ಗಂಗೊಳ್ಳಿ : ಗಂಗೊಳ್ಳಿಯಲ್ಲಿ ನಡೆದ ಅಗ್ನಿ ದುರಂತದ ಸ್ಥಳಕ್ಕೆ ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿಯವರು ಭೇಟಿ ನೀಡಿ ಪರಿಶೀಲನೆ ನಡೆಸಿದರು ಸಂಬಂಧಪಟ್ಟ ಇಲಾಖೆಗಳಿಂದ ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡ ಜಿಲ್ಲಾಧಿಕಾರಿಯವರು ಮೀನುಗಾರ ಮುಖಂಡರು ಮತ್ತು ನಷ್ಟಕ್ಕೆ ಒಳಗಾದ ಮಾಲೀಕರ ಜೊತೆ ಚರ್ಚೆ ನಡೆಸಿ ದುರಂತದ ಬಗ್ಗೆ ಬೇಸರ ವ್ಯಕ್ತಪಡಿಸಿದರು ಬಳಿಕ ಮಾತನಾಡಿದ ಅವರು ಸರಕಾರ ಈ ಘಟನೆಯನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ ಮುಖ್ಯಮಂತ್ರಿ ಕಚೇರಿಂದ ಘಟನೆ ಬಗ್ಗೆ ಮಾಹಿತಿ ಕೇಳಿದ್ದು ಸಮಗ್ರ ವರದಿ ಸಲ್ಲಿಸುವಂತೆ ತಿಳಿಸಿದ್ದಾರೆ
ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಮೀನುಗಾರಿಕಾ ಇಲಾಖೆ ಸಚಿವರು ಕೂಡ ದೂರವಾಣಿ ಕರೆ ಮಾಡಿ ಮಾಹಿತಿ ಪಡೆದುಕೊಂಡಿದ್ದು ಮೀನುಗಾರರ ಸಂಕಷ್ಟಕ್ಕೆ ಸ್ಪಂದಿಸುವಂತೆ ಸೂಚಿಸಿದ್ದಾರೆ ಹೀಗಾಗಿ ಇದೊಂದು ವಿಶೇಷ ಪ್ರಕರಣ ಎಂದು ಪರಿಗಣಿಸಿ ಸರಕಾರಕ್ಕೆ ಸಮಗ್ರ ವರದಿ ಸಲ್ಲಿಸಿ ಹೆಚ್ಚಿನ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಪ್ರಯತ್ನಿಸಲಾಗುವುದು ಎಂದು ಅವರು ನುಡಿದರು