ಉಡುಪಿ : ಉಡುಪಿ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ, ಉಡುಪಿ ಎಸ್.ಐ.ಎಸ್ ಅಂಗ್ಲ ಮಾಧ್ಯಮ ಶಾಲೆ, ಕಟಪಾಡಿ ಇವರ ಸಂಯುಕ್ತ ಆಶ್ರಯದಲ್ಲಿ ನಿನ್ನೆ ಎಸ್.ವಿ.ಎಸ್ ಆಂಗ್ಲ ಮಾಧ್ಯಮ ಶಾಲೆ ಕಟಪಾಡಿಯಲ್ಲಿ ಆಯೋಜಿಸಲಾದ “ಉಡುಪಿ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ 2023-24” ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಶಾಸಕರು ಮಾತನಾಡಿ ಸ್ಪರ್ಧೆಯಲ್ಲಿ ಸೋಲು ಗೆಲುವು ಕಟ್ಟಿಟ್ಟ ಬುತ್ತಿ. ಸ್ಪರ್ಧೆಯಲ್ಲಿ ಸೋತರೆ ಚಿಂತಿಸಬೇಡಿ ಆದರೆ ಜೀವನದಲ್ಲಿ ಎಂದಿಗೂ ಸೋಲಬೇಡಿ ಎಂದರು
ಈ ಸಂದರ್ಭದಲ್ಲಿ ಕಟಪಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಸುಗುಣ, ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಅಶೋಕ್ ಕಾಮತ್, ಎಸ್.ವಿ.ಎಸ್ ವಿಧ್ಯಾವರ್ಧಕ ಸಂಘ (ರಿ.) ಕಟಪಾಡಿ ಸಂಚಾಲಕರಾದ ಕೆ. ಸತ್ಯೇಂದ್ರ ಪೈ, ತ್ರಿಶಾ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಸಿ.ಎ ಗೋಪಾಲಕೃಷ್ಣ, ಭಟ್, ಕಟಪಾಡಿ ಎಸ್.ವಿ.ಎಸ್ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಡಾ. ದಯಾನಂದ ಪೈ, ಕಟಪಾಡಿ ಎಸ್.ವಿ.ಎಸ್ ಆಂಗ್ಲ ಮಾಧ್ಯಮ ಶಾಲಾ ಮುಖ್ಯೋಪಾಧ್ಯಾಯರಾದ ದೇವೇಂದ್ರ ನಾಯಕ್,