ಬೆಂಗಳೂರು : ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷರಾಗಿ ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ಬಿ ವೈ ವಿಜೇಂದ್ರ ಅವರನ್ನು ನೇಮಕಗೊಳಿಸಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಿದ್ದಾರೆ
ರಾಜ್ಯ ರಾಜಕೀಯದಲ್ಲಿ ಲಿಂಗಾಯಿತ ವರ್ಗದ ಪ್ರಬಲ ನಾಯಕ ಬಿ ಎಸ್ ಯಡಿಯೂರಪ್ಪ ಅವರ ಪ್ರಭಾವವನ್ನು ಮನಗಂಡ ಭಾರತೀಯ ಜನತಾ ಪಕ್ಷದ ಹೈಕಮಾಂಡ್ ಅವರ ಪುತ್ರ ಯುವ ನಾಯಕ ಬಿ ವೈ ವಿಜೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಿಸಿದೆ ಇದರಿಂದ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ಪೂರಕವಾಗಲಿದೆ ಎಂದು ಬಿಜೆಪಿ ಭಾವಿಸಿದೆ
ನೂತನ ರಾಜ್ಯಾಧ್ಯಕ್ಷರ ಆದೇಶ ಹೊರಬೀಳುತ್ತಿದ್ದಂತೆ ಪಕ್ಷದ ನಾಯಕರು ಮುಖಂಡರು ವಿಜಯೇಂದ್ರ ಅವರಿಗೆ ಅಭಿನಂದನೆ ಸಲ್ಲಿಸಿ ಶುಭ ಕೋರಿದ್ದಾರೆ ಬಿ ವೈ ವಿಜಯೇಂದ್ರ ಅವರು ತಂದೆ ಬಿ ಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಅವರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದಿದ್ದಾರೆ ಅವರಿಗೆ ಬಿ ಎಸ್ ವೈ ಪುತ್ರನಿಗೆ ಸಿಹಿ ತಿನ್ನಿಸಿದರು