಎದುರಿಸುತ್ತಿರುವ ಕುಂದಾಪುರದ ನಿವಾಸಿಯಾದ ಚೈತ್ರಾಳನ್ನು ಮಂಗಳವಾರ ಕೋಟ ಪೊಲೀಸರು ವಿಚಾರಣೆಗೆಂದು ಠಾಣೆಗೆ ಕರೆತಂದಿದ್ದಾರೆ ಸುಧೀನ್ ಪೂಜಾರಿ ದಾಖಲಿಸಿದ್ದ 5 ಲಕ್ಷ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಟ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು ಬ್ರಹ್ಮಾವರ ವೃತ್ತ ನಿರೀಕ್ಷಕ ಪರಪ್ಪನ ಅಗ್ರಹಾರದಿಂದ ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿದ್ದಾರೆ
ಎರಡು ದಿನ ಪೊಲೀಸ್ ಕಸ್ಟಡಿಗೆ ಕೇಳಿದ್ದ ಪೊಲೀಸರು ಒಂದೇ ದಿನದಲ್ಲಿ ವಿಚಾರಣೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ಚೈತ್ರಾಳನ್ನು ಬ್ರಹ್ಮಾವರದ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ನ್ಯಾಯಾಲಯ ಸಂಚಾರಿ ಪೀಠದ ನ್ಯಾಯಾಧೀಶ ಶ್ಯಾಮ್ ಪ್ರಕಾಶ್ ಮುಂದೆ ಹಾಜರುಪಡಿಸಿದ್ದಾರೆ
ಸದ್ಯ ಮಂಗಳೂರು ಜೈಲಿಗೆ ಚೈತ್ರಾಳನ್ನು ಪೊಲೀಸ್ ಬಂದೋಬಸ್ತಿನಲ್ಲಿ ಕಳಿಸಲಾಗಿದ್ದು ಇಂದು ಬೆಂಗಳೂರು ಪರಪ್ಪನ ಅಗ್ರಹಾರಕ್ಕೆ ಚೈತ್ರಗಳನ್ನು ಕಳುಹಿಸಿಕೊಡಲಾಗುತ್ತದೆ ಎಂದು ತಿಳಿದು ಬಂದಿದೆ