Home » ಎಕ್ಸಲೆಂಟ್ ವಿದ್ಯಾ ಸಂಸ್ಥೆ : ಗೋಪೂಜೆ, ತುಳಸಿ ಪೂಜೆ
 

ಎಕ್ಸಲೆಂಟ್ ವಿದ್ಯಾ ಸಂಸ್ಥೆ : ಗೋಪೂಜೆ, ತುಳಸಿ ಪೂಜೆ

by Kundapur Xpress
Spread the love

ಕುಂದಾಪುರ: ಸುಣ್ಣಾರಿಯ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು, ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆ, ಹಾಗೂ ಲಿಟ್ಲ್ ಸ್ಟಾರ್ ಆಂಗ್ಲ ಮಾಧ್ಯಮ ಶಾಲೆ, ಯಡಾಡಿ-ಮತ್ಯಾಡಿ ಇದರ ಸಹಯೋಗದಲ್ಲಿ ಸುಣ್ಣಾರಿಯ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ದೀಪಾವಳಿಯ ಸಾಂಪ್ರದಾಯಿಕ ಆಚರಣೆಗಳಾದ ಗೋಪೂಜೆ, ಬಲೀಂದ್ರ ಕೂಗುವುದು, ತುಳಸಿ ಪೂಜೆ, ಕೃಷಿ ಪರಿಕರ ಮತ್ತು ಸರಸ್ವತಿ ಪೂಜೆಯನ್ನು ಕಾಲೇಜಿನ ಹಾಸ್ಟೆಲ್ ವಿದ್ಯಾರ್ಥಿಗಳೊಂದಿಗೆ ಆಚರಿಸಿಲಾಯಿತು

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಕುಂದ ಕನ್ನಡದ ರಾಯಬಾರಿ, ಗ್ರಾವಿಟಿ ಆಂಗ್ಲಮಾಧ್ಯಮ ಶಾಲೆಯ ಅಧ್ಯಕ್ಷರಾಗಿರುವ ಮನು ಹಂದಾಡಿಯವರು ವಿದ್ಯಾರ್ಥಿಗಳಿಗೆ ದೀಪಾವಳಿ ಸಂದೇಶವನ್ನು ನೀಡುತ್ತಾ ವಿದ್ಯಾರ್ಥಿಗಳಲ್ಲಿ ಭಾರತೀಯ ಸಂಸ್ಕ್ರತಿ ಪರಂಪರೆಯ ಬಗ್ಗೆ ಕಾಳಜಿ ಮತ್ತು ತಿಳುವಳಿಕೆ ಕಡಿಮೆಯಾಗುತ್ತಿದ್ದು ಎಕ್ಸಲೆಂಟ್ ಸಮೂಹ ಸಂಸ್ಥೆ ಹಮ್ಮಿಕೊಂಡಿರುವ ಗೋಪೂಜೆ, ತುಳಸಿ ಪೂಜೆ, ಸರಸ್ವತಿ ಪೂಜೆಯಂತಹ ದೀಪಾವಳಿಯ ಸಾಂಪ್ರದಾಯಿಕ ಪೂಜೆಯು ವಿದ್ಯಾರ್ಥಿಗಳಲ್ಲಿ ನಮ್ಮ ಸಂಸ್ಕ್ರತಿ ಮತ್ತು ಆಚಾರ-ವಿಚಾರಗಳನ್ನು ಉಳಿಸಿ ಬೆಳೆಸಲು ಸಹಕಾರಿಯಾಗಲಿದೆ ಎಂದರು.

ಸಂಸ್ಥೆಯ ಸುಜ್ಞಾನ ಎಜುಕೇಶನಲ್ ಟ್ರಸ್ಟ್‍ನ ಅಧ್ಯಕ್ಷರಾಗಿರುವ ಡಾ. ರಮೇಶ ಶೆಟ್ಟಿ ಮಾತನಾಡುತ್ತಾ ನಮ್ಮ ಹಿರಿಯರು ಆಚರಿಸಿದ ಹಬ್ಬಗಳು, ಆಚರಣೆಗಳ ಮಹತ್ವ ವಿದ್ಯಾರ್ಥಿಗಳಿಗೆ ಸಾರಬೇಕು, ನಮ್ಮ ನಾಡು-ನುಡಿ, ನೆಲೆಯ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವನ್ನು ಮೂಡಿಸಬೇಕು ಎಂಬ ಕಾರಣಕ್ಕಾಗಿ ಈ ಸಂಭ್ರಮಾಚರಣೆಯನ್ನು ಹಮ್ಮಿಕೊಂಡಿದ್ದೇವೆ ಎಂದು ತಿಳಿಸಿದರು

ಸಂಸ್ಥೆಯ ವಿದ್ಯಾರ್ಥಿಗಳು ಮನೆಯವರನ್ನು ಬಿಟ್ಟು ವಿದ್ಯಾಭ್ಯಾಸಕ್ಕಾಗಿ ಹಾಸ್ಟೆಲ್‍ನಲ್ಲಿದ್ದಾರೆ  ಈ ಸಂದರ್ಭದಲ್ಲಿ ಅವರಿಗೆ ಮನೆಯಲ್ಲಿ ಆಚರಿಸುವ ಯಾವುದೇ ಹಬ್ಬಗಳಿಂದ ವಂಚಿತರಾಗಬಾರದು ಎನ್ನುವ ಕಾರಣದಿಂದ ಎಲ್ಲಾ ಹಬ್ಬಗಳನ್ನು ವಿಜೃಂಭಣೆಯಿಂದ ಆಚರಿಸಿ ವಿದ್ಯಾರ್ಥಿಗಳಿಗೆ ಹಬ್ಬದ ಊಟವನ್ನು ಸವಿಯುತ್ತೇವೆ ಎಂದು ಸಂಸ್ಥೆಯ ಖಜಾಂಚಿ ಭರತ್ ಶೆಟ್ಟಿ ತಿಳಿಸಿದರು. ಸಂಸ್ಥೆಯ ಕಾರ್ಯದರ್ಶಿ ಪ್ರತಾಪ್‍ಚಂದ್ರ ಶೆಟ್ಟಿ ಉಪಸ್ಥಿತರಿದ್ದರು ಈ ಸಂದರ್ಭದಲ್ಲಿ ಎಕ್ಸಲೆಂಟ್ ಕಾಲೇಜನ್ನು ತಳಿರು ತೋರಣ ಹಾಗೂ ವಿದ್ಯುತ್‌ ದೀಪಾಲಂಕಾರಗಳಿಂದ ಶೃಂಗಾರಗೊಳಿಸಲಾಗಿತ್ತು

   

Related Articles

error: Content is protected !!