ಕುಂದಾಪುರ : ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಆಶ್ರಯದಲ್ಲಿ ನಡೆದ ‘ಸಾಧಕರಿಗೆ ಸನ್ಮಾನ’ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ನಿವೃತ್ತ ಸೈನಿಕ ಹಾಗೂ ಸಾಹಿತಿಗಳಾದ ಬೈಂದೂರು ಶ್ರೀ ಚಂದ್ರಶೇಖರ್ ನಾವಡ ಭಾಗವಹಿಸಿ ಮಾತನಾಡಿ ವಿದ್ಯಾರ್ಥಿ ಬದುಕಿನಲ್ಲಿಯೇ ಸಾಧನೆಯ ಹಾದಿಹಿಡಿದ ವಿದ್ಯಾರ್ಥಿಗಳನ್ನು ಶ್ಲಾಘಿಸಿ, ತಮ್ಮ ಸೇನಾ ಅನುಭವವನ್ನು ಹಂಚಿಕೊಂಡರು. ಕಾಲೇಜಿನ ಅಗ್ನಿವೀರ್ ಆಗಿ ಭಾರತೀಯ ರಕ್ಷಣಾ ಪಡೆಗೆ ಆಯ್ಕೆಯಾದ ಪ್ರಜ್ವಲ್ ಶೆಟ್ಟಿ ಕೆರಾಡಿ ತೃತೀಯ ಬಿ.ಕಾಂ. (ಬಿ), ರಾಷ್ಟ್ರಮಟ್ಟದ ಚೆಸ್ ಆಟದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಿದ ದಿವ್ಯಾ ತೃತೀಯ ಬಿ.ಸಿ.ಎ. ಹಾಗೂ ರಾಷ್ಟ್ರಮಟ್ಟದ ದೇಶಭಕ್ತಿಗೀತೆಯಲ್ಲಿ ಪ್ರಥಮ ಸ್ಥಾನಗಳಿಸಿದ ಎನ್.ಎಸ್.ಎಸ್. ಸ್ವಯಂಸೇವಕಿ ಶ್ರೇಯಾ ಖಾರ್ವಿ ಪ್ರಥಮ ಬಿ.ಕಾಂ. (ಬಿ) ಇವರೆಲ್ಲರ ಸಾಧನೆಯನ್ನು ಗೌರವಿಸಲಾಯಿತು.
ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲರಾದ ಪೆÇ್ರ| ಕೆ. ಉಮೇಶ್ ಶೆಟ್ಟಿಯವರು ಅಧ್ಯಕ್ಷತೆ ವಹಿಸಿದ್ದರು. ಉಪಪ್ರಾಂಶುಪಾಲ ಶ್ರೀ ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿ, ಪ್ರಾಸ್ತಾವಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಶ್ರೀ ರಕ್ಷಿತ್ ರಾವ್ ಗುಜ್ಜಾಡಿ ಅತಿಥಿಗಳನ್ನು ಪರಿಚಯಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಶ್ರೀಮತಿ ಪ್ರೀತಿ ಹೆಗ್ಡೆ, ವಿದ್ಯಾರ್ಥಿ ಪ್ರತಿನಿಧಿ ಸ್ಕಂದ ಛಾತ್ರ ಉಪಸ್ಥಿತರಿದ್ದರು.
ವೃತ್ತಿ ಮಾರ್ಗದರ್ಶನ ಘಟಕದ ಅಧಿಕಾರಿ ಶ್ರೀ ಹರೀಶ್ ಕಾಂಚನ್ ವಂದಿಸಿದರು. ಕನ್ನಡ ಉಪನ್ಯಾಸಕಿ ಶ್ರೀಮತಿ ರೇಷ್ಮಾ ಶೆಟ್ಟಿ ನಿರೂಪಿಸಿದರು.