ಗಂಗೊಳ್ಳಿ : ಗಂಗೊಳ್ಳಿ ಬೋಟ್ ಅಗ್ನಿ ದುರಂತದಿಂದ ಅಪಾರ ನಷ್ಟವಾಗಿದೆ ಇಲ್ಲಿನ ವಾಸ್ತವ ಸ್ಥಿತಿಯನ್ನು ಸಂಸದರಾದ ಬಿ ವೈ ರಾಘವೇಂದ್ರ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿಕೊಳ್ಳುವ ಪ್ರಯತ್ನ ನಡೆಸಲಾಗಿದೆ ಸರಕಾರದ ಮಟ್ಟದಲ್ಲಿ ಮುಖ್ಯಮಂತ್ರಿಗಳ ಪರಿಹಾರ ನಿಧಿ ಅಥವಾ ಮುಖ್ಯಮಂತ್ರಿಗಳ ವಿವೇಚನ ನಿಧಿಯಿಂದ 10 ಕೋಟಿ ರೂಪಾಯಿ ಪರಿಹಾರವನ್ನು ನೀಡಲು ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ ಎಂದು ಶಾಸಕ ಗುರುರಾಜ್ ಗಂಟಿಹೊಳಿ ತಿಳಿಸಿದರು
ಮುಖ್ಯಮಂತ್ರಿಗಳನ್ನು ಭೇಟಿಯಾದ ನಿಯೋಗದಲ್ಲಿ ಸಂಸದ ಬಿ ವೈ ರಾಘವೇಂದ್ರ ಶಾಸಕ ಗುರುರಾಜ್ ಗಂಟಿಹೊಳಿ ಹಾಗೂ ಬಿಜೆಪಿಯ ಬೈಂದೂರು ಅಧ್ಯಕ್ಷರಾದ ದೀಪಕ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು