Home » ನವಜಾತ ಶಿಶು ಸಾವಿನ ಪ್ರಕರಣ : ಜಿಲ್ಲಾಧಿಕಾರಿ ಭರವಸೆ
 

ನವಜಾತ ಶಿಶು ಸಾವಿನ ಪ್ರಕರಣ : ಜಿಲ್ಲಾಧಿಕಾರಿ ಭರವಸೆ

ಧರಣಿ ತಾತ್ಕಾಲಿಕ ಅಂತ್ಯ

by Kundapur Xpress
Spread the love

ಕುಂದಾಪುರ : ನಗರದ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದ ನವಜಾತ ಶಿಶು ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ಅಹೋರಾತ್ರಿ ಪ್ರತಿಭಟನೆ ಮಂಗಳವಾರ ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ.

ವೈದ್ಯರ ನಿರ್ಲಕ್ಷದಿಂದಾಗಿ ಮಗು ಸಾವನ್ನಪ್ಪಿದೆ ಎಂದು ಆರೋಪಿಸಿ ಸೋಮವಾರ ಸಂಜೆ ಆಸ್ಪತ್ರೆ ಎದುರು ಜಮಾಯಿಸಿದ ಪೋಷಕರು ಹಾಗೂ ಗ್ರಾಮಸ್ಥರು ಆಕ್ರೋಶ ಹೊರಹಾಕಿದರು. ಸ್ಥಳಕ್ಕೆ ಡಿಎಚ್‍ಓ, ಡಿಸಿ ಬಾರದೇ ಸ್ಥಳ ಬಿಟ್ಟು ಕದಲುವುದಿಲ್ಲ ಎಂದು ಪಟ್ಟು ಹಿಡಿದ ಪ್ರತಿಭಟನಾಕಾರರ ಜೊತೆ ಬೈಂದೂರಿನ ಶಾಸಕ ಗುರುರಾಜ್ ಗಂಟಿಹೊಳೆ ನಿಂತು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು ಉಪವಿಭಾಗಾಧಿಕಾರಿ, ಡಿಎಚ್‍ಓ ಹಾಗೂ ತಹಸೀಲ್ದಾರ್ ಆಗಮಿಸಿ ಪ್ರತಿಭಟನಾನಿರತರ ಮನವೊಲಿಸಲು ಪ್ರಯತ್ನಿಸಿದರೂ ಪಟ್ಟು ಬಿಡದ ಪ್ರತಿಭಟನಾಕಾರರು ಅಹೋರಾತ್ರಿ ಮೌನ ಪ್ರತಿಭಟನೆ ನಡೆಸಿದರು

ಮಂಗಳವಾರ ಬೆಳಿಗ್ಗೆ ಆಸ್ಪತ್ರೆ ಎದುರು ಜಮಾಯಿಸತೊಡಗಿದ ಪ್ರತಿಭಟನಾಕಾರರು ವೈದ್ಯರ ಅಮಾನತಿಗೆ ಆಗ್ರಹಿಸಿದರು. ಸ್ಥಳಕ್ಕಾಗಮಿಸಿದ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ, ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ, ಪ್ರತಿಭಟನಾ ನಿರತರ ಮನವೊಲಿಸುವ ಪ್ರಯತ್ನ ನಡೆಸಿದರು. ಈ ವೇಳೆ ಪ್ರತಿಭಟನಾ ನಿರತರು ಹಾಗೂ ಅಧಿಕಾರಿಗಳ ನಡುವೆ ವಾಗ್ವಾದ ನಡೆಯಿತು. ಶೀಘ್ರವೇ ತಂಡ ರಚಿಸಿ ವಾರದೊಳಗೆ ತಜ್ಞ ವೈದ್ಯರಿಂದ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ದ ಕ್ರಮಕೈಗೊಳ್ಳುವ ಭರವಸೆ ನೀಡಿದ ಬಳಿಕ ಪ್ರತಿಭಟನಾನಿರತರು ತಾತ್ಕಾಲಿಕವಾಗಿ ಪ್ರತಿಭಟನೆಯನ್ನು ಹಿಂಪಡೆದರು

ಈ ಸಂದರ್ಭದಲ್ಲಿ ಕಾಂಗ್ರೇಸ್‌ ಮುಖಂಡ ದಿನೇಶ್‌ ಹೆಗ್ಡೆ ಮೊಳಹಳ್ಳಿ ಗಂಗೊಳ್ಳಿ ಗ್ರಾ.ಪಂ ಅಧ್ಯಕ್ಷ ಶ್ರೀನಿವಾಸ ಖಾರ್ವಿ, ಉಪಾಧ್ಯಕ್ಷೆ ಪ್ರೇಮಾ ಪೂಜಾರಿ, ಸದಸ್ಯರಾದ ಬಸವ ಖಾರ್ವಿ, ನಿರ್ಮಲಾ ಪೂಜಾರಿ, ತಾ.ಪಂ ಮಾಜಿ ಸದಸ್ಯ ಸುರೇಂದ್ರ ಖಾರ್ವಿ, ಗಂಗೊಳ್ಳಿ ಭಾಗದ ಪ್ರಮುಖರಾದ ಯಶವಂತ್ ಗಂಗೊಳ್ಳಿ, ವಾಸುದೇವ ಗಂಗೊಳ್ಳಿ, ನವೀನ್ ಗಂಗೊಳ್ಳಿ, ಸದಾಶಿವ ಕಂಚುಗೋಡು, ಗೋಪಾಲ ಖಾರ್ವಿ ದಾವನಮನೆ, ದಿನೇಶ್ ಖಾರ್ವಿ, ರಾಘವೇಂದ್ರ ಗಾಣಿಗ, ಚಂದ್ರ ಖಾರ್ವಿ ಲೈಟ್ ಹೌಸ್, ಸೂರಜ್ ಖಾರ್ವಿ, ರಾಜು ಖಾರ್ವಿ ಮ್ಯಾಂಗನೀಸ್ ರಸ್ತೆ, ಕುಂದಾಪುರ ಪುರಸಭಾ ಸದಸ್ಯರಾದ ಸಂದೀಪ ಖಾರ್ವಿ, ಚಂದ್ರಶೇಖರ ಖಾರ್ವಿ, ಸಂತೋಷ್ ಶೆಟ್ಟಿ, ರಾಘವೇಂದ್ರ ಖಾರ್ವಿ, ಪ್ರಭಾಕರ ವಿ, ಪ್ರಮುಖರಾದ ಶಂಕರ್ ಅಂಕದಕಟ್ಟೆ, ರಾಜೇಶ್ ಕಾವೇರಿ, ಜಯಾನಂದ ಖಾರ್ವಿ, ಕೇಶವ ಭಟ್, ಪ್ರಕಾಶ್ ಖಾರ್ವಿ, ರತ್ನಾಕರ ಶೇರುಗಾರ್ ಉಪಸ್ಥಿತರಿದ್ದರು.

   

Related Articles

error: Content is protected !!