ನಿನ್ನೆ ಹೊರಬಿದ್ದ ನಾಲ್ಕು ರಾಜ್ಯಗಳ ಚುನವಣಾ ಫಲಿತಾಂಶದಲ್ಲಿ ಭಾರತೀಯ ಜನತಾ ಪಾರ್ಟಿಯು ಜನಾಶೀರ್ವಾದದೊಂದಿಗೆ ಮಧ್ಯಪ್ರದೇಶ, ರಾಜಸ್ತಾನ, ಛತ್ತೀಸಗಢ ರಾಜ್ಯದಲ್ಲಿ ಅಭೂತಪೂರ್ವ ಗೆಲುವು ಸಾಧಿಸಿ ಸ್ಪಷ್ಟ ಬಹುಮತ ಪಡೆದ ಸಲುವಾಗಿ ಕುಂದಾಪುರ ಶಾಸ್ತ್ರೀ ವೃತ್ತದಲ್ಲಿ ಬಿಜೆಪಿ ಕುಂದಾಪುರ ಮಂಡಲ ವತಿಯಿಂದ ಜಯಘೋಷದೊಂದಿಗೆ ಸಿಡಿಮದ್ದು ಸಿಡಿಸಿ ಸಂಭ್ರಮಾಚರಣೆ ನಡೆಸಲಾಯಿತು
ದಕ್ಷಿಣ ಕನ್ನಡ ಜಿಲ್ಲಾ ಸಹ ಪ್ರಭಾರಿ ರಾಜೇಶ್ ಕಾವೇರಿ ಹಾಗೂ ಮಂಡಲ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಹಾಗೂ ಮಂಡಲ ಪಧಾಧಿಕಾರಿಗಳು, ಜನಪ್ರತಿನಿಧಿಗಳು, ಮುಖಂಡರುಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು