ಉಡುಪಿ : ಪತ್ರಿಕಾ ಮತ್ತು ದೃಶ್ಯ ಮಾಧ್ಯಮ ರಂಗದಲ್ಲಿ ವಿಶೇಷ ಸೇವೆ ಸಲ್ಲಿಸಿರುವ ಜಿಲ್ಲೆಯ ಹಿರಿಯ ಪತ್ರಕರ್ತ, ಪರಿಸರ ಪ್ರೇಮಿ ಶಶಿಧರ್ ಹೆಮ್ಮಣ್ಣ ರವರ ಅಕಾಲಿಕ ನಿಧನಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಕುಂದಪ್ರಭ ಪತ್ರಿಕೆಯ ಮೂಲಕ ವೃತ್ತಿ ಜೀವನ ಪ್ರಾರಂಭಿಸಿದ್ದ ಸರಳ ಸಜ್ಜನಿಕೆಯ ವ್ಯಕ್ತಿತ್ವದ ಹೆಮ್ಮಣ್ಣ ರವರು ಕ್ಷಿತಿಜ ಎಂಬ ವಾರ ಪತ್ರಿಕೆ ಆರಂಭಿಸಿ, ಈಟಿವಿ ಕನ್ನಡ, ಡಿಡಿ ನ್ಯೂಸ್ ವರದಿಗಾರರಾಗಿ, ಕನೆಕ್ಟ್ ಮೀಡಿಯಾ ಸಂಸ್ಥೆಯನ್ನು ಹುಟ್ಟುಹಾಕಿ, ಪರಿಣಾಮಕಾರಿ ಕೃಷಿ ಸಂಬಂಧಿತ ಲೇಖನಗಳ ಸಹಿತ ನೆಲ, ಜಲ, ಪರಿಸರ ಸಂರಕ್ಷಣೆಯ ಕಾಳಜಿಯಿಂದ ಕರಾವಳಿಯಲ್ಲಿ ಕಾಂಡ್ಲಾ ವನ ಯೋಜನೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವುದು ಅವರ ಪರಿಸರ ಪ್ರೇಮಕ್ಕೆ ಜ್ವಲಂತ ಸಾಕ್ಷಿಯಾಗಿದೆ. ಅಗಲಿದ ಅವರ ದಿವ್ಯಾತ್ಮಕ್ಕೆ ಭಗವಂತನು ಚಿರ ಶಾಂತಿಯನ್ನು ಕರುಣಿಸಲಿ ಹಾಗೂ ಕುಟುಂಬಕ್ಕೆ ಅವರ ಆಗಲುವಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ